Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣ: ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆಯೋಗ ರಚಿಸಿದ ಸರ್ಕಾರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಿದೆ.

ಮುಡಾ ಹಗರಣ: ನಿವೃತ್ತ ನ್ಯಾ ಪಿಎನ್​ ದೇಸಾಯಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆಯೋಗ ರಚಿಸಿದ ಸರ್ಕಾರ
ಅರೆಕಾಲಿಕ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on:Jul 14, 2024 | 11:13 PM

ಬೆಂಗಳೂರು, ಜುಲೈ 14: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (muda scam) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಸರ್ಕಾರ ಆಯೋಗ ರಚಿಸಿದೆ. ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ (PN Desai) ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.

ಮುಡಾ ಸೈಟ್​ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.

ಇದನ್ನೂ ಓದಿ: ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲ್ಲ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ

ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿದೆ.

ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಸಿಎಂ ಆಪ್ತರ ಒಳ ಜಗಳದಿಂದಲೇ ಬಯಲಾಯ್ತಾ ಮುಡಾ ಹಗರಣ? ಮುಡಾ ಅಧ್ಯಕ್ಷರ ಹೇಳಿಕೆಗಳು ಹುಟ್ಟುಹಾಕಿದ ಪ್ರಶ್ನೆಗಳಿವು

ವಿಚಾರಣೆ ಆಯೋಗಕ್ಕೆ ಸಂಬಂಧಪಟ್ಟಂತೆ ನಗರಾಭಿವೃದ್ಧಿ ಇಲಾಖೆಯ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ, ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು, ದಾಖಲಾತಿಗಳು ಇತ್ಯಾದಿಗಳನ್ನು ಒದಗಿಸುವುದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಂತೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:00 pm, Sun, 14 July 24

ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ