ಮುಡಾ ಸೈಟ್​ ಪಡೆದ ಬಿಜೆಪಿ-ಜೆಡಿಎಸ್​ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಶುರುವಾದ ಮುಡಾ ಮಲ್ಲಯುದ್ಧ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಿಎಂ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಇದರ ಮಧ್ಯ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಯಾರೆಲ್ಲಾ ನಾಯಕರು ಸೈಟ್ ಪಡೆದುಕೊಂಡಿದ್ದಾರೆ ಎಂದು ರಾಜಕಾರಣಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದು ಈ ಕೆಳಗಿನಂತಿದೆ.

ಮುಡಾ ಸೈಟ್​ ಪಡೆದ ಬಿಜೆಪಿ-ಜೆಡಿಎಸ್​ ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್
ಮುಡಾ ಹಗರಣ
Follow us
|

Updated on:Jul 26, 2024 | 2:56 PM

ಬೆಂಗಳೂರು, (ಜುಲೈ 26): ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸಿವೆ. ಅಲ್ಲದೇ ಬೆಂಗಳೂರಿನಿಂದ ಮೈಸೂರು ವರೆಗೆ ಪಾದಯಾತ್ರೆ ಮಾಡಲು ಬಿಜೆಪಿ ಮತ್ತು ಜೆಡಿಎಸ್​ ಮುಂದಾಗಿವೆ. ಇದಕ್ಕೂ ಮುನ್ನವೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮುಡಾದಲ್ಲಿ ಬದಲಿ ನಿವೇಶನ ಪಡೆದುಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ ನಾಯಕರ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಮೂಲಕ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಇನ್ನು ಮುಡಾ ಬದಲಿ ಸೈಟ್ ಪಡೆದುಕೊಂಡವರ ಪಟ್ಟಿಯಲ್ಲಿ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಹೆಸರು ಸಹ ಇದ್ದು, ಈ ಪ್ರಕರಣ ಮತ್ತಷ್ಟು ಸಂಚಲನಕ್ಕೆ ಕಾರಣವಾಗಿದೆ.

ಈ ಬಗ್ಗೆ ಇಂದು(ಜುಲೈ 26) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೈರತಿ ಸುರೇಶ್, ಸ್ಪೀಕರ್ ಅವಕಾಶ ನೀಡಿದ್ದರೆ ಬಿಜೆಪಿಯವರ ಬಂಡವಾಳ ಬಿಚ್ಚಿಡ್ತಿದ್ದೆ. ಹಲವಾರು ಮಠಗಳಿಗೂ ನಿವೇಶನ ಹಂಚಿಕೆಯಾಗಿದೆ. ಜಿ.ಟಿ.ದೇವೇಗೌಡ, ಸಿ.ಎನ್​.ಮಂಜೇಗೌಡ, ಹೆಚ್​.ವಿಶ್ವನಾಥ್​. ಸಾ.ರಾ.ಮಹೇಶ್, ಹೆಚ್.ಡಿ.ಕುಮಾರಸ್ವಾಮಿಗೂ ನಿವೇಶನ ಹಂಚಿಕೆ ಇವರಿಗೆಲ್ಲರಿಗೂ ಬದಲಿ ನಿವೇಶನ ಹಂಚಿಕೆಯಾಗಿದೆ. ತನಿಖಾ ಆಯೋಗದ ಮುಂದೆ ಅಕ್ರಮವೋ ಸಕ್ರಮವೋ ತಿಳಿಯುತ್ತೆ ಎಂದು ಹೇಳಿದರು.

ಇದನ್ನೂ ಓದಿ: 2013ರ ಅಫಿಡವಿಟ್​​ನಲ್ಲಿ ಕೆಸರೆ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲವೆಂದು ಒಪ್ಪಿಕೊಂಡ ಸಿದ್ದರಾಮಯ್ಯ

ಮೂಡ‌ದಲ್ಲಿ ಬದಲಿ ನಿವೇಶನ ಪಡೆದ ರಾಜಕಾರಣಿಗಳ ಪಟ್ಟಿ

1) ಎಚ್‌.ಡಿ.ಕುಮಾರಸ್ವಾಮಿ(ಜೆಡಿಎಸ್) :ಇಂಡಸ್ಟ್ರಿಯಲ್ ಸಬರ್ಬ್ ಮೂರನೇ ಹಂತ ಮೈಸೂರು. 21 ಸಾವಿರ ಚದರ ಅಡಿ ಕೈಗಾರಿಕಾ‌ ನಿವೇಶನ ಸಂಖ್ಯೆ 17/ಬಿ1.

2) ಸಾ.ರಾ.ಮಹೇಶ್(ಜೆಡಿಎಸ್) – ಮಳಲವಾಡಿ ಸರ್ವೆ ನಂಬರ್ 7/11A ರಲ್ಲಿ -011 ಗುಂಟೆ ಜಮೀನು ಬೋಗಾದಿ ಸರ್ವೆ ನಂಬರ್ 170,171,173 ರಲ್ಲಿ 2-11 ಎಕರೆ ಜಮೀನು

3) ಜಿ.ಟಿ.ದೇವೆಗೌಡ(ಜೆಡಿಎಸ್ -ಈರನಗೆರೆ 14/1 ರಲ್ಲಿ 2-25 ಎಕರೆ, ಮಾದಗಳ್ಳಿ 17 ರಲ್ಲಿ 1 ಎಕರೆ

4) ಸಿ.ಎನ್.ಮಂಜೇಗೌಡ (ಜೆಡಿಎಸ್ ಎಂಎಲ್‌ಸಿ): ಹಿನಕಲ್ ಗ್ರಾಮ ಸರ್ವೆ ನಂ 337 ರಲ್ಲಿ 1 ಎಕರೆ ದೇವನೂರು ಸರ್ವ ನಂಬರ್ 91 ರಲ್ಲಿ 2-25 ಎಕರೆ, ಕೆಸರೆ ಸರ್ವೆ ನಂಬರ್ 450 ರಲ್ಲಿ 4-15 ಎಕರೆ ಜಮೀನು, ಮೈಸೂರು ಸರ್ವೆ ನಂಬರ್ 86 ರಲ್ಲಿ 7-08 ಎಕರೆ‌ ಜಮೀನು

5) ಹೆಚ್.ವಿಶ್ವನಾಥ್ (ಬಿಜೆಪಿ ಎಂಎಲ್‌ಸಿ) ಬೆಲವತ್ತ ಸರ್ವೆ ನಂಬರ್ 32 ರಲ್ಲಿ 0-05 ಜಮೀನು

6)ಮಹದೇವಸ್ವಾಮಿ (ಬಿಜೆಪಿ): 255/1, 257 ರಲ್ಲಿ 0-34 ಗುಂಟೆ ಜಮೀನು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಹೆಸರು ಕೇಳಿಬಂದಿದ್ದರಿಂದ ಈ ಪ್ರಕರಣ ತೀಬ್ರ ಸ್ವರೂಪ ಪಡೆದುಕೊಂಡಿದೆ. ಇದೇ ಹಗರಣವನ್ನು ಹಿಡಿದುಕೊಂಡು ವಿಪಕ್ಷಗಳು ಸಿದ್ದರಾಮಯ್ಯ ಮೇಲೆ ಮುಗಿಬಿದ್ದಿವೆ. ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಮುಡಾದಲ್ಲಿ ಬದಲಿ ನಿವೇಶ ಪಡೆದ ವಿಪಕ್ಷ ನಾಯಕರ ಪಟ್ಟಿ ಬಿಡುಗಡೆ ಮಾಡಿದೆ ಅಷ್ಟೇ. ಆದ್ರೆ, ಅಕ್ರಮವೋ ಸಕ್ರಮವೋ ಎಂಬುದನ್ನು ಹೇಳಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:46 pm, Fri, 26 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!