ಸಿದ್ದರಾಮಯ್ಯ ಕೊರಳಿಗೆ ಸುತ್ತಿಕೊಂಡ ಮುಡಾ ಹಗರಣ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

| Updated By: ಗಂಗಾಧರ​ ಬ. ಸಾಬೋಜಿ

Updated on: Jul 10, 2024 | 9:39 PM

ಮುಡಾ ಸೈಟ್ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಮಹಾ ಕಂಪನವನ್ನೇ ಸೃಷ್ಟಿಸಿದೆ. ಇದೀಗ ಚುನಾವಣಾ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ದೂರು ನೀಡಿದ್ದಾರೆ. ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ಕೂಡ ದೂರು ದಾಖಲಾಗಿತ್ತು.

ಸಿದ್ದರಾಮಯ್ಯ ಕೊರಳಿಗೆ ಸುತ್ತಿಕೊಂಡ ಮುಡಾ ಹಗರಣ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಸಿದ್ದರಾಮಯ್ಯ ಕೊರಳಿಗೆ ಸುತ್ತಿಕೊಂಡ ಮುಡಾ ಹಗರಣ: ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
Follow us on

ಬೆಂಗಳೂರು, ಜುಲೈ 10: ಮುಡಾ (Muda) ಸೈಟ್ ಹಂಚಿಕೆ ವಿವಾದ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದೆ.  ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿತ್ತು. ಇದೀಗ ಚುನಾವಣಾ ಆಯೋಗಕ್ಕೆ ಸಿದ್ದರಾಮಯ್ಯ ವಿರುದ್ಧ ಹೋರಾಟಗಾರ ಟಿಜೆ ಅಬ್ರಹಾಂ ದೂರು ನೀಡಿದ್ದಾರೆ. ಕೃಷಿ ಜಮೀನಿನ ಬಗ್ಗೆ ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಪತ್ನಿ ಹೆಸರಲ್ಲಿರುವ 3.16 ಎಕರೆ ಜಮೀನು ಬಗ್ಗೆ ಮಾಹಿತಿ ಮುಚ್ಚಿಟ್ಟ ಆರೋಪ ಮಾಡಿದ್ದಾರೆ.

2013ರ ಚುನಾವಣಾ ಅಫಿಡವಿಟ್​ನಲ್ಲಿ ದಾಖಲೆಗಳು ಸಲ್ಲಿಕೆ ಆಗಿಲ್ಲ. ಸಿದ್ದರಾಮಯ್ಯ ಗಮನದಲ್ಲಿದ್ದೂ ಕೂಡ ಕೃಷಿ ಜಮೀನಿನ ವಿವರಗಳನ್ನು ಮುಚ್ಚಿ ಇಡಲಾಗಿದೆ. ಉದ್ದೇಶ ಪೂರ್ವಕವಾಗಿ ಕಲಂ ಖಾಲಿ ಬಿಟ್ಟಿದ್ದಾರೆ ಎಂದು ದೂರು ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ಜನತಾ ಪ್ರಾತಿನಿಧ್ಯ ಕಾಯ್ದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲ್ಲ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ

ಇನ್ನು ಇತ್ತೀಚೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಬೆಲೆ ನಿವೇಶನ ಪಡೆದ ಆರೋಪದಲ್ಲಿ ಸಿದ್ದರಾಮಯ್ಯ ಸೇರಿದಂತೆ ಇಡೀ ಕುಟುಂಬದ ವಿರುದ್ಧ ಮೈಸೂರಿನ ವಿಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮುಡಾ ಸೈಟ್ ಹಂಚಿಕೆ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ಮುಡಾ ವಿವಾದ ಇಟ್ಟುಕೊಂಡು ಬಿಜೆಪಿ ಸಿಎಂ ಸಿದ್ದರಾಮಯ್ಯರ ಮೇಲೆ ನೇರವಾಗಿ ಮುಗಿಬೀಳುತ್ತಿದ್ದಾರೆ. ಬಿಜೆಪಿ ನಾಯಕರಿಗೆ ದಿನಕ್ಕೊಂದು ಅಸ್ತ್ರ ಕೈಗೆ ಸಿಗ್ತಿದೆ. ವಿಧಾನ ಮಂಡಲ ಅಧಿವೇಶನಕ್ಕೆ 5 ದಿನ ಮಾತ್ರವಷ್ಟೇ ಬಾಕಿ ಉಳಿದಿದ್ದು, ಕೇಸರಿ ಪಾಳಯ ತನ್ನ ದಾಳಿಯನ್ನ ಮತ್ತಷ್ಟು ಚುರುಕುಗೊಳಿಸಿದೆ.

ಇದನ್ನೂ ಓದಿ: ವಾಲ್ಮೀಕಿ ಹಗರಣ: ಇಡಿ ಸುಳಿಯಲ್ಲಿ ಸಿಲುಕಿರುವ ಬಸನಗೌಡ ದದ್ದಲ್, ನಾಗೇಂದ್ರಗೆ ಎಸ್​ಐಟಿ ಶಾಕ್

ಜುಲೈ 12ರಂದು ಮೈಸೂರಿನ ಮುಡಾ ಕಚೇರಿಗೆ ಮುತ್ತಿಗೆ ಹಾಕೋದಕ್ಕೆ ಬಿಜೆಪಿ ನಾಯಕರು ಸಜ್ಜಾಗಿದ್ದು, ಸದನ ಒಳಗೂ ಅಬ್ಬರಿಸೋದಾಗಿ ಹೇಳಿಕೊಳ್ತಿದ್ದಾರೆ. ಈ ನಡುವೆ ಬಿಜೆಪಿಯ ಎಲ್ಲ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ವಿಜಯೇಂದ್ರಗೆ ಸಿಎಂ ತಿರುಗೇಟು

ಪ್ರಕರಣ ಹೊರಬಂದ ದಿನದಿಂದ ಬಿಜೆಪಿ ನಾಯಕರು ಪ್ರಕರಣವನ್ನ ಸಿಬಿಐಗೆ ಕೊಡುವಂತೆ ಆಗ್ರಹ ಮಾಡ್ತಿದ್ದಾರೆ. ಬಿ.ವೈ ವಿಜಯೇಂದ್ರ ಕೂಡ ಪ್ರಾಮಾಣಿಕರಾದ್ರೆ ಸಿಬಿಐ ತನಿಖೆಗೆ ಕೊಡ್ಲಿ ಅಂತಾ ಸವಾಲು ಹಾಕಿದ್ರು. ಈ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಯಾವುದಾದ್ರು ಕೇಸ್ ಸಿಬಿಐಗೆ ಕೊಟ್ಟಿದ್ದಾರಾ? ಅಂತಾ ಮರು ಪ್ರಶ್ನೆ ಮಾಡಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:15 pm, Wed, 10 July 24