ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!

ಸಿಎಂ ಸಿದ್ದರಾಮಯ್ಯರ ಬುಡಕ್ಕೆ ಸುತ್ತಿಕೊಂಡಿರುವ ಮುಡಾ ಹಗರಣದ ತನಿಖೆ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಮಹತ್ವದ ಬೆಳವಣಿಗೆಯಲ್ಲಿ ಮುಡಾ ಮಾಜಿ ಆಯುಕ್ತರು ಮತ್ತು ಮುಖ್ಯಮಂತ್ರಿ ಆಪ್ತರಿಗೆ ಇಡಿ ಶಾಕ್ ಕೊಟ್ಟಿದೆ. ಸೋಮವಾರ ಇಡಿ ಅಧಿಕಾರಿಗಳು ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 9 ಕಡೆ ದಾಳಿ ನಡೆಸಿದ್ದಾರೆ. ಈ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಆ ಕುರಿತ ವಿವರ ಇಲ್ಲಿದೆ.

ಬೆಂಗಳೂರು: ವಾಕಿಂಗ್​ನಲ್ಲಿದ್ದ ಮುಡಾ ಅಧಿಕಾರಿ ಇಡಿ ದಾಳಿ ಸುದ್ದಿ ಕೇಳ್ತಿದ್ದಂತೆ ಅಲ್ಲಿಂದಲೇ ರನ್ನಿಂಗ್!
ಜಾರಿ ನಿರ್ದೇಶನಾಲಯ & ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್
Follow us
Ganapathi Sharma
|

Updated on: Oct 29, 2024 | 8:02 AM

ಬೆಂಗಳೂರು, ಅಕ್ಟೋಬರ್ 29: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಒಂದು ಕಡೆ ಇಡಿ ಕಚೇರಿಯಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟ ಇಬ್ಬರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಮತ್ತೊಂದು ಕಡೆ ಬೆಂಗಳೂರಿನಲ್ಲಿ ವಾಸವಿರುವ ಮುಡಾದ ಮಾಜಿ ಆಯುಕ್ತರು, ಬಿಲ್ಡರ್ ಒಬ್ಬರ ಮನೆ ಮೇಲೂ ಇಡಿ ದಾಳಿ ನಡೆಸಿದೆ. ಅಷ್ಟಲ್ಲದೇ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತನ ಮೇಲೂ ದಾಳಿ ನಡೆಸಿದ್ದು, ಸೋಮವಾರ ತಡರಾತ್ರಿ ವರೆಗೂ ಪರಿಶೀಲನೆ ನಡೆಸಲಾಗಿದೆ.

ಈ ಮಧ್ಯೆ, ಮುಡಾ ಮಾಜಿ ಆಯುಕ್ತರಾದ ನಟೇಶ್ ಮತ್ತು ದಿನೇಶ್ ಕುಮಾರ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇಡಿ ದಾಳಿ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ವಾಕಿಂಗ್​ ಮಾಡುತ್ತಿದ್ದಲ್ಲಿಂದಲೇ ಪರಾರಿ!

ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ, ಬೆಂಗಳೂರಿನ ಬಾಣಸವಾಡಿಯಲ್ಲಿರುವ ದೀಪಿಕಾ ರಾಯಲ್ ಅಪಾರ್ಟ್​​ಮೆಂಟ್ ಮೇಲೂ ಇಡಿ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ದಿನೇಶ್ ಕುಮಾರ್ ವಾಕಿಂಗ್ ತೆರಳಿದ್ದರು. ವಾಕಿಂಗ್ ಮಾಡುತ್ತಿದ್ದಾಗಲೇ ಅವರಿಗೆ ಇಡಿ ದಾಳಿಯ ಸುದ್ದಿ ಗೊತ್ತಾಗಿದೆ. ತಕ್ಷಣವೇ ಅವರು ಅಲ್ಲಿಂದಲೇ ರನ್ನಿಂಗ್ ಶುರು ಮಾಡಿದ್ದಾರೆ! ಅಂದರೆ, ಅಲ್ಲಿಂದಲೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದಾರೆ. ಸದ್ಯ ಅವರು ನಾಪತ್ತೆಯಾಗಿದ್ದಾರೆ.

ಮಲ್ಲೇಶ್ವರಂನಲ್ಲಿರುವ ನಟೇಶ್ ನಿವಾಸದ ಮೇಲೂ ಸೋಮವಾರ ಇಡಿ ದಾಳಿ ನಡೆಸಿದೆ. ಅವರೂ ಸಹ ನಾಪತ್ತೆಯಾಗಿದ್ದಾರೆ. ಇಡಿ ವಿಚಾರಣೆಗೂ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ದೀಪಿಕಾ ರಾಯಲ್ ಅಪಾರ್ಟ್‌ಮೆಂಟ್‌ಮೇಲೆ ದಾಳಿ ಮಾಡಿ ದಾಖಲೆಗಳನ್ನು ಜಾಲಾಡಿರುವ ಇಡಿ, ಮುಡಾದ ಮಾಜಿ ಆಯುಕ್ತ ನಟೇಶ್ ಮನೆಯಲ್ಲೂ ನಟೇಶ್ ಮನೆಗೆ ಬೆಳಗ್ಗೆ 8ಗಂಟೆಗೆ ಎಂಟ್ರಿಯಾಗಿ, ರಾತ್ರಿ10 ಗಂಟೆಯವರೆಗೂ ದಾಖಲೆಗಳನ್ನು ಜಾಲಾಡಿದೆ. ನಟೇಶ್ ಮನೆಯಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 4 ಬ್ಯಾಗ್ ಕೊಂಡೊಯ್ದಿದ್ದಾರೆ.

ಇದನ್ನೂ ಓದಿ: ಮುಡಾ ಮಾಜಿ ಆಯುಕ್ತರ ಮನೆ ಮೇಲೆ ಇಡಿ ದಾಳಿ: ಸಿದ್ದರಾಮಯ್ಯಗೆ ಆತಂಕ

ಅತ್ತ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯರ ಆಪ್ತ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾಕೇಶ್ ಪಾಪಣ್ಣಗೂ ಇಡಿ ಶಾಕ್ ಕೊಟ್ಟಿದೆ. ಇಡಿಯ ಐದು ಅಧಿಕಾರಿಗಳ ತಂಡ ಮೈಸೂರಿನ ರಾಕೇಶ್ ನಿವಾಸದ ಮೇಲೆ ಸೋಮವಾರ ಬೆಳಗ್ಗೆ 8 ಗಂಟೆಗೆ ದಾಳಿ ಮಾಡಿತು. ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆದಿತ್ತು. ರಾಕೇಶ್ ಪಾಪಣ್ಣ ಅವರು ಮೈಸೂರಿನಲ್ಲಿ ಮುಡಾ ವ್ಯಾಪ್ತಿಯಲ್ಲಿ 50:50 ನಿಯಮದಲ್ಲಿ ನಿವೇಶನ ಪಡೆದಿದ್ದರು. ಇದರಲ್ಲಿ ಅಕ್ರಮದ ವಾಸನೆ ಬಂದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಲ ಹೊತ್ತು ಪಾಪಣ್ಣರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು