ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇ ಎನ್ನಲೇಬೇಕು ಸಿದ್ದರಾಮಯ್ಯನವರೇ: ಹೀಗೆಂದಿದ್ದೇಕೆ ಕುಮಾರಸ್ವಾಮಿ!

ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಹಿಂದೆ ಸಿದ್ದರಾಮಯ್ಯ ಅವರೇ ಲೋಕಾಯುಕ್ತಕ್ಕೆ ಸಮಾಧಿ ಕಟ್ಟಿದ್ದರು. ಇಂದು ಅದೇ ಲೋಕಾಯುಕ್ತ ಮುಡಾ ಹಗರಣದಿಂದ ಬಚಾವಾಗಲು ಗುರಾಣಿಯಂತೆ ಸಿದ್ದರಾಮಯ್ಯಗೆ ಬೇಕಾಗಿ ಬಂದಿದೆ ಎಂದು ಅವರು ಟೀಕಿಸಿದ್ದಾರೆ.

ನಿಮ್ಮ ‘ಸಿದ್ವಿಲಾಸ'ಕ್ಕೆ ಉಘೇ ಎನ್ನಲೇಬೇಕು ಸಿದ್ದರಾಮಯ್ಯನವರೇ: ಹೀಗೆಂದಿದ್ದೇಕೆ ಕುಮಾರಸ್ವಾಮಿ!
ಸಿದ್ದರಾಮಯ್ಯ & ಕುಮಾರಸ್ವಾಮಿ
Follow us
Ganapathi Sharma
|

Updated on:Sep 27, 2024 | 8:08 AM

ಬೆಂಗಳೂರು, ಸೆಪ್ಟೆಂಬರ್ 27: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಸಿಎಂ ಹೆದರಿದ್ದಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ಫೇಸ್​​ಬುಕ್​ನಲ್ಲಿ ವ್ಯಂಗ್ಯವಾಗಿ ಸಂದೇಶ ಪ್ರಕಟಿಸಿರುವ ಕುಮಾರಸ್ವಾಮಿ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ ಎಂದಿದ್ದಾರೆ.

ಕುಮಾರಸ್ವಾಮಿ ಪೋಸ್ಟ್​ನಲ್ಲೇನಿದೆ?

‘‘ಶ್ರೀಮಾನ್ ಸಿದ್ದರಾಮಯ್ಯನವರೇ, ನಿಮ್ಮ ‘ಸಿದ್ವಿಲಾಸ’ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮುಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ! Karma Hit back ಎಂದರೇ ಇದೇ ಅಲ್ಲವೇ Siddaramaiah ನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ‘ಸಿದ್ದಾಪರಾಧ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ! ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ?’’ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಪೋಸ್ಟ್​

ಮುಡಾ ಹಗರಣದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ತನಿಖೆಗೆ ಒಳಪಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ಈಗಾಗಲೇ ಆದೇಶ ಪ್ರಕಟಿಸಿವೆ. ಇದರ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಿಸುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: ಮುಡಾ ಹಗರಣ: ಇಂದು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು ಸಾಧ್ಯತೆ

ಮತ್ತೊಂದೆಡೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ, ಎಲ್ಲವನ್ನು ಕಾನೂನು ರೀತಿಯಲ್ಲೇ ಎದುರಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಮತ್ತೆ ಮತ್ತೆ ದೃಢಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:07 am, Fri, 27 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ