ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯಗೆ ಆತಂಕ
ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಬಿಲ್ಡರ್ ಬಳಿಕ ಈಗ ಮುಡಾ ಮಾಜಿ ಆಯುಕ್ತರ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ.
ಬೆಂಗಳೂರು/ಮೈಸೂರು, (ಅಕ್ಟೋಬರ್ 28): ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಪ್ರಕಟಣದಲ್ಲಿ ಇಡಿ ಅಧಿಕಾರಿಗಳು ಪ್ರವೇಶಿಸಿದೆ. ಈಗಾಗಲೇ ಹಲವರಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆ ಹಾಕುತ್ತಿದೆ. ಇದರ ನಡುವೆ, ಇಡಿ ಅಧಿಕಾರಿಗಳು ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇತ್ತ ಪ್ರಕರಣ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವಾಗ ಇಡಿ ದಾಳಿ ಆಗುತ್ತೋ ಎನ್ನುವ ಆತಂಕದಲ್ಲಿದ್ದಾರೆ.
ಇಂದು(ಅಕ್ಟೋಬರ್ 28) ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಬಿಲ್ಡರ್ ಎನ್. ಮಂಜುನಾಥ್ ಮನೆ ಮೇಲೆ ಇಡಿ ದಾಳಿ ಮಾಡಿದೆ. ಇದರ ಜೊತೆಗೆ ಈಗ ಬೆಂಗಳೂರಿನ ಮಲ್ಲೇಶ್ವರಂನ 10ನೇ ಕ್ರಾಸ್ನಲ್ಲಿರುವ ಮುಡಾ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೂ ಸಹ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಟೇಶ್ ಮನೆಯಲ್ಲೇ ಇದ್ದ ಸಂದರ್ಭದಲ್ಲಿ ಐವರು ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೂ ಹಬ್ಬಿದ ಮುಡಾ ಜಾಲ: ಬಿಲ್ಡರ್ ಮನೆ ಮೇಲೆ ಇಡಿ ದಾಳಿ
ಮುಡಾ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದೂರುದಾರರಿಗೆ ನೋಟಿಸ್ ನೀಡಿ ಮಾಹಿತಿ ಕಲೆಹಾಕುವುದರ ಜೊತೆಗೆ ಅಧಿಕಾರಿಗಳ ಜನ್ಮಜಾಲಾಡುತ್ತಿದ್ದಾರೆ. ಮುಡಾದಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ದಾಳಿ ಮಾಡಿ ದಾಖಲೆ ಪರಿಶೀಲನೆಗೆ ಮುಂದಾಗಿದೆ. ಇದರಿಂದ ಮುಡಾ ಹಗರಣ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ಸಹ ಯಾವ ಸಂದರ್ಭದಲ್ಲಿ ಇಡಿ ದಾಳಿ ಮಾಡುತ್ತೋ ಎನ್ನುವ ಆತಂಕ ಶುರುವಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ