AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು

ಮುಡಾ ಹಗರಣ ಸಂಬಂಧ ದೂರುದಾರರು, ಆರ್​ಟಿಐ ಕಾರ್ಯಕರ್ತರು ಕಾಂಗ್ರೆಸ್​ ಸರ್ಕಾರವನ್ನು ಸುಲಭಕೆ ಬಿಡುವಂತೆ ಕಾಣಿಸುತ್ತಿಲ್ಲ. ಇದೀಗ, ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್​ಟಿಐ ಕಾರ್ಯಕರ್ತ ಗಂಗರಾಜು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ರಾಜ್ಯಪಾಲರ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.

ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು
ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ: ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು
ರಾಮ್​, ಮೈಸೂರು
| Edited By: |

Updated on: Oct 15, 2024 | 11:10 AM

Share

ಮೈಸೂರು, ಅಕ್ಟೋಬರ್ 15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ಆರೋಪ ಕೇಸ್​ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್​ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಜೊತೆಗೆ ಸರ್ಚ್ ವಾರಂಟ್ ನೀಡಿ ವಾಪಸ್​ ಪಡೆಯಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಲೋಕಾಯುಕ್ತ ಹಿರಿಯ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಧಿಕಾರಿ ಮಾರುತಿ ಬಗಲಿ, ಹಿಂದಿನ ಮುಡಾ ಆಯುಕ್ತರಾದ ನಟೇಶ್, ದಿನೇಶ್ ವಿರುದ್ಧ ರಾಜ್ಯಪಾಲರಿಗೆ ಇ-ಮೇಲ್ ಹಾಗೂ ಅಂಚೆ ಪತ್ರದ ಮೂಲಕ ದೂರು ಸಲ್ಲಿಕೆ ಮಾಡಲಾಗಿದೆ.

ಮುಡಾ ಹಗರಣ ಕುರಿತು ಲೋಕಾಯುಕ್ತ ದಾಖಲೆ ಸಂಗ್ರಹ ಮಾಡಿತ್ತು. ತನಿಖಾಧಿಕಾರಿಗಳು 1 ಸಾವಿರ ಪುಟಗಳ ದಾಖಲೆ ಸಂಗ್ರಹ ಮಾಡಿದ್ದರು. ಲೋಕಾಯುಕ್ತ ಇನ್ಸ್​ಪೆಕ್ಟರ್ ರವಿಕುಮಾರ್ ತಂಡ ಸಾಕ್ಷಿ ಸಂಗ್ರಹಿಸಿತ್ತು. ಬಳಿಕ ಸರ್ಚ್ ವಾರಂಟ್ ನೀಡಲು ಅಂದಿನ ಎಸ್​ಪಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು. ಈ ಮೂಲಕ ಭೈರತಿ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಗಂಗರಾಜು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಮುಡಾ ಕೇಸ್: ಲೋಕಾಯುಕ್ತ ಮೇಲೆ ಪ್ರಭಾವ, ಕಾಂಗ್ರೆಸ್​ ವಕ್ತಾರನ ಮೇಲೆ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ

ಇದರೊಂದಿಗೆ, ಇದೀಗ ಮುಡಾ ಹಗರಣದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ಮತ್ತೆ ಪ್ರತಿಪಕ್ಷಗಳ ಟೀಕೆಗೆ ಗುರಿಯಾಗುವ ಸಾಧ್ಯತೆ ಇದೆ. ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಮುಡಾ ಹಗರಣದ ತನಿಖೆ ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಅದರೊಂದಿಗೆ ಇದೀಗ ರಾಜ್ಯಪಾಲರಿಗೆ ಮತ್ತೆ ದೂರು ಸಲ್ಲಿಕೆಯಾಗಿರುವುದು ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ