AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ತನಿಖೆ ಪೂರ್ಣಗೊಳಿಸುವಂತೆ ಲೋಕಾಗೆ ಕೋರ್ಟ್​ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಡಾ ಹಗರಣ ಪ್ರಕರಣ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಬಿ ರಿಪೋರ್ಟ್​ ಸಲ್ಲಿದ್ದರು. ಆದ್ರೆ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಕೋರ್ಟ್ ವಿಚಾರಣೆ ನಡೆಸಿದೆ.

ಮುಡಾ ಹಗರಣ: ತನಿಖೆ ಪೂರ್ಣಗೊಳಿಸುವಂತೆ ಲೋಕಾಗೆ ಕೋರ್ಟ್​ ಸೂಚನೆ
ಮುಡಾ
Follow us
Ramesha M
| Updated By: ವಿವೇಕ ಬಿರಾದಾರ

Updated on:Apr 15, 2025 | 5:40 PM

ಬೆಂಗಳೂರು, ಏಪ್ರಿಲ್​ 15: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧದ ಕೇಳಿಬಂದಿರುವ ಮುಡಾ ಹಗರಣದ ಪ್ರಕರಣಕ್ಕೆ (Muda Scam Case) ಸಂಬಂಧಿಸಿದಂತೆ ಲೋಕಾಯುಕ್ತ (Lokayukta) ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್​​ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಕುರಿತ ಆದೇಶ ಸದ್ಯಕ್ಕಿಲ್ಲ. ತನಿಖೆ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನ್ಯಾ. ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಸೂಚನೆ ನೀಡಿದೆ.

ಇನ್ನು, ಜಾರಿ ನಿರ್ದೇಶನಾಲಯ ಕೂಡಾ ತಕರಾರು ಅರ್ಜಿ ಸಲ್ಲಿಸಬಹುದು. ಲೋಕಾಯುಕ್ತ ಪೊಲೀಸರ ಅಂತಿಮ‌ ವರದಿ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತ ಪೊಲೀಸರು ತನಿಖೆ ಇನ್ನೂ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಲು ಸೂಚನೆ ನೀಡಲಾಗಿದೆ ಎಂದು ಕೋರ್ಟ್ ಮೇ 7 ಕ್ಕೆ ವಿಚಾರಣೆ ಮುಂದೂಡಿದೆ.

ಕೋರ್ಟ್​ ಸರ್ಕಾರಕ್ಕೆ ಛೀಮಾರಿ ಹಾಕಿದೆ: ಸ್ನೇಹಮಯಿ ಕೃಷ್ಣ

ಲೋಕಾಯುಕ್ತ ಅಧಿಕಾರಿಗಳು ಸಿಎಂ ಕುಟುಂಬವನ್ನು ರಕ್ಷಣೆ ಮಾಡಲು ತನಿಖೆ ಪೂರ್ಣಗೊಳಿಸದೆ ವರದಿ ಸಲ್ಲಿಕೆ ಮಾಡಿದ್ದಾರೆ. ಹೀಗಾಗಿ ಕೋರ್ಟ್, ಅಂತಿಮ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ತನಿಖಾಧಿಕಾರಿಗಳಿಗೆ ತನಿಖೆಯ ಬಗ್ಗೆ ತಿಳಿದಿಲ್ಲ. ನ್ಯಾಯಾಲದ ಇಂದಿನ ಆದೇಶ ಸರ್ಕಾರಕ್ಕೆ ಛೀಮಾರಿ ಹಾಕಿದಂತಾಗಿದೆ. ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಕೇಸ್ ಮುಚ್ಚಿ ಹಾಕುವ ಪ್ರಯತ್ನಕ್ಕೆ ನಾನು ಅವಕಾಶ ಕೊಡಲ್ಲ. ನನ್ನ ಬಳಿ ಇರುವ ದಾಖಲೆ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯಗೆ ಶಿಕ್ಷೆ ಕೊಡಿಸುತ್ತೇ‌ನೆ. ಸಿಎಂ ಮೊದಲು ರಾಜಿನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಲಿ. ನನ್ನ ಹೋರಾಟ ಮುಂದುವರೆಸುತ್ತೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ಇದನ್ನೂ ಓದಿ
Image
ಮುಡಾದ 15 ಸೈಟು ಡಿನೋಟಿಫೈ ಮಾಡಿ ಎಂದು ಅರ್ಜಿ ಕೊಟ್ಟಿದ್ದೇ CM ಭಾವಮೈದ: HDK
Image
ಮುಡಾದಲ್ಲಿ ಭ್ರಷ್ಟಾಚಾರ ಅಬ್ಬರ, ಕಮಿಷನರ್ ವಿರುದ್ಧವೇ ವಾಮಾಚಾರ ಬೆದರಿಕೆ
Image
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​
Image
ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ; ರಾತ್ರೋರಾತ್ರಿ 48 ಸೈಟ್​ಗಳು ರದ್ದು

ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿಯಲ್ಲಿ ಏನಿದೆ?

ದೂರುದಾರ ಸ್ನೇಹಮಯಿ‌ ಕೃಷ್ಣ ಅವರು 39 ಪುಟಗಳ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. “ತನಿಖಾಧಿಕಾರಿ ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿರುವ ವರದಿ ನನ್ನ ಪ್ರಕಾರ ಈ ಪ್ರಕರಣಕ್ಕೆ ಸಂಬಂಧಿಸಿದ ಬಿ ಅಂತಿಮ ವರದಿಯಾಗಿರುವುದಿಲ್ಲ. ಆದರೂ ಬಿ ಅಂತಿಮ ವರದಿ ಸಲ್ಲಿಸಿದ್ದರೂ ಕೂಡ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆ  ಮಾಡಬಹುದು ಎಂದು ಮಾನ್ಯ ಸರ್ವೋಚ್ಚ ನ್ಯಾಯಾಲಯವು, “ಇಂಡಿಯಾ ಕಾರೆಟ್ ಪ್ರೈ.ಲಿ. ವಿರುದ್ಧ ಕರ್ನಾಟಕ ರಾಜ್ಯ” ಎಂಬ ಪ್ರಕರಣದ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ, ತೀರ್ಪಿನ ಪ್ರತಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿನ ಅಂಶಗಳನ್ನು ಪರಿಗಣಿಸಿ, ಸೂಕ್ತ ಆದೇಶ ಮಾಡಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ” ಎಂದು ತಕರಾರು ಸಲ್ಲಿಸಿದ್ದರು.

ಇದನ್ನೂ ಓದಿ: ರಾಜಕೀಯದಲ್ಲಿ ಮತ್ತೆ ಗರಿಗೆದರಿದ ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಇಡಿ ಸಂಕಷ್ಟ ತಂದಿಡುತ್ತಾ?

ಮುಂದುವರೆದು, “ತನಿಖಾಧಿಕಾರಿಯು 1 ರಿಂದ 4ನೇ ಆರೋಪಿಗಳ ವಿಚಾರದಲ್ಲಿ ಸಲ್ಲಿಸಿರುವ ವರದಿಯನ್ನು ತಿರಸ್ಕರಿಸಬೇಕಾಗಿಯೂ ಲಭ್ಯವಿರುವ ಮತ್ತು ಮುಂದೆ ಲಭ್ಯವಾಗುವ ಸಾಕ್ಷ್ಯಾಧಾರಗಳ ಮೂಲಕ 1 ರಿಂದ 4ನೇ ಆರೋಪಿಗಳ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸಲು ಬೇಕಾದ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲು ಅನುಮತಿ ನೀಡಬೇಕಾಗಿಯೂ, ಮಾನ್ಯ ನ್ಯಾಯಾಲಯಕ್ಕೆ ಸೂಕ್ತ ಮತ್ತು ನ್ಯಾಯ ಸಮ್ಮತ ಎಂದು ಕಂಡು ಬರುವ ಇತರೆ ಸೂಕ್ತ ಆದೇಶವನ್ನು ಮಾಡಬೇಕೇಂದು” ನ್ಯಾಯ ಪೀಠಕ್ಕೆ ಮನವಿ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Tue, 15 April 25

ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​