ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ

ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಮುಡಾ ನಿವೇಶನಗಳನ್ನು ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದಾರೆ. ಇದಕ್ಕೆ ಕಾರಣವೇನು? ಸಿದ್ದರಾಮಯ್ಯ ಅಂಜಿಕೊಳ್ಳಲು ಕಾರಣವಾದ ಕಾರಣವಾದ ಪಿಎಂಎಲ್​ಎ ಅಡಿಯಲ್ಲಿ ಬರುವ ಆ ಸೆಕ್ಷನ್ ಯಾವುದು? ಇಲ್ಲಿದೆ ವಿವರ.

ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ
ಸಿದ್ದರಾಮಯ್ಯImage Credit source: PTI
Follow us
Prajwal Kumar NY
| Updated By: Ganapathi Sharma

Updated on: Oct 02, 2024 | 11:02 AM

ಬೆಂಗಳೂರು, ಅಕ್ಟೋಬರ್ 2: ಮುಡಾ ಹಗರಣ ಸಂಬಂಧ ತಮಗೆ ಯಾವುದೇ ಭಯವಿಲ್ಲ. ಕಾನೂನು ಹೋರಾಟಕ್ಕೆ ಸದಾ ಸಿದ್ಧ. ಅದನ್ನೇ ಮಾಡಲುತ್ತೇನೆಯೇ ವಿಹಃ ರಾಜೀನಾಮೆ ಕೊಡುವುದೇ ಇಲ್ಲ ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ 14 ಮುಡಾ ನಿವೇಶನಗಳನ್ನು ವಾಪಸ್ ಮಾಡುವುದಾಗಿ ಪತ್ರ ಬರೆದಿದ್ದಾರೆ. ಇದು ಪ್ರಕರಣಕ್ಕೆ ದೊಡ್ಡ ತಿರುವು ನೀಡಿದೆ. ಪ್ರತಿಪಕ್ಷಗಳ (ಬಿಜೆಪಿ, ಜೆಡಿಎಸ್) ದ್ವೇಷದ ರಾಜಕಾರಣ, ಕೇಂದ್ರ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರಗಳ ಮೇಲೆ ಬಿಜೆಪಿ ನಡೆಸುತ್ತಿರುವ ದಾಳಿಯಿಂದ ಮನನೊಂದು ಅವರು ಸೈಟ್ ವಾಪಸ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪ್ರತಿಪಾದಿಸುತ್ತಿದ್ದಾರೆ.

ಆದರೆ, ಸಿದ್ದರಾಮಯ್ಯ ಪತ್ನಿ ಸೈಟ್​ಗಳನ್ನು ವಾಪಸ್ ನೀಡಲು ಮನ ಮಾಡಲು ಜಾರಿ ನಿರ್ದೇಶನಾಲಯ 2003ರ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಿರುವುದೇ ಕಾರಣ ಎನ್ನಲಾಗಿದೆ.

ಸಿಎಂ ವಿರುದ್ಧ ಇಡಿ ದಾಖಲಿಸುರುವ ಇಸಿಐಆರ್​ನಲ್ಲಿ ಪಿಎಂಎಲ್​ಎ ಕಾಯ್ದೆಯ ಸೆಕ್ಷನ್​ 15 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸೆಕ್ಷನ್​ಗೆ ಇರುವ ಮಹತ್ವ ಹಾಗೂ ಅದರ ಪರಿಣಾಮಗಳನ್ನು ಅರಿತೇ ಸಿಎಂ ಪತ್ನಿ ಸೈಟ್​​ ವಾಪಸ್ ಕೊಡಲು ಮನ ಮಾಡಿದ್ದು ಎನ್ನಲಾಗುತ್ತಿದೆ.

ಪಿಎಂಎಲ್​ಎ ಕಾಯ್ದೆ ಸೆಕ್ಷನ್​ 15 ರ ಮಹತ್ವ ಏನು?

ಈ ಸೆಕ್ಷನ್ ಅಡಿ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಇದಕ್ಕೆ ಯಾವುದೇ ನ್ಯಾಯಾಲಯದ ಅದೇಶ ಪಡೆಯಬೇಕು ಎಂಬ ನಿಯಮ ಕೂಡ ಇಲ್ಲ. ಸಂಬಂಧಪಟ್ಟ ಆಸ್ತಿಗಾಗಿ ಮನಿಲಾಂಡ್ರಿಂಗ್ (ಹಣಕಾಸು ಅಕ್ರಮ ವರ್ಗಾವಣೆ) ನಡೆದಿದೆ ಎಂದು ತನಿಖಾಧಿಕಾರಿಗೆ ಅನಿಸಿದರೆ 180 ದಿನಗಳವರೆಗೂ ಆಸ್ತಿಯನ್ನ ಮುಟ್ಟಗೋಲು ಹಾಕಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಸೈಟ್ ವಾಪಸ್ ಕೊಟ್ಟರೆ ಸಿದ್ದರಾಮಯ್ಯ ಸಂಕಷ್ಟ ಕಡಿಮೆಯಾಗುತ್ತಾ? ಕಾನೂನು ತಜ್ಞರು ಹೇಳಿದ್ದಿಷ್ಟು

ಹೀಗಾಗಿ, ಒಂದು ವೇಳೆ ಸಿಎಂ ಪತ್ನಿ ಈ ಸೈಟ್​ಗಳನ್ನು ವಾಪಸ್ ಕೊಡದೇ ಇದ್ದಲ್ಲಿ ಜಾರಿ ನಿರ್ದೇಶನಾಲಯ ಯಾವುದೇ ಕ್ಷಣದಲ್ಲಿ ಮುಟ್ಟಗೋಲು ಹಾಕಿಕೊಳ್ಳುವ ಸಾಧ್ಯತೆ ಇದೆ. ಸೈಟ್​ಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡರೆ ಸಿದ್ದರಾಮಯ್ಯಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇತ್ತು. ಇದಕ್ಕಾಗಿಯೇ ಕೂಡಲೆ ಸೈಟ್​​​ಗಳನ್ನು ವಾಪಸ್ ಕೊಡುವ ನಿರ್ಧಾರ ಮಾಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ