ಸಿಎಂ ಪರಿಷ್ಕೃತ ಪ್ರವಾಸ ಪಟ್ಟಿ ಬಿಡುಗಡೆ: ಲೋಕಾಯುಕ್ತ ವಿಚಾರಣೆಗೆ ಹಾಜರಾಗುವುದು ಖಚಿತ

ಮುಡಾ ಹಗರಣದಲ್ಲಿ ಕೊನೆಗೂ ಪ್ರಮುಖ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ವಿಚಾರಣೆಗೆ ಲೋಕಾಯುಕ್ತ ಮುಂದಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ನೋಟಿಸ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪರಿಷ್ಕೃತ ಪ್ರವಾಸ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಸಿದ್ದರಾಮಯ್ಯನವರ ಮೈಸೂರು ಲೋಕಾಯುಕ್ತ ಮುಂದೆ ಹಾಜರಾಗುವುದು ಖಚಿತವಾಗಿದೆ. ಇನ್ನು ಸಿಎಂ ಪ್ರವಾಸ ವೇಳಾಪಟ್ಟಿ ವಿವರ ಇಲ್ಲಿದೆ.

ಸಿಎಂ ಪರಿಷ್ಕೃತ ಪ್ರವಾಸ ಪಟ್ಟಿ ಬಿಡುಗಡೆ: ಲೋಕಾಯುಕ್ತ ವಿಚಾರಣೆಗೆ ಹಾಜರಾಗುವುದು ಖಚಿತ
ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 05, 2024 | 5:25 PM

ಬೆಂಗಳೂರು/ಮೈಸೂರು, (ನವೆಂಬರ್ 05): ಮುಡಾ ಹಗರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಿದ್ದಾರೆ. ಮತ್ತೊಂದೆಡೆ, ಉಪಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಿಎಂ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದರು. ಆದಾಗ್ಯೂ, ಅವರು ವಿಚಾರಣೆಗೆ ಹಾಜರಾಗುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಕಾರಣ ನವೆಂಬರ್ 6ರಂದು ಮುಖ್ಯಮಂತ್ರಿಗಳ ದಿನಚರಿಯಲ್ಲಿ ಮೈಸೂರು ಪ್ರವಾಸ ನಮೂದಿಸಿಲ್ಲ. ಹೀಗಾಗಿ ವಿಚಾರಣೆಗೆ ಹಾಜರಾಗುವುದು ಅನುಮಾನವಾಗಿತ್ತು. ಆದ್ರೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರ ಪರಿಷ್ಕೃತ ಪ್ರವಾಸ ಪಟ್ಟಿ ಬಿಡುಗಡೆಯಾಗಿದ್ದು, ಲೋಕಾಯುಕ್ತ ವಿಚಾರಣೆಗೆ ಹಾಜರಾಗುವುದು ಖಚಿತವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ(ನವೆಂಬರ್ 05) ಬೆಳಗ್ಗೆ 9.30ಕ್ಕೆ ಮೈಸೂರಿಗೆ ಭೇಟಿ ನೀಡುವುದಾಗಿ ಪರಿಷ್ಕೃತ ಪ್ರವಾಸ ಪಟ್ಟಿಯಲ್ಲಿ ನಮೂದಿಸಲಾಗಿದೆ. ಆದ್ರೆ, ವಿಚಾರಣೆಗೆ ಹಾಜರಾಗುವುದಾಗಿ ಪ್ರವಾಸ ಪಟ್ಟಿಯಲ್ಲಿ ನಮೂದಿಸಿಲ್ಲ. ಬದಲಾಗಿ ಎರಡೂವರೆ ತಾಸನ್ನು ವಿಚಾರಣೆಗೆ ಮೀಸಲಿರಿಸಿದ್ದಾರೆ. ಬೆಳಗ್ಗೆ 9.30ರಿಂದ 12 ಗಂಟೆವರೆಗೆ ಮೈಸೂರಿನಲ್ಲಿ ಇರಲಿದ್ದಾರೆ. ಈ ಮೂಲಕ ಲೋಕಯುಕ್ತ ವಿಚಾರಣೆಗೆ ಸಮಯವನ್ನ ನಿಗದಿ ಮಾಡಿಕೊಂಡಿದ್ದಾರೆ. ನಂತರ 12 ಗಂಟೆಗೆ ಮೈಸೂರಿನಿಂದ ಚನ್ನಪಟ್ಟಣ ಉಪಚುನಾವಣೆ ಪ್ರಚಾರಕ್ಕೆ ತೆರಳಲಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ನವೆಂಬರ್ 6 ರಂದು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗುವುದು ಅನುಮಾನ, ಕಾರಣ ಇಲ್ಲಿದೆ

 ಸಿಎಂ ನಾಳಿನ ದಿನಚರಿ ಪಟ್ಟಿ ಹೀಗಿದೆ

ಇನ್ನು ಸಿಎಂ ಸಿದ್ದರಾಮಯ್ಯನವರ ನಾಳಿನ ಪ್ರವಾಸ ವೇಳಾಪಟ್ಟಿ ಹೇಗಿದೆ ಎನ್ನುವುದನ್ನು ನೋಡುವುದಾದರೆ, ನಾಳೆ ಬೆಳಗ್ಗೆ 7.30ಕ್ಕೆ ಬೆಂಗಳೂರಿಂದ‌ ರಸ್ತೆ ಮೂಲಕ ಮೈಸೂರಿಗೆ ಪ್ರಯಾಣ ಬೆಳಸಲಿದ್ದು, ಮಧ್ಯಾಹ್ನ 12 ಗಂಟೆವರೆಗೆ ಮೀಸಲಿರಿಸಿದ್ದಾರೆ. ಬಳಿಕ 12 ನಂತರ ಮೈಸೂರಿನಿಂದ ರಸ್ತೆ ಮೂಲಕ ಚನ್ನಪಟ್ಟಣಕ್ಕೆ ಪ್ರಯಾಣ ಬೆಳಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಚನ್ನಪಟ್ಟಣದ ಬೇವೂರು ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್​ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ. ರಾ 9 ಗಂಟೆಯವರೆಗೂ ಚನ್ನಪಟ್ಟಣದಲ್ಲೇ ಇರಲಿರುವ ಸಿಎಂ ಸಿದ್ದರಾಮಯ್ಯ, 9 ಗಂಟೆಗೆ ಚನ್ನಪಟ್ಟಣದಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ