AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ಸಿಎಂಗೆ ಮಹತ್ವದ ಸಲಹೆ ನೀಡಿದ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ

ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎಂದಿದ್ದು, ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡದ ಬೆನ್ನಲ್ಲೇ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಕೂಡ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಮಂಗಳೂರಿನಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಪ್ರತಿಕ್ರಿಯಿಸಿದ್ದು, ಸಿಎಂಗೆ ಮಹತ್ವದ ಸಲಹೆ ನೀಡಿದ್ದಾರೆ.

ಮುಡಾ ಹಗರಣ: ಸಿಎಂಗೆ ಮಹತ್ವದ ಸಲಹೆ ನೀಡಿದ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ
ಮುಡಾ ಹಗರಣ: ಸಿಎಂಗೆ ಮಹತ್ವದ ಸಲಹೆ ನೀಡಿದ ನಿವೃತ್ತ ಲೋಕಾಯುಕ್ತ ನ್ಯಾ ಸಂತೋಷ್ ಹೆಗ್ಡೆ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Sep 25, 2024 | 2:57 PM

Share

ಮಂಗಳೂರು, ಸೆಪ್ಟೆಂಬರ್​ 25: ರಾಜ್ಯಪಾಲರ ಆದೇಶ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಕಾನೂನು ಹೋರಾಟದಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಇದರ ಮಧ್ಯೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದೆ. ಆ ಮೂಲಕ ಸಿಎಂ ಟೆನ್ಷನ್ ಶುರುವಾಗಿದೆ. ಸದ್ಯ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ (Santosh Hegde), ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿಎಂಗೆ ಮಹತ್ವದ ಸಲಹೆ ನೀಡಿದ್ದಾರೆ.

ಸಿಎಂಗೆ ಸಂತೋಷ್ ಹೆಗ್ಡೆ ಸಲಹೆ ಏನು? 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಹಿಂದೆ ರೈಲ್ವೆ ಸಚಿವರಾಗಿದ್ದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅಪಘಾತ ಮಾಡಿದಾಗ ರಾಜೀನಾಮೆ ನೀಡಿದ್ದರು. ರಾಜೀನಾಮೆ ಕೊಡಬೇಕೋ, ಕೊಡಬೇಡವೋ ಅನ್ನೋದು ಅವರಿಗೆ ಬಿಟ್ಟಿದ್ದು. ಇಂತಹ ಗಂಭೀರ ಆರೋಪ ಕೇಳಿಬಂದಾಗ ರಾಜೀನಾಮೆ ಕೊಡಬೇಕು. ಒಂದು ವೇಳೆ ರಾಜೀನಾಮೆ ಕೊಡದಿದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ನನಗೆ ಅನಿಸಿದಾಗ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಪಿತೃಪಕ್ಷದ ಕಂಟಕ? ತುಂಗಭದ್ರೆಗೆ ಬಾಗಿನ ಅರ್ಪಿಸಿ ಮುಡಾ ಬಲೆಯಲ್ಲಿ ಸಿಕ್ಕಿಬಿದ್ರಾ?

ಹೈಕೋರ್ಟ್ ಕೂಡ ಮೇಲ್ನೋಟಕ್ಕೆ ಇದರಲ್ಲಿ ಪುರಾವೆ ಇದೆ ಎಂದು ಹೇಳಿದೆ. ಹಾಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆನಿಸುತ್ತಿದೆ. ರಾಜೀನಾಮೆ ಕೊಡುವುದು ಸಿದ್ದರಾಮಯ್ಯಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ ಉತ್ತಮವೆಂದು ಹೇಳಲ್ಲ, ಸರ್ಕಾರಕ್ಕೆ ಬಿಟ್ಟ ವಿಚಾರ. ಯಾವುದೇ ತನಿಖಾ ಸಮಿತಿ ವಿಚಾರಣೆ ಮಾಡಬಹುದು. ಅವರು ಆರೋಪಿಯಲ್ಲವೆಂದು ತೀರ್ಪು ಬಂದರೆ ಮತ್ತೆ ಹುದ್ದೆ ಅಲಂಕರಿಸಲಿ. ಹೈಕೋರ್ಟ್ ತೀರ್ಪಿಗೂ ಮುನ್ನ ನಾನು ತಪ್ಪೇ ಮಾಡಿಲ್ಲವೆಂದು ಹೇಳಿದ್ದರು. ಈಗ ಕೋರ್ಟ್ ಮೇಲ್ನೋಟಕ್ಕೆ ತಪ್ಪು ಕಂಡುಬಂದಿದೆ ಎಂದು ಹೇಳಿದೆ. ಸದ್ಯ ಅವರು ಹೇಳಿದ್ದು ಸರಿಯಿಲ್ಲವೆಂದು ಆಯ್ತಲ್ಲ ಎಂದಿದ್ದಾರೆ.

ಸಿದ್ದರಾಮಯ್ಯಗೆ ನ್ಯಾಯ ಸಿಗಲಿ ಅನ್ನೋದು ನನ್ನ ಬಯಕೆ: ಕೆ.ಎಸ್​.ಈಶ್ವರಪ್ಪ

ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಮಾತನಾಡಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ ಅಂತಾ ಹೇಳುತ್ತಿದ್ದಾರೆ. ಹಾಗಾದರೆ ನ್ಯಾಯಾಲಯ ಮುಚ್ಚುಬಿಡಿ, ಯಾಕೆ ಬೇಕು ಕೋರ್ಟ್? ನಿಮ್ಮ ಪರವಾಗಿ ಬಂದ್ರೆ ನ್ಯಾಯ, ನಿಮ್ಮ‌ ವಿರುದ್ಧ ಬಂದ್ರೆ ಅನ್ಯಾಯನಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆಗೆ ಪಟ್ಟು: ಕರ್ನಾಟಕದಾದ್ಯಂತ ತೀವ್ರಗೊಂಡ ಬಿಜೆಪಿ ಪ್ರತಿಭಟನೆ

ಸಿದ್ದರಾಮಯ್ಯ ಅವರೇ ನೀವು ಸುಪ್ರೀಂಕೋರ್ಟ್​ ಮೊರೆ ಹೋಗಿ. ಸಿಎಂ ಸಿದ್ದರಾಮಯ್ಯಗೆ ನ್ಯಾಯ ಸಿಗಲಿ ಅನ್ನೋದು ನನ್ನ ಬಯಕೆ. ಆದರೆ ನ್ಯಾಯಾಂಗ ವ್ಯವಸ್ಥೆಗೆ ತಲೆಬಾಗಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್