ಮುಡಾ ಹಗರಣದ ಮತ್ತಷ್ಟು ದಾಖಲೆ ಕೇಳಿದ ಇಡಿ: ಸಿಎಂಗೆ ಟೆನ್ಷನ್​ ಟೆನ್ಷನ್

ಮುಡಾದಲ್ಲಿ 14 ಬದಲಿ ನಿವೇಶನಗಳ ದಾಖಲೆಗಳು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದ ಆರ್​ಟಿಐ ಕಾರ್ಯಕರ್ತ ಗಂಗರಾಜುಗೆ ಇಡಿ ನೋಟಿಸ್ ನೀಡಿದೆ. ನಾಳೆ ಬೆಂಗಳೂರಿನ ಇಡಿ ಕಚೇರಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಇಡಿ ಕೇಳುವ ಎಲ್ಲಾ ದಾಖಲೆ ಕೊಡಲು ನಾನು‌ ಸಿದ್ಧ ಎಂದು ಗಂಗರಾಜು ಹೇಳಿದ್ದಾರೆ. ಸದ್ಯ ಇಡಿ ಮತ್ತಷ್ಟು ದಾಖಲೆ ಕೇಳಿದ್ದು, ಇತ್ತ ಸಿಎಂಗೆ ಟೆನ್ಷನ್​ ಶುರುವಾಗಿದೆ.

ಮುಡಾ ಹಗರಣದ ಮತ್ತಷ್ಟು ದಾಖಲೆ ಕೇಳಿದ ಇಡಿ: ಸಿಎಂಗೆ ಟೆನ್ಷನ್​ ಟೆನ್ಷನ್
ಮುಡಾ ಹಗರಣದ ಮತ್ತಷ್ಟು ದಾಖಲೆ ಕೇಳಿದ ಇಡಿ: ಸಿಎಂಗೆ ಟೆನ್ಷನ್​ ಟೆನ್ಷನ್
Follow us
ರಾಮ್​, ಮೈಸೂರು
| Updated By: ಗಂಗಾಧರ​ ಬ. ಸಾಬೋಜಿ

Updated on:Oct 27, 2024 | 3:45 PM

ಮೈಸೂರು, ಅಕ್ಟೋಬರ್​ 27: ಮುಡಾದಲ್ಲಿ (muda) 14 ಬದಲಿ ನಿವೇಶನಗಳ ದಾಖಲೆ ನಾಪತ್ತೆ ಬಗ್ಗೆ ದೂರು ನೀಡಿದ್ದ ಆರ್​​ಟಿಐ ಕಾರ್ಯಕರ್ತ ಗಂಗರಾಜುಗೆ ಇಡಿ ನೋಟಿಸ್​ ನೀಡಿದೆ. ಅಗತ್ಯ ದಾಖಲೆ ಜೊತೆ ನಾಳೆ ಬೆಂಗಳೂರಿನ ಇಡಿ ಕಚೇರಿಗೆ ಬರಲು ಸೂಚಿಸಲಾಗಿದೆ. ಆದರೆ ಯಾವ ವಿಚಾರಕ್ಕೆ ನೋಟಿಸ್ ಎಂಬುದರ ಬಗ್ಗೆ ಇಡಿ ಮಾಹಿತಿ ನೀಡಿಲ್ಲ. ಹೀಗಾಗಿ ಇಡಿ ಅಧಿಕಾರಿಗಳ ನಡೆ ಕುತೂಹಲ ಮೂಡಿಸಿದೆ.

ಇಡಿ ಕೇಳುವ ಎಲ್ಲಾ ದಾಖಲೆ ಕೊಡಲು ನಾನು‌ ಸಿದ್ಧ: ಗಂಗರಾಜು 

ಇಡಿ ಅಧಿಕಾರಿಗಳಿಂದ ನೋಟಿಸ್​ ಜಾರಿ ವಿಚಾರವಾಗಿ ನಗರದಲ್ಲಿ ಟಿವಿ9 ಜೊತೆಗೆ ಗಂಗರಾಜು ಮಾತನಾಡಿದ್ದು, ಇಡಿ ನನಗೆ ಸಮನ್ಸ್ ನೀಡಿದ್ದಾರೆ, ಆದರೆ ಯಾವ ಪ್ರಕರಣ ಗೊತ್ತಿಲ್ಲ. ನಾನು ಸಾಕಷ್ಟು ವಿಚಾರವಾಗಿ ಹೋರಾಟ ಮಾಡಿದ್ದೇನೆ. ಮುಡಾದಲ್ಲಿ ಹಲವಾರು ದಾಖಲೆ ನಾಪತ್ತೆಯಾಗಿವೆ. ಇಡಿ ಕೇಳುವ ಎಲ್ಲಾ ದಾಖಲೆ ಕೊಡಲು ನಾನು‌ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: ರಾಜ್ಯಪಾಲರಿಗೆ ದೂರು ನೀಡಲು ಆರ್​ಟಿಐ ಕಾರ್ಯಕರ್ತ ಸಿದ್ಧತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ 20 ಗುಂಟೆ ಜಾಗ ಖರೀದಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಹಿನಕಲ್​ ನಿವೇಶನ ಹಂಚಿಕೆ ಅಕ್ರಮ ಸೇರಿ ಹಲವು ದೂರು ನೀಡಿದ್ದೆ. ಈ ಹಿನ್ನೆಲೆಯಲ್ಲಿ ಇಡಿ ಸಮನ್ಸ್ ನೀಡಿರಬಹುದು.  ಲೋಕಾಯುಕ್ತ ಅಧಿಕಾರಿಗಳು ಸೀಮಿತವಾಗಿ ತನಿಖೆ ಮಾಡುತ್ತಿದ್ದಾರೆ. ಇಡಿಯಿಂದ ಮಾತ್ರ ಸಮಗ್ರ ತನಿಖೆ ಸಾಧ್ಯ. ಈ ಹಿನ್ನೆಲೆಯಲ್ಲಿ ಇಡಿ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ನನ್ನ ಬಳಿ ಸಾಕಷ್ಟು ದಾಖಲೆಗಳಿವೆ. ಎಲ್ಲವನ್ನೂ ಇಡಿಗೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಪತ್ನಿ ವಿಚಾರಣೆ ನಡೆಸಿದ ಲೋಕಾಯುಕ್ತ: ಮಹತ್ವ ಪಡೆದುಕೊಂಡ ಪಾರ್ವತಿ ಹೇಳಿಕೆ

ಇನ್ನು ಇತ್ತೀಚೆಗೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ವಿಚಾರಣೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ಬಂದಿದ್ದ ಪಾರ್ವತಿಯವರು, ಮೂರು ಗಂಟೆಗಳ ಕಾಲ ವಿಚಾರಣೆ ಎದುರಿಸಿ, ಹೇಳಿಕೆ ದಾಖಲಿಸಿ ತೆರಳಿದ್ದರು. ಆ ಮೂಲಕ ಲೋಕಾಯುಕ್ತ ಪೊಲೀಸರು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿರೋದು, ಪಾರ್ವತಿಯವರ ವಿಚಾರಣೆ ನಡೆಸಿರೋದು ಮಹತ್ವ ಪಡೆದುಕೊಂಡಿದೆ. ಈವರೆಗೆ A2ಪಾರ್ವತಿ, A3 ಮಲ್ಲಿಕಾರ್ಜುನಸ್ವಾಮಿ, A4 ದೇವರಾಜು ವಿಚಾರಣೆ ನಡೆಸಲಾಗಿದ್ದು, ಪ್ರಕರಣ A1 ಸಿದ್ದರಾಮಯ್ಯ ವಿಚಾರಣೆ ಮಾತ್ರ ಬಾಕಿ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:44 pm, Sun, 27 October 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ