ಮುಡಾ ಹಗರಣ: ಸಿದ್ದರಾಮಯ್ಯಗೆ ಶುರುವಾಯ್ತು ಮತ್ತೊಂದು ಸಂಕಷ್ಟ!

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲರು ಚಿಂತನೆ ನಡೆಸಿದ್ದಾರೆ. ಇದರ ಮಧ್ಯ ಇದೀಗ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಶುರುವಾಯ್ತು ಮತ್ತೊಂದು ಸಂಕಷ್ಟ!
ಸಿದ್ದರಾಮಯ್ಯ
Follow us
Ramesha M
| Updated By: ರಮೇಶ್ ಬಿ. ಜವಳಗೇರಾ

Updated on: Aug 12, 2024 | 8:09 PM

ಬೆಂಗಳೂರು, (ಆಗಸ್ಟ್ 12): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಭಾರೀ ಹಗರಣದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಸಲ್ಲಿಸಿದ್ದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಟಿಜೆ ಅಬ್ರಾಹಂ ಅವರು ಈ ಬಾರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ನೀಡಿದ್ದಾರೆ.

ಇದೇ ಮುಡಾ ಹಗರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಸರ್ಕಾರ ಸಹ ನೋಟಿಸ್​ ವಾಪಸ್ ಪಡೆದುಕೊಂಡು ಅಬ್ರಾಹಂ ಅವರ ದೂರು ತಿರಸ್ಕರಿಸಬೇಕೆಂದು ಒಂದು ಸಾಲಿನ ನಿರ್ಣಯ ಅಂಗೀಕರಿಸಿದೆ. ಹೀಗಾಗಿ ಸಿದ್ದರಾಮಯ್ಯನವರ ರಾಜಕೀಯ ಭವಿಷ್ಯ ರಾಜ್ಯಪಾಲರ ಅಂಗಳದಲ್ಲಿದ್ದು, ಅವರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಾರಾ? ಅಥವಾ ಇಲ್ಲ ಎನ್ನುವ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಸಿಎಂ ವಿರುದ್ಧದ ಮುಡಾ ಪ್ರಕರಣದ ಆದೇಶ ಕಾಯ್ದಿರಿಸಿದ ಕೋರ್ಟ್: ವಾದ-ಪ್ರತಿವಾದ ಹೇಗಿತ್ತು? ಇಲ್ಲಿದೆ ನೋಡಿ

ಅಲ್ಲದೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದು, ನಾಳೆ (ಆಗಸ್ಟ್ 13) ಖಾಸಗಿ ದೂರು ವಿಚಾರಣೆಗೆ ಸ್ವೀಕರಿಸಬೇಕೋ ಬೇಡ್ವಾ ಎನ್ನುವ ಬಗ್ಗೆ ಆದೇಶ ನೀಡುವ ಸಾಧ್ಯತೆಗಳಿವೆ. ಇದರ ಮಧ್ಯ ಇದೀಗ ಅಬ್ರಾಹಂ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಿದ್ದರಾಮಯ್ಯ ಅವರು ಖಾಸಗಿ ದೂರು ನೀಡಿದ್ದಾರೆ.  ಹೀಗಾಗಿ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್  ಮಾಡಿ