AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಅಕ್ರಮ: ಸಿದ್ದರಾಮಯ್ಯ ಪತ್ನಿಗೆ ನೀಡಿದ್ದೆನ್ನಲಾದ ಜಮೀನಿನ ವಿವರ, ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ನೀಡುವ ವಿಚಾರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿ, ಆ ಜಮೀನಿನ ಸಂಪೂರ್ಣ ಮಾಹಿತಿ ‘ಟಿವಿ9’ಗೆ ಲಭ್ಯವಾಗಿದೆ. ಆ ವಿವರ ಹಾಗೂ ಇಡೀ ಪ್ರಕರಣದ ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ.

ಮುಡಾ ಅಕ್ರಮ: ಸಿದ್ದರಾಮಯ್ಯ ಪತ್ನಿಗೆ ನೀಡಿದ್ದೆನ್ನಲಾದ ಜಮೀನಿನ ವಿವರ, ಪ್ರಕರಣದ ಸಂಪೂರ್ಣ ಟೈಮ್​ಲೈನ್ ಇಲ್ಲಿದೆ
ಸಿದ್ದರಾಮಯ್ಯ
ರಾಮ್​, ಮೈಸೂರು
| Edited By: |

Updated on:Jul 06, 2024 | 11:02 AM

Share

ಬೆಂಗಳೂರು, ಜುಲೈ 6: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದ ಪ್ರತಿಪಕ್ಷ ಬಿಜೆಪಿ ಸಿಎಂ ಸಿದ್ದರಾಮಯ್ಯರನ್ನು ಗುರಿಯಾಗಿಸಿಕೊಂಡು ತೀವ್ರ ವಾಗ್ದಾಳಿ ನಡೆಸುತ್ತಿದೆ. ಮತ್ತೊಂದೆಡೆ ಸಿದ್ದರಾಮಯ್ಯ ರಾಜೀನಾಮೆಗೂ ಆಗ್ರಹ ವ್ಯಕ್ತವಾಗಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷದವರೇ ಹಗರಣವನ್ನು ಬಯಲಿಗೆಳೆದಿದ್ದಾರೆ. ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಿಂದಲೇ ಈ ಕೃತ್ಯ ನಡೆದಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪರೋಕ್ಷವಾಗಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ, ಸಿಎಂ ಪತ್ನಿಗೆ ಹಂಚಿಕೆ ಮಾಡಲಾಗಿದೆ ಎಂಬ ನಿವೇಶನದ ಕುರಿತ ಸಂಪೂರ್ಣ ಮಾಹಿತಿ ‘ಟಿವಿ9’ಗೆ ದೊರೆತಿದೆ.

ಪ್ರಕರಣದ ಸಂಪೂರ್ಣ ಮಾಹಿತಿ ಮತ್ತು ಟೈಮ್ ಲೈನ್ ಇಲ್ಲಿದೆ.

  1. ಕೆಸರೆ ಸರ್ವೇ ನಂ 462ನಲ್ಲಿ 3.16 ಎಕರೆ ಜಮೀನು
  2. 1992ರಲ್ಲಿ ಮುಡಾದಿಂದ ಜಮೀನು ವಶದ ಪ್ರಕ್ರಿಯೆ ಆರಂಭ
  3. 1997 ರಲ್ಲಿ ಜಮೀನು ಸ್ವಾಧೀನಕ್ಕೆ ಪಡೆದು ವಶಪಡಿಸಿಕೊಂಡ ಮುಡಾ
  4. 1998ರಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಟ್ಟ ಮುಡಾ
  5. 2003ರಲ್ಲಿ ಮೂಲ ಖಾತೆದಾರನ ಹೆಸರಿಗೆ ಜಮೀನು
  6. 2004ರಲ್ಲಿ ಜಮೀನು ಖರೀದಿ‌ ಮಾಡಿದ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ ಮಲ್ಲಿಕಾರ್ಜುನ ಸ್ವಾಮಿ
  7. 2005ರಲ್ಲಿ ಕೃಷಿ ಭೂಮಿಯಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆ
  8. 2010ಕ್ಕೆ ಮಲ್ಲಿಕಾರ್ಜುನ ಸ್ವಾಮಿಯಿಂದ ಸಿದ್ದರಾಮಯ್ಯ ಪತ್ನಿಗೆ ದಾನದ ಮೂಲಕ ಜಮೀನು
  9. 2014ರಲ್ಲಿ ನಮ್ಮ ಜಮೀನು ಮುಡಾ ಬಳಸಿಕೊಂಡಿದೆ ಎಂದು ಪಾರ್ವತಿಯಿಂದ ಮುಡಾಗೆ ದೂರು
  10. 2014ರಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ವಿಚಾರ ಮಂಡನೆ
  11. ‌2017ರಲ್ಲಿ ಈ ಸಂಬಂಧ ತನಿಖೆಗೆ ಆದೇಶ
  12. 2017ರಲ್ಲಿ 15 ದಿನದ ತನಿಖೆ ನಡೆಸಿ‌ ಪರಿಹಾರದ ಭೂಮಿ ನೀಡಲು‌ ನಿರ್ಧಾರ
  13. 2018ರಲ್ಲಿ ಈ‌ ಬಗ್ಗೆ ಪ್ರಕ್ರಿಯೆ ಆರಂಭ
  14. 2018ರಲ್ಲಿ ಪ್ರಕ್ರಿಯೆ ಪೂರ್ಣ
  15. 2020ರಲ್ಲಿ ವಿಜಯನಗರ ಮೂರನೇ ಹಂತದಲ್ಲಿ ಬದಲಿ‌ ನಿವೇಶನ ನೀಡಲು ತೀರ್ಮಾನ
  16. 2021ಕ್ಕೆ ಪಾರ್ವತಿ ಅವರಿಗೆ ಬದಲಿ‌ ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ

ಇದನ್ನೂ ಓದಿ: ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಅಷ್ಟು ಹಣವನ್ನು ಮುಡಾ ನಮಗೆ ಕೊಡಲಿ, ಸೈಟು ಬೇಡ: ಸಿದ್ದರಾಮಯ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:10 am, Sat, 6 July 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?