HC Verdict on CM Siddaramaiah: ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಪ್ರಕಟಿಸಿದ್ದು, ಸಿದ್ದರಾಮಯ್ಯಗೆ ಬಿಗ್ ಶಾಕ್ ನೀಡಿದೆ. ಹೈಕೋರ್ಟ್ ನೀಡಿದ ಮಹತ್ವದ ಆದೇಶದಲ್ಲಿ ಏನು ಹೇಳಲಾಗಿದೆ ಎಂಬದು ಇಲ್ಲಿದೆ.

HC Verdict on CM Siddaramaiah: ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು
ಮುಡಾ ಹಗರಣ: ಹೈಕೋರ್ಟ್ ಮಹತ್ವದ ತೀರ್ಪು
Follow us
Ramesha M
| Updated By: Ganapathi Sharma

Updated on:Sep 24, 2024 | 1:06 PM

ಬೆಂಗಳೂರು, ಸೆಪ್ಟೆಂಬರ್​​ 24: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಹೈಕೋರ್ಟ್ ತೀರ್ಪಿನಲ್ಲೇನಿದೆ?

ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ ಸಮರ್ಪಕವಾಗಿದೆ. ಸಿಎಂ ಸಲ್ಲಿಸಿರುವ ಅರ್ಜಿ ವಜಾಗೊಳಿಸಿ ಆದೇಶಿಸಲಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನ ತಿರಸ್ಕರಿಸಲಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್​​, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.

ನಡೆದಿತ್ತು ಸುದೀರ್ಘ ವಾದ – ಪ್ರತಿವಾದ

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

ಸಿದ್ದರಾಮಯ್ಯ ಪರ ವಕೀಲರ ವಾದ ಏನಿತ್ತು?

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಪಾತ್ರವೇನಿತ್ತೆಂಬುದನ್ನು ರಾಜ್ಯಪಾಲರು ತಿಳಿಸಿಲ್ಲ ಎಂದು ಸಿಎಂ ಪರ ವಕೀಲರು ವಾದ ಮಂಡನೆ ಮಾಡಿದ್ದರು. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಎಂದು ಹೇಳಿಲ್ಲ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲಷ್ಟೇ ಬಳಸಬೇಕು. ಹಾಗೆ ಬಳಸಿದಾಗ ಅದಕ್ಕೆ ಕಾರಣಗಳನ್ನು ನೀಡಬೇಕು. ಆದರೆ ಪ್ರಕ್ರಿಯೆ ಪಾಲಿಸದೇ ತರಾತುರಿಯಲ್ಲಿ ಆದೇಶ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅನುಮತಿ ನೀಡಬಹುದೇ ಹೊರತು, ಖಾಸಗಿ ವ್ಯಕ್ತಿಗಳಿಗೆ ನೀಡುವಂತಿಲ್ಲ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ಒಪ್ಪಬೇಕಿತ್ತು. ಏಕೆ ಒಪ್ಪಿಲ್ಲವೆಂಬುದಕ್ಕೆ ರಾಜ್ಯಪಾಲರು ಸೂಕ್ತ ಕಾರಣ ನೀಡಿಲ್ಲ. ಬಿಜೆಪಿ, ಜೆಡಿಎಸ್ ನಾಯಕ ವಿರುದ್ಧದ ದೂರಿಗೆ ಅನುಮತಿ ನೀಡದೇ ಸಿದ್ದರಾಮಯ್ಯ ವಿರುದ್ಧ ಮಾತ್ರ ಅನುಮತಿ ನೀಡಿ ತಾರತಮ್ಯ ನೀತಿ ಅನುಸರಿಸಿದ್ದಾರೆ. ದೂರುದಾರರ ಹಿನ್ನೆಲೆ ಪರಿಗಣಿಸದೇ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಕಾನೂನುಬಾಹಿರ. ವಿಪಕ್ಷಗಳ ಸರ್ಕಾರಗಳನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲಾಗುತ್ತಿದೆ. ಹೀಗೆಂದು ಸಿಎಂ ಪರ ವಕೀಲರಾದ ಅಬಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದ್ದರು.

ಇದನ್ನೂ ಓದಿ: ಮುಡಾ ಹಗರಣ: ಹೈಕೋರ್ಟ್ ತೀರ್ಪು ಬಂದಾಯ್ತು, ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಇಲ್ಲಿದೆ ವಿವರ

ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.

ಇದನ್ನೂ ಓದಿ: ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:11 pm, Tue, 24 September 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ