ಆಗಸ್ಟ್ 23 ಸಿದ್ದರಾಮಯ್ಯ ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!

ಮುಡಾ ಸೈಟ್ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಮುಂದಾಗಿದ್ದಾರೆ. ಇನ್ನು ಇದೇ ಆಗಸ್ಟ್ 23ರಂದು ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸ ಕೈಗೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಆಗಸ್ಟ್ 23 ಸಿದ್ದರಾಮಯ್ಯ ದೆಹಲಿಗೆ, ಕುತೂಹಲ ಮೂಡಿಸಿದ ಸಿಎಂ ರಾಜಕೀಯ ನಡೆ!
ಸಿದ್ದರಾಮಯ್ಯImage Credit source: PTI
Follow us
Anil Kalkere
| Updated By: ರಮೇಶ್ ಬಿ. ಜವಳಗೇರಾ

Updated on: Aug 18, 2024 | 6:13 PM

ಬೆಂಗಳೂರು, (ಆಗಸ್ಟ್​. 18): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದರಿಂದ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಒಂದೆಡೆ ವಿಪಕ್ಷಗಳು ಸಿಎಂ ರಾಜೀನಾಮೆಗೆ ಆಗ್ರಹಿಸುತ್ತಿದ್ದರೆ, ಮತ್ತೊಂದೆಡೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ನಾಳೆ(ಆಗಸ್ಟ್​ 19) ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ. ಇದರ ಮಧ್ಯ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇದು ಭಾರೀ ಸಂಚಲನ ಮೂಡಿಸಿದೆ.

ಹೌದು…ಮುಡಾ ಹಗರಣದಲ್ಲಿ ಸಿಲುಕಿಕೊಂಡಿರುವ ಸಿದ್ದರಾಮಯ್ಯ ಅವರು ಆಗಸ್ಟ್ 23ರಂದು ದೆಹಲಿಗೆ ತೆರಳಲಿದ್ದು, ಪ್ರಾಸಿಕ್ಯೂಷನ್ ವಿಚಾರದ ಬಗ್ಗೆ ಹೈಕಮಾಂಡ್​ ನಾಯಕರ ಜೊತೆ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಹೈಕಮಾಂಡ್ ಮಟ್ಟದಲ್ಲಿ ಹಿರಿಯ ವಕೀಲರ ಭೇಟಿಗೆ ಸಿಎಂ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ರಾಜ್ಯಪಾಲರ ನಡೆ ವಿರುದ್ಧ ದೂರು ನೀಡುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ: ಕೇಂದ್ರದ ಚೆಕ್ ಲಿಸ್ಟ್​ ಸಿಎಂ ಪರ ವಕೀಲರಿಗೆ ಅಸ್ತ್ರ

ದೆಹಲಿಗೆ ತೆರಳುವ ಒಂದು ದಿನ ಮುನ್ನ ಅಂದರೆ ಆಗಸ್ಟ್ 22ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಸಭೆಯಲ್ಲಿ ಕೆಲ ರಾಜ್ಯ ರಾಜಕಾರಣದ ಬೆಳವಣಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಎಲ್ಲಾ ಶಾಸಕರು ತಮ್ಮ ಬೆಂಬಲಕ್ಕಿರುವಂತೆ ಮನವಿ ಮಾಡಲಿದ್ದಾರೆ. ರಾಜ್ಯಪಾಲರ ಆದೇಶದಕ್ಕೆ ತಡೆ ನೀಡುವಂತೆ ಹೈಕೋರ್ಟ್​ ನಾಳೆ ಅರ್ಜಿ ಸಲ್ಲಿಸಲಿದ್ದಾರೆ. ಒಂದು ವೇಳೆ ಹೈಕೋರ್ಟ್​ ನಿರಾಕರಿಸಿದರೆ ಸುಪ್ರೀಂಕೋರ್ಟ್​ ಮೆಟ್ಟಿಲೇರಲಿದ್ದಾರೆ. ಇದರ ನಡುವೆ ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಪ್ರತಿ ಹಂತದಲ್ಲೂ ಸಿದ್ದರಾಮಯ್ಯ ಎಚ್ಚರಿಕೆಯಿಂದ ಹೆಜ್ಜೆಯಿಡುತ್ತಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ