ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ

ಮುಡಾ ಹಗರಣದಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಸೇರಬೇಕಿದ್ದು, ಕಾನೂನಾತ್ಮಕವಾಗಿ ಎದುರಿಸುವ ನಿಟ್ಟಿನಲ್ಲಿ ಸಮಾಲೋಚನೆ ಆರಂಭಿಸಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ, ಕಾನೂನು ಸಮಾಲೋಚನೆಯಲ್ಲಿ ಸಿಎಂ
ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ
Follow us
Anil Kalkere
| Updated By: Ganapathi Sharma

Updated on:Aug 17, 2024 | 10:52 AM

ಬೆಂಗಳೂರು, ಆಗಸ್ಟ್ 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.

ಸದ್ಯ ಕಾವೇರಿ ನಿವಾಸದಲ್ಲೇ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ದಟ್ಟವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಅವರು ಸಮಾಲೋಚಿಸುತ್ತಿದ್ದಾರೆ.

ಸದ್ಯ, ರಾಜ್ಯಪಾಲರ ಆದೇಶದ ಅಧಿಕೃತ ಪ್ರತಿ ತಲುಪಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ನಿರ್ಧಿರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಕೆಲವು ದಿನಗಳ ಹಿಂದೆ ಕೂಡ ಕಾನೂನು ತಜ್ಞರ ಜತೆ ಸಿಎಂ ಸಮಾಲೋಚನೆ ನಡೆಸಿದ್ದರು.

ಪ್ರಾಸಿಕ್ಯೂಷನ್​ಗೆ ಅನುಮತಿ: ಯಾರಿಗೆಲ್ಲ ನೋಟಿಸ್?

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್​, ಎಸಿಎಸ್​ ಅತೀಕ್​ಗೆ ನೋಟಿಸ್​ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್​​​ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿ ತೆರಳಿದ್ದಾರೆ.

ಕಾಂಗ್ರೆಸ್ ನಾಯಕರಿಂದ ವಾಗ್ದಾಳಿ

ಮತ್ತೊಂದೆಡೆ, ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ, ಯಾವ ರೀತಿಯಲ್ಲಿ ಗವರ್ನರ್​ ‌ಅನುಮತಿ ಕೊಟ್ಟಿದ್ದಾರೆಂದು ಗೊತ್ತಿಲ್ಲ. ಕಾನೂನು ಹೋರಾಟ ಮಾಡುತ್ತೇವೆ. ಕೇಂದ್ರದಿಂದ ರಾಜ್ಯಪಾಲ ಗೆಹ್ಲೋಟ್ ಅವರಿಗೆ ಒತ್ತಡ ಇತ್ತು. ಸಿಎಂ ಸಿದ್ದರಾಮಯ್ಯ ಮೌಖಿಕವಾಗಿ, ಪತ್ರ ವ್ಯವಹಾರ ಮಾಡಿಲ್ಲ. ಈ ಬಗ್ಗೆ ‌ನಾವು ರಾಜ್ಯಪಾಲರಿಗೆ ಉತ್ತರ ಕೊಟ್ಟಿದ್ದೆವು. ನಾವು ಶೋಕಾಸ್ ನೋಟಿಸ್​ಗೆ ಎಳೆ ಎಳೆಯಾಗಿ ಉತ್ತರ ಕೊಟ್ಟಿದ್ದೆವು. ಆದರೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ಕೊಟ್ಟಿದ್ದಾರೆ. ರಾಜ್ಯಪಾಲರ ಕಚೇರಿ ದುರ್ಬಳಕೆ ಆಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್: ಸಿಎಂ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?

ಶೋಕಾಸ್​ ನೋಟಿಸ್​ ಕೊಟ್ಟಾಗಲೇ ಇದು ಷಡ್ಯಂತ್ರ ಎಂಬುದು ಗೊತ್ತಾಯ್ತು. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂದು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ. ಬಿಜೆಪಿಯವರು ಸಂವಿಧಾನ ಬಾಹಿರ ಕೆಲಸ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ಎಂದು ದೆಹಲಿಯಲ್ಲಿ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ವಾಗ್ದಾಳಿ ನಡೆಸಿದ್ದಾರೆ. ಸೈಟ್ ಹಂಚಿಕೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆಗಿದ್ದಲ್ಲ. 20 ವರ್ಷಗಳ ಹಿಂದೆ ನಡೆದಿರುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:19 am, Sat, 17 August 24

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್