AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿದ್ದರಾಮಯ್ಯ ಪರಮಾಪ್ತನ ಮನೆ ಮೇಲೂ ಇಡಿ ದಾಳಿ, ಮುಂದಿನ ಟಾರ್ಗೆಟ್ ಯಾರು?

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆಗೆ ಚುರುಕುಗೊಳಿಸಿದ್ದಾರೆ. ಮುಡಾ ಮಾಜಿ ಅಯುಕ್ತರ ಮನೆಗಳ ಮೇಲೆ ಇಡಿ ದಾಳಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತನ ಮನೆ ಮೇಲೆ ದಾಳಿ ಮಾಡಿದೆ.

ಮುಡಾ ಹಗರಣ: ಸಿದ್ದರಾಮಯ್ಯ ಪರಮಾಪ್ತನ ಮನೆ ಮೇಲೂ ಇಡಿ ದಾಳಿ, ಮುಂದಿನ ಟಾರ್ಗೆಟ್ ಯಾರು?
ದಿಲೀಪ್​, ಚೌಡಹಳ್ಳಿ
| Edited By: |

Updated on:Oct 30, 2024 | 11:31 AM

Share

ಮೈಸೂರು/ಬೆಂಗಳೂರು, (ಅಕ್ಟೋಬರ್ 28): ಮುಡಾ ಹಗರಣ ಪ್ರಕರಣಕ್ಕೆ ಇಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತರ ಮನೆಗಳ ಮೇಲೆ ದಾಳಿ ನಡೆಸಿದೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಪ್ತ ರಾಕೇಶ್ ಪಾಪಣ್ಣ ಮನೆ ಮೇಲೂ ಸಹ ದಾಳಿಯಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಸಿಎಂ ಸಿದ್ದರಾಮಯ್ಯ ಆಪ್ತರಾಗಿರುವ  ರಾಕೇಶ್ ಪಾಪಣ್ಣ ಅವರ ಮೈಸೂರಿನ ಹಿನ್‌ಕಲ್ ಗ್ರಾಮದಲ್ಲಿನ ಮನೆ ಮೇಲೆ ಇಡಿ ದಾಳಿ ಮಾಡಿದೆ. 50-50 ನಿಯಮದಲ್ಲಿ 20ಕ್ಕೂ ಹೆಚ್ಚು ಮುಡಾ ಸೈಟ್​ ಪಡೆದಿದ್ದ ಆರೋಪ ರಾಕೇಶ್ ಪಾಪಣ್ಣ ಅವರ ವಿರುದ್ಧ ಕೇಳಿಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದು, ರಾಕೇಶ್ ಪಾಪಣ್ಣ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಮುಡಾ 50-50 ಹಗರಣದಲ್ಲಿ ಕೇಳಿ ಬಂದಿದ್ದ ರಾಕೇಶ್ ಪಾಪಣ್ಣ ಹೆಸರು ಕೇಳಿಬಂದಿತ್ತು. 50-50 ನಿಯಮದಲ್ಲಿ 20ಕ್ಕೂ ಹೆಚ್ಚು ನಿವೇಶನಗಳನ್ನು ಪಡೆದಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿಬಂದಿದ್ದವು. ಅಲ್ಲದೇ ವಿಜಯನಗರ ಎರಡನೇ ಹಂತದಲ್ಲಿ ಸಿದ್ದರಾಮಯ್ಯ ಪಡೆದ ನಿವೇಶದ ವಿಚಾರದಲ್ಲೂ ಪಾಪಣ್ಣ ಕುಟುಂಬದ ಹೆಸರು ಕೇಳಿ ಬಂದಿತ್ತು. ಸಿದ್ದರಾಮಯ್ಯ ಅವರು ಪಾಪಣ್ಣ ಕುಟುಂಬದಿಂದ 10 ಗುಂಟೆ ಜಾಗ ಪಡೆದು ಮನೆ ಕಟ್ಟಿದ್ದರು. ಈ ವಿಚಾರದಲ್ಲಿ ಅಕ್ರಮ ಆರೋಪ ಕೇಳಿ ಬಂದಿತ್ತು. ನಂತರ ಸಿದ್ದರಾಮಯ್ಯನವರು ಆ ಮನೆ ಮಾರಾಟ ಮಾಡಿದ್ದು, ಸದ್ಯ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿದೆ.

ಇದನ್ನೂ ಓದಿ: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯಗೆ ಆತಂಕ

ಈ ಎಲ್ಲಾ ಆರೋಪಗಳು ಕೇಳಿಬಂದಿದ್ದರಿಂದ ಇಂದು (ಅಕ್ಟೋಬರ್ 28) ಇಡಿ ಅಧಿಕಾರಿಗಳು ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಈ ಬಗ್ಗೆ ರಾಕೇಶ್ ಪಾಪಣ್ಣ ಅವರ ಬಳಿಯೂ ಮಾಹಿತಿ ಕಲೆಹಾಕುತ್ತಿದ್ದಾರೆ.

ಮುಡಾ ಮಾಜಿ ಆಯುಕ್ತರುಗಳ ಮನೆ ಮೇಲೆ ದಾಳಿ

ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ಇಡಿ ಅಧಿಕಾರಿಗಗಳು ದಾಳಿ ಮಾಡುವ ಮುನ್ನ ಮುಡಾದ ಮಾಜಿ ಆಯುಕ್ತರುಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ.  ಬೆಂಗಳೂರಿನ ಜೆ.ಪಿ‌.ನಗರದಲ್ಲಿರುವ ಬಿಲ್ಡರ್​ ಎನ್​. ಮಂಜುನಾಥ್​ ಮನೆ ಮೇಲೆ ದಾಳಿ ಮಾಡಿದೆ. ಬಳಿಕ ಮುಡಾ ಮಾಜಿ ಆಯುಕ್ತ ನಟೇಶ್ ಮನೆ ಮೇಲೆ ಸಹ ಇಡಿ ದಾಳಿಯಾಗಿದ್ದು, ಇದೀಗ ಮತ್ತೋರ್ವ ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಮನೆ ಮೇಲೂ ದಾಳಿಯಾಗಿದೆ.

ಜಿ.ಟಿ.ದಿನೇಶ್ ಕುಮಾರ್ ಅವರ ಹೆಬ್ಬಾಳದ ಬಾಣಸವಾಡಿ ರಸ್ತೆಯಲ್ಲಿರುವ ದೀಪಿಕಾ ರಾಯಲ್ ಅಪಾರ್ಟ್​ಮೆಂಟ್​ ಮೇಲೆ ದಾಳಿ ಮಾಡಲಾಗಿದೆ. ಬೆಳಗ್ಗೆ ದಾಳಿ ಮಾಡಿದಾಗ ದಿನೇಶ್ ಕುಮಾರ್ ಎಸ್ಕೇಪ್ ಆಗಿದ್ದರು. ಬೆಳಗ್ಗೆ ವಾಕಿಂಗ್ ಹೋಗಿದ್ದಾಗ ದಾಳಿ ಮಾಡಿದ್ದರು. ಆದ್ರೆ, ಇಡಿ ದಾಳಿಯ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಹಾಗೇ ದಿನೇಶ್​​ ಗಯಾಬ್ ಆಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:27 pm, Mon, 28 October 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ