AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್, ಯಾರು ಏನು ಹೇಳಿದ್ರು? ಇಲ್ಲಿದೆ ವಿವರ

ರಾಜ್ಯಪಾಲರಿಂದ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಕಾಂಗ್ರೆಸ್​ ಶಾಸಕರು ತೀವ್ರ ವಿರೋಧಿಸುತ್ತಿದೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಮುಂದೆ ಪರೇಡ್​ಗೆ ಶಾಸಕರು ಸಲಹೆ ಕೊಟ್ಟಿದ್ದಾರೆ. ಅಷ್ಟೆ ಅಲ್ಲದೇ ಇಂದು ದೆಹಲಿಗೆ ತೆರಳಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ. ಸದ್ಯ ಹೈಕಮಾಂಡ್ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಸಭೆ ಬಳಿಕ ಯಾರು ಏನು ಹೇಳಿದ್ರು? ಇಲ್ಲಿದೆ ವಿವರ.

ಮುಡಾ ಹಗರಣ: ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್, ಯಾರು ಏನು ಹೇಳಿದ್ರು? ಇಲ್ಲಿದೆ ವಿವರ
ಕಾಂಗ್ರೆಸ್ ನಾಯಕರ ಸಭೆ
ಹರೀಶ್ ಜಿ.ಆರ್​.
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 23, 2024 | 7:45 PM

Share

ದೆಹಲಿ, ಬೆಂಗಳೂರು, ಆಗಸ್ಟ್​​ 23: ಮುಡಾ ಹಗರಣ (muda scam) ಸಂಬಂಧ ಹೈಕಮಾಂಡ್​ ಬುಲಾವ್ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರೆ ರಾಜ್ಯ ನಾಯಕರು, ದೆಹಲಿಗೆ ತೆರಳಿ ಮಾತುಕತೆ ನಡೆಸಿದರು. ಈ ವೇಳೆ ಪ್ರಸಕ್ತ ಕರ್ನಾಟಕ ರಾಜ್ಯ ರಾಜಕಾರಣದ ಬಗ್ಗೆ ಹೈಕಮಾಂಡ್​ ನಾಯಕರ ಮುಂದೆ ವಿವರಿಸಿದ್ದಾರೆ. ಅಲ್ಲದೇ ಮುಡಾ ಹಗರಣದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಸಂಪೂರ್ಣ ವಿವರ ನೀಡಿದ್ದಾರೆ.

ರಾಜ್ಯಪಾಲರ ನಡೆ ಅಸಾಂವಿಧಾನಿಕ: ಸಿಎಂ ಸಿದ್ದರಾಮಯ್ಯ

ಸಭೆ ಬಳಿಕ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹೈಕಮಾಂಡ್ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ಹೈಕಮಾಂಡ್​ಗೆ ರಾಜ್ಯದ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದೇವೆ. ನಮಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ರಾಜ್ಯಪಾಲರ ನಡೆ ಅಸಾಂವಿಧಾನಿಕವಾಗಿದೆ ಎಂದು ಹೇಳಿದ್ದಾರೆ.

ಇಡೀ ಪಕ್ಷ ಸಿಎಂ ಜೊತೆ ನಿಲ್ಲುತ್ತೆ: ಡಿ.ಕೆ.ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್​ ಪ್ರತಿಕ್ರಿಯಿಸಿ, ರಾಜ್ಯಪಾಲರ ಮೂಲಕ ಸರ್ಕಾರವನ್ನು ಅಭದ್ರಗೊಳಿಸುವ ಯತ್ನಿಸಲಾಗುತ್ತಿದೆ. ಇಡೀ ಪಕ್ಷ ಸಿಎಂ ಜೊತೆ ನಿಲ್ಲುತ್ತೆ. ನಿಮ್ಮ ಜೊತೆ ನಾವು ನಿಲ್ಲುತ್ತೇವೆ ಎಂದು ಹೈಕಮಾಂಡ್ ಭರವಸೆ ನೀಡಿದೆ. ಎಲ್ಲಾ ವಿಚಾರಗಳನ್ನು ಹೈಕಮಾಂಡ್‌ಗೆ ಮನದಟ್ಟು ಮಾಡಿದ್ದೇವೆ. ಇದು ಸಿಎಂ ವಿರುದ್ಧದ ದಾಳಿಯಲ್ಲ, ಗ್ಯಾರಂಟಿ ವಿರುದ್ಧದ ದಾಳಿ. ನಾವೆಲ್ಲಾ ಒಟ್ಟಾಗಿ ಸಿಎಂ ಜೊತೆ ಇದ್ದೇವೆ, ಇಡೀ ಪಕ್ಷ ಸಿಎಂ ಜೊತೆಯಿದೆ ಎಂದಿದ್ದಾರೆ.

ಇದು ಸಿಎಂ, ಡಿಸಿಎಂ ಮೇಲಿನ ದಾಳಿಯಲ್ಲ, ಗ್ಯಾರಂಟಿಗಳ ಮೇಲಿನ ದಾಳಿ: ಸುರ್ಜೇವಾಲ

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸಚಿವ ರಣದೀಪ್ ಸುರ್ಜೇವಾಲ ಮಾತನಾಡಿ, ಕರ್ನಾಟಕದಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಕರ್ನಾಟಕ ಗವರ್ನರ್ ಬಿಜೆಪಿ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಸೇರಿದ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೀತಿದೆ. ಬಿಜೆಪಿ, ಜೆಡಿಎಸ್​ ನಾಯಕರು ಹೇಳಿದಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್​ನ ಎಲ್ಲಾ ನಾಯಕರು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ಇದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಕುರ್ಚಿಗೆ ಕಂಟಕ: ಯಾದಗಿರಿಯ ಮಹಾದೇವಪ್ಪ ಪೂಜಾರಿ ಭವಿಷ್ಯ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಕ್ಷಪಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು, ಕಾರ್ಯಕರ್ತರ ವಿರುದ್ಧ ಕುತಂತ್ರ ನಡೀತಿದೆ. ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ನಿಲ್ಲುತ್ತೇವೆ. ಹಿಂದುಳಿದ ಸಮುದಾಯದ ನಾಯಕನೆಂಬ ಕಾರಣಕ್ಕೆ ದಾಳಿ ನಡೀತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಮಹತ್ವದ ನಿರ್ಣಯ ಕೈಗೊಂಡ ಸಚಿವ ಸಂಪುಟ ಸಭೆ: ಬಿಜೆಪಿ, ಜೆಡಿಎಸ್​ ನಾಯಕರಿಗೆ ಸಂಕಷ್ಟ

ಕರ್ನಾಟಕ ರಾಜ್ಯಪಾಲರು ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಮೇಲೆ ಬಿಜೆಪಿ ದಾಳಿ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ನೀಡುವುದನ್ನು ವಿಪಕ್ಷಗಳು ಸಹಿಸುತ್ತಿಲ್ಲ. ಕಳೆದ ಒಂದು ವರ್ಷದಿಂದ ಗ್ಯಾರಂಟಿಗಳ ಮೇಲೆ ದಾಳಿ ನಡೆಯುತ್ತಿದೆ. SC, ST, ಒಬಿಸಿ ಸಮುದಾಯಕ್ಕೆ ಗ್ಯಾರಂಟಿ ನೀಡುವುದನ್ನು ಸಹಿಸುತ್ತಿಲ್ಲ. ಇದು ಸಿಎಂ, ಡಿಸಿಎಂ ಮೇಲಿನ ದಾಳಿಯಲ್ಲ, ಗ್ಯಾರಂಟಿಗಳ ಮೇಲಿನ ದಾಳಿ. ಕೇಂದ್ರ ಅಥವಾ ಬಿಜೆಪಿ ಏನೇ ಮಾಡಿದ್ರೂ ಗ್ಯಾರಂಟಿ ಮುಂದುವರಿಸುತ್ತೇವೆ. ಜನತಾ ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.