ಮುಡಾ ಹಗರಣ: ಇಡಿ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ ಈ ಮೂರು ಅಂಶಗಳು

ಮುಡಾ ಹಗರಣ ಸಂಬಂಧ ಲೋಕಾಯುಕ್ತ ತನಿಖೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗಿದೆ. ಅತ್ತ ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಈ ಮಧ್ಯೆ, ಮುಡಾ ತನಿಖೆ ವಿಚಾರದಲ್ಲಿ ಇಡಿಗೆ ಕೆಲವು ಅಂಶಗಳು ಮಹತ್ವದ್ದಾಗಲಿವೆ. ಆ ಅಂಶಗಳು ಯಾವುವು ಎಂಬುದನ್ನು ತಿಳಿಯಲು ಮುಂದೆ ಓದಿ.

ಮುಡಾ ಹಗರಣ: ಇಡಿ ತನಿಖೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ ಈ ಮೂರು ಅಂಶಗಳು
ಮುಡಾ ಹಗರಣ
Follow us
| Updated By: ಗಣಪತಿ ಶರ್ಮ

Updated on: Oct 01, 2024 | 11:52 AM

ಬೆಂಗಳೂರು, ಅಕ್ಟೋಬರ್ 1: ಮುಡಾ ಹಗರಣ ಸಂಬಂಧ ಒಂದೆಡೆ ಮೈಸೂರು ಲೋಕಾಯಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ಕೂಡ ಪ್ರಕರಣ ದಾಖಲಿಸಿದೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಮುಡಾ ನಿವೇಶನಗಳನ್ನು ವಾಪಸ್ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಪತ್ರ ಬರೆದಿದ್ದಾರೆ. ಇದೀಗ ಇಡಿ ತನಿಖೆಯಲ್ಲಿ ಮೂರು ಅಂಶಗಳು ಮಹತ್ವದ ಪಾತ್ರ ವಹಿಸಲಿದೆ ಎನ್ನಲಾಗಿದೆ.

ಮೊದಲನೆಯ ಅಂಶವೆಂದರೆ, ಇಡಿ ತನಿಖೆ ಮಾಡಬೇಕಿದ್ದರೆ ಮೊದಲಿಗೆ ಯಾವುದಾದರೂ ಒಂದು ತನಿಖಾ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿರಬೇಕು. ಈಗ ಮೈಸೂರಿನ ಲೋಕಾಯುಕ್ತ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಆಧಾರದಲ್ಲಿ ಇಡಿ ತನಿಖೆ ನಡೆಸಬಹುದಾಗಿದೆ. ಮೈಸೂರಿನಲ್ಲಿ ಬೇನಾಮಿ ಆಸ್ತಿ ಗಳಿಕೆ, ಭ್ರಷ್ಟಾಚಾರನಡೆದಿದೆ ಎಂಬ ಆರೋಪದ ಅಡಿಯಲ್ಲಿ ತನಿಖೆ ನಡೆಸುವ ಸಾಧ್ಯತೆ ಇದೆ.

ಹಣಕಾಸು ಅವ್ಯವಹಾರ ಆರೋಪ

ಎರಡನೇ ಅಂಶವೆಂದರೆ, ಮುಡಾದಲ್ಲಿದ್ದ 387 ಕೋಟಿ ರೂಪಾಯಿ ಹಣ ಬೇರೆ ಕ್ಷೇತ್ರಗಳ ಅಭಿವೃದ್ಧಿಗೆ ಬಳಕೆ ಮಾಡಲಾಗಿದೆ ಎಂಬ ಆರೋಪವಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಇಡಿ ಇಸಿಐಆರ್ ದಾಖಲಿಸಿದೆ. ವರುಣಾ, ಶ್ರೀರಂಗಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಪ್ರಭಾವ ಬಳಸಿ ಬಳಕೆ ಮಾಡಿದ ಆರೋಪ ಇದೆ. ಕಾನೂನು ಬಾಹಿರವಾಗಿ ಮುಡಾ ಹಣ ಬಳಕೆ ಮಾಡಲಾಗಿದೆ ಎಂಬ ಆರೋಪ ಇದ್ದು, ಇದರ ಬಗ್ಗೆಯೂ ತನಿಖೆ ಮಾಡುವ ಸಾಧ್ಯತೆ ಇದೆ.

ಐಟಿ ದಾಳಿ ವೇಳೆ ಸಿಕ್ಕಿದ್ದು ಮುಡಾ ಹಣವೇ?

2023ರ ಅಕ್ಟೋಬರ್​​ನಲ್ಲಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ಐಟಿ ದಾಳಿಯಾಗಿತ್ತು. ಆಗ ಉದ್ಯಮಿ ಹಾಗೂ ಗುತ್ತಿಗೆದಾರರ ಮನೆಗಳಲ್ಲಿ 40 ಕೋಟಿ ರೂಪಾಯಿಗೂ ಅಧಿಕ ಹಣ ಸಿಕ್ಕಿತ್ತು. ಅದು ಸಚಿವರೊಬ್ಬರಿಗೆ ಸೇರಿದ್ದು ಎನ್ನಲಾಗಿತ್ತು. ಮುಡಾಗೆ ಸಂಬಂಧಿಸಿದ ಹಣ ಎಂಬ ಗುಮಾನಿಯೂ ಇತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಮಾಡಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: ಮುಡಾ ಸೈಟ್ ವಾಪಸ್: ಸಂವಿಧಾನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ ಎಂದ ಅಶೋಕ್

ಒಟ್ಟಿನಲ್ಲಿ ಈ ಎಲ್ಲ ಅಂಶಗಳು ಮುಡಾ ವಿಚಾರದಲ್ಲಿ ತನಿಖೆ ನಡೆಸಲಿರುವ ಇಡಿಗೆ ಮಹತ್ವದ್ದಾಗಲಿವೆ. ಸದ್ಯ ಲೋಕಾಯುಕ್ತ ತನಿಖೆ ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಇಡಿ ಸಹ ತನಿಖೆ ಆರಂಭಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು