AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿಎಂಗೆ ಹೈಕೋರ್ಟ್​ ನೋಟಿಸ್​, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ

ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿದೆ. ಆದರೆ, ಲೋಕಾಯುಕ್ತ ತನಿಖೆಯಲ್ಲಿ ಅನುಮಾನ ವ್ಯಕ್ತಪಡಿಸಿ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ. ಈ ಸಂಬಂಧ ಸ್ನೇಹಮಯಿ ಕೃಷ್ಣ ಅವರು ಹೈರ್ಕೋರ್ಟ್​ಗೆ ರಿಟ್​ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಇಂದು (ನ.05) ಅರ್ಜಿ ವಿಚಾರಣೆಯನ್ನು ನಡೆಸಿತು.

ಮುಡಾ ಹಗರಣ: ಸಿಎಂಗೆ ಹೈಕೋರ್ಟ್​ ನೋಟಿಸ್​, ನ.26ಕ್ಕೆ ಸಿಬಿಐ ತನಿಖೆ ಭವಿಷ್ಯ
ಸಿದ್ದರಾಮಯ್ಯ, ಹೈಕೋರ್ಟ್​​
Ramesha M
| Edited By: |

Updated on:Nov 05, 2024 | 12:48 PM

Share

ಬೆಂಗಳೂರು, ನವೆಂಬರ್​ 05: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (Muda) ನಡೆದಿದೆ ಎನ್ನಲಾಗಿರುವ ಹಗರಣದ ತನಿಖೆಯನ್ನು ಸಿಬಿಐ (CBI) ನಡೆಸುವಂತೆ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್​ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ (High Court)​​ ನವೆಂಬರ್​ 26ಕ್ಕೆ ಮುಂದೂಡಿದೆ. ಪ್ರಕರಣ ಸಂಬಂಧ ನಡೆದ ತನಿಖೆಯ ವರದಿಯನ್ನು ನವೆಂಬರ್​​ 26ರ ಒಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.

ಸಿಬಿಐ, ಲೋಕಾಯುಕ್ತ ಪೊಲೀಸರು, ಪ್ರಕರಣದ ಎ1 ಸಿಎಂ ಸಿದ್ದರಾಮಯ್ಯ ಮತ್ತು ಎ2 ಪಾರ್ವತಿ ಅವರಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಅವಕಾಶ ನೀಡಿದೆ. ಸ್ನೇಹಪ್ರಿಯ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ.ರಾಘವನ್ ವಾದಮಂಡನೆ ಮಾಡಿದರು. ಮತ್ತು ಲೋಕಾಯುಕ್ತ ಪರವಾಗಿ ರಾಜ್ಯ ಅಭಿಯೋಜಕ ಬಿ.ಎನ್. ಜಗದೀಶ್ ವಾದ ಮಂಡಿಸಿದರು.

ಇದನ್ನೂ ಓದಿ: ಮುಡಾ ಹಗರಣ: ನವೆಂಬರ್ 6 ರಂದು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುವುದು ಅನುಮಾನ, ಕಾರಣ ಇಲ್ಲಿದೆ

ವಾದ-ಪ್ರತಿವಾದ

ಕೆ.ಜಿ.ರಾಘವನ್: ಸಿಬಿಐ ತನಿಖೆಗೆ ಕೋರಿದ್ದೇವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ನ್ಯಾ. ಎಂ.ನಾಗಪ್ರಸನ್ನ: ಲೋಕಾಯುಕ್ತ ಪೊಲೀಸರು ತನಿಖೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಕೆ.ಜಿ.ರಾಘವನ್: ಸಾರ್ವಜನಿಕರ ನಂಬಿಕೆ ಉಳಿಯುವಂತೆ ತನಿಖೆ ಮಾಡಬೇಕಿದೆ ಎಂದು ವಾದ ಮಂಡಿಸಿದರು.

ಬಿ.ಎನ್. ಜಗದೀಶ್: ಎರಡು ವಾರ ಕಾಲಾವಕಾಶ ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್​ 26ಕ್ಕೆ ಮುಂದೂಡಿದೆ.

ವಿಚಾರಣೆಯಲ್ಲಿ ಲೋಕಾಯುಕ್ತ ಪೊಲೀಸ್, ಸಿಬಿಐ, ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಪ್ರತಿವಾದಿಗಳಾಗಿದ್ದಾರೆ. ಒಂದು ವೇಳೆ ನ್ಯಾಯಾಲಯ ಸಿಬಿಐ ತನಿಖೆಗೆ ಆದೇಶಿಸಿದರೆ ಲೋಕಾಯುಕ್ತರ ತನಿಖೆ ಸ್ಥಗಿತಗೊಳ್ಳಲಿದೆ. ಆಗ, ಮುಡಾ ಕೇಸ್​​ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸಿಬಿಐ ತನಿಖೆ ಭೀತಿ ಎದುರಾಗಲಿದೆ. ಹೀಗಾಗಿ, ನ್ಯಾಯಾಲಯ ಲೋಕಾಯುಕ್ತ ಪೊಲೀಸರ ವಾದ ಆಲಿಸಿದೆ.

ಅಲ್ಲದೇ, ರಾಜ್ಯದಲ್ಲಿ ಸಿಬಿಐ ತನಿಖಗೆ ನೀಡಲಾಗಿರುವ ಮುಕ್ತ ಒಪ್ಪಿಗೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.ಕ್ರಿಮಿನಲ್​ ಪ್ರಕರಣಗಳಲ್ಲಿ ಸಿಬಿಐ ತನಿಖೆಗೆ ಒಪ್ಪಿಗೆ ನೀಡಲು ಅನುವು ಮಾಡಿಕೊಡುವ ದೆಹಲಿ ವಿಶೇಷ ಪೊಲೀಸ್​ ಸ್ಥಾಪನೆ ಕಾಯಿದೆ, 1946ರ ಅಡಿಯಲ್ಲಿನ ಅಧಿಸೂಚನೆಯನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Tue, 5 November 24

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ