ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!

ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್​ನಲ್ಲಿಂದು ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡನೆ ಮಾಡಿದ್ದಾರೆ. ಈ ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ ಲೋಕಾಯುಕ್ತ ವರದಿ ಸಲ್ಲಿಕೆಗೆ ಗಡುವು ಸಹ ವಿಸ್ತರಿಸಿದೆ.

ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಹೈಕೋರ್ಟ್​, ಸಿದ್ದರಾಮಯ್ಯಗೆ ಟೆನ್ಷನ್​ ಟೆನ್ಷನ್!
ಸಾಂದರ್ಭಿಕ ಚಿತ್ರ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on:Jan 27, 2025 | 5:23 PM

ಬೆಂಗಳೂರು, (ಜನವರಿ 27): ಮೈಸೂರಿನ ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣ ಸಂಬಂಧ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ  ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ ಆದೇಶವನ್ನು ಕಾಯ್ದಿರಿಸಿದೆ. ಹಾಗೇ ಲೋಕಾಯುಕ್ತ ಪೊಲೀಸರ ಅಂತಿಮ ವರದಿ ಸಲ್ಲಿಕೆಗೆ ಗಡುವು ವಿಸ್ತರಣೆ ಮಾಡಿದ್ದು, ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಿಸಿದೆ. ಇತ್ತ ಆದೇಶ ಏನು ಬರಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಢವಢವ ಶುರುವಾಗಿದೆ. ಈಗಾಗಲೇ ಇಡಿ ಸಹ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಇದರ ಮಧ್ಯೆ ಕೋರ್ಟ್ ಆದೇಶ ಟೆನ್ಷನ್ ಶುರುವಾಗಿದೆ.

ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಆದ್ರೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.  ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಮಣೀಂದರ್ ಸಿಂಗ್ ವಾದ ಮಂಡನೆ ಮಾಡಿದ್ದರೆ, ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ಈ ವಾದ ಪ್ರತಿವಾದ ಆಲಿಸಿದ ಕೋರ್ಟ್​, ಆದೇಶವನ್ನು ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ವರದಿ ಸಲ್ಲಿಕೆ ಅವಧಿ ಗಡುವು ಸಹ ವಿಸ್ತರಿಸಿದೆ.

ಇದನ್ನೂ ಓದಿ: ಮುಡಾ ಹಗರಣ ತನಿಖೆ ಸಿಬಿಐಗೆ ವಹಿಸಲು ಮನವಿ: ಹೈಕೋರ್ಟ್​ನಲ್ಲಿ ನಡೆದ ಸುದೀರ್ಘ ವಾದ ಪ್ರತಿ ವಾದದ ವಿವರ ಇಲ್ಲಿದೆ

ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಹೇಳಿದ್ದಿಷ್ಟು

ಸ್ನೇಹಮಯಿ ಕೃಷ್ಣ ವಕೀಲರ ತಂಡದ ಲಕ್ಷ್ಮಣ ಕುಲಕರ್ಣಿ ಮಾತನಾಡಿ, ಈಗಾಗಲೇ ಅರ್ಜಿದಾರರ, ಎದುರುದಾರರ ವಾದ ಪೂರ್ಣಗೊಂಡಿದೆ. ನ್ಯಾಯಾಲಯ ಈಗ ತೀರ್ಪು ಕಾಯ್ದಿರಿಸಿದ್ದು, ದಿನಾಂಕ‌ ಕೊಟ್ಟಿಲ್ಲ. ಆದೇಶ ನಮ್ಮ ಪರಿವಾಗಿಯೇ ಬರುತ್ತದೆ. ನಮಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ನಮ್ಮ ಪರವಾಗಿಯೇ ತೀರ್ಪು ಬರುತ್ತದೆ ಎಂದಯ ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲ ವಾದಗಳನ್ನು ನ್ಯಾಯಾಲಯ ಕೂಲಂಕುಷವಾಗಿ ಚರ್ಚೆ ಮಾಡಿದೆ. ಹೈಕೋರ್ಟ್ ಮತ್ತು ಸುಪ್ರಿಂನ ಅನೇಕ ತೀರ್ಪುಗಳ ಪ್ರಸ್ತಾಪವೂ ಆಗಿದೆ. ಹೀಗಾಗಿ ನಮ್ಮ ಪರಿವಾಗಿಯೇ ತೀರ್ಪು ಬರುತ್ತದೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿದೆ.. ಸಿಎಂ ರಾಜೀನಾಮೆ ಕೊಡದೇ ಮುಂದುವರೆದಿದ್ದಾರೆ. ಹೀಗಾಗಿ ಆ ಸಂಸ್ಥೆ ಮೇಲೆ ಸಿಎಂ ಪ್ರಭಾವ ಹೇರುವ ಸಂಭವ ಇದೆ. ಈ ವಿಷಯವನ್ನೂ ನ್ಯಾಯಾಲಯ ಆಲಿಸಿದೆ. ಈ ಎಲ್ಲ ಅಂಶಗಳ ಮೇಲೆ‌ ತೀರ್ಪು ನಮ್ಮ ಪರ ಬರುತ್ತದೆ. ಈ ಪ್ರಕರಣ ಸಂಪೂರ್ಣ ಸಿಬಿಐ ತನಿಖೆಗೆ ಹೋಗುತ್ತದೆ. ಸಿಬಿಐ ತನಿಖೆ ನ್ಯಾಯದ ಪರ ಇರುತ್ತದೆ. ಇದರಿಂದ ನಮಗೆ ಹೆಚ್ಚು ವಿಶ್ವಾಸವಿದೆ ಎಂದರು.

ಕರ್ನಾಟಕ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಮೂಡಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಿರುವುದು ತಿಳಿದುಬಂದಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಇದರ ಮಧ್ಯೆ ಇದೀಗ ವರದಿ ಸಲ್ಲಿಕೆಗೆ ಕೋರ್ಟ್​ ಅವಧಿ ವಿಸ್ತರಿಸಿದೆ.

Published On - 4:19 pm, Mon, 27 January 25

ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ರೈಲಿನಡಿ ಸಿಲುಕುತ್ತಿದ್ದ ವೃದ್ಧರನ್ನು ರಕ್ಷಿಸಿದ ಬಂಗಾಳದ ಕಾನ್‌ಸ್ಟೆಬಲ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಬಾಡಿಗೆ ಮನೆಯಲ್ಲಿದ್ದೇನೆ, ಸಂಭಾವನೆಯಿಂದ ಸಾಲ ತೀರಿಸ್ತೀನಿ: ತ್ರಿವಿಕ್ರಮ್
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ರೇಗುವುದು ಯಾಕೆ?
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಬಿಜೆಪಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಬಹುದೊಡ್ಡ ಪಕ್ಷವಾಗಿ ಬೆಳೆದಿದೆ: ಸಂಸದ
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಹನುಮಂತುಗೆ ಹೊಡೆದರೂ ಭವ್ಯಾನ ಹೊರಗೆ ಹಾಕಲಿಲ್ಲ ಯಾಕೆ? ಮಂಜು ಹೇಳಿದ್ದೇನು?
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ಜಲಮಂಡಳಿ ನಿರ್ವಹಣೆಗೆ ಹಣ ಹೊಂದಿಸಲಾಗುತ್ತಿಲ್ಲ, ದರಯೇರಿಕೆ ಅನಿವಾರ್ಯ: ಸಚಿವ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ವಲಸಿಗರ ವಿಚಾರದಲ್ಲಿ ಭಾರತ ಸೂಕ್ತ ಕ್ರಮ ಕೈಗೊಳ್ಳಲಿದೆ; ಟ್ರಂಪ್ ಹೇಳಿಕೆ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಇಕ್ಬಾಲ್ ಹುಸ್ಸೇನ್ ಹೇಳಿಕೆಗೆ ಕೌಂಟರ್ ನೀಡಿದ ಸಚಿವ ರಾಜಣ್ಣ
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
ಕಾಂಗ್ರೆಸ್ ಪಕ್ಷ ಒಂದು ಸಿಟಿ ಬಸ್​ನಂತೆ, ಯಾರು ಬೇಕಾದರೂ ಹತ್ತಬಹುದು: ಲಾಡ್
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ
150 ರೂ.ಗೆ ಕೆಲಸ ಮಾಡಿದ್ದ ಉಗ್ರಂ ಮಂಜು; ಬಿಗ್ ಬಾಸ್​ನಿಂದ ದೊಡ್ಡ ಸಂಭಾವನೆ