ಬೆಂಗಳೂರು, ಜುಲೈ 14: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (muda scam) ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಸರ್ಕಾರ ಆಯೋಗ ರಚಿಸಿದೆ. ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ (PN Desai) ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದ್ದು, 6 ತಿಂಗಳೊಳಗೆ ವರದಿ ನೀಡುವಂತೆ ವಿಚಾರಣಾ ಆಯೋಗಕ್ಕೆ ಸೂಚನೆ ನೀಡಲಾಗಿದೆ.
ಮುಡಾ ಸೈಟ್ ಹಂಚಿಕೆ ವಿಷಯದಲ್ಲಿ ಆರೋಪಗಳು ಸರ್ಕಾರದ ಗಮನಕ್ಕೆ ಬಂದಿರುವುದಲ್ಲದೆ, ಮಾಧ್ಯಮಗಳಲ್ಲಿಯೂ ಸಹ ವರದಿಯಾಗಿರುತ್ತದೆ. ಈ ಪ್ರಕರಣದಲ್ಲಿ ವಿಚಾರಣೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act, 1952ರ ನಿಯಮ 3 ರ ಉಪನಿಯಮ (1) ರನ್ವಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ವಿಚಾರಣೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದೆ.
ಇದನ್ನೂ ಓದಿ: ಮುಡಾ ಹಗರಣದ ತನಿಖೆ ಸಿಬಿಐಗೆ ವಹಿಸಲ್ಲ: ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
ಈ ಹಿನ್ನಲೆಯಲ್ಲಿ, ಆರೋಪಗಳ ಬಗ್ಗೆ ವಿಚಾರಣೆಯನ್ನು ನಡೆಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿದೆ.
ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ, ದಾಖಲೆಗಳನ್ನು ಒದಗಿಸಿ ಆಯೋಗವು ವಿಚಾರಣೆಯನ್ನು ಪೂರ್ಣಗೊಳಿಸಲು ಹಾಗೂ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು, ಆಡಳಿತಾತ್ಮಕ ಸಲಹೆಗಾರರನ್ನು ಒದಗಿಸಲು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಸಹಕರಿಸುವಂತೆ ಸೂಚಿಸಿದೆ.
ಇದನ್ನೂ ಓದಿ: ಸಿಎಂ ಆಪ್ತರ ಒಳ ಜಗಳದಿಂದಲೇ ಬಯಲಾಯ್ತಾ ಮುಡಾ ಹಗರಣ? ಮುಡಾ ಅಧ್ಯಕ್ಷರ ಹೇಳಿಕೆಗಳು ಹುಟ್ಟುಹಾಕಿದ ಪ್ರಶ್ನೆಗಳಿವು
ವಿಚಾರಣೆ ಆಯೋಗಕ್ಕೆ ಸಂಬಂಧಪಟ್ಟಂತೆ ನಗರಾಭಿವೃದ್ಧಿ ಇಲಾಖೆಯ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ, ವಿಚಾರಣೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು, ದಾಖಲಾತಿಗಳು ಇತ್ಯಾದಿಗಳನ್ನು ಒದಗಿಸುವುದು ಹಾಗೂ ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸುತ್ತಂತೆ ತಿಳಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:00 pm, Sun, 14 July 24