ಮುಡಾ ಹಗರಣದ ದೂರಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಟಿಜೆ ಅಬ್ರಹಾಂ ಮತ್ತೊಂದು ಖಡಕ್ ಎಚ್ಚರಿಕೆ
ಮುಡಾ ಹಗರಣದ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ನೀಡಿದ ದೂರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಇಡೀ ಕಾಂಗ್ರೆಸ್ ಸರ್ಕಾರದ ಬುಡ ಅಲುಗಾಡುವಂತೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಟಿಜೆ ಅಬ್ರಹಾಂ, ಸಿಎಂಗೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು, (ಆಗಸ್ಟ್ 02): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಎಂದು ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಟಿಜೆ ಅಬ್ರಹಾಂ ನೀಡಿರುವ ದೂರೇ ಇದೀಗ ಸಿದ್ದರಾಮಯ್ಯಗೆ ಮಾತ್ರವಲ್ಲ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಟಿಜೆ ಅಬ್ರಹಾಂ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಅದರಲ್ಲೂ ಸಿಎಂ ಕೆಂಡಾಮಂಡಲರಾಗಿದ್ದು, ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದೀಗ ಈ ಹೇಳಿಕೆ ವಿರುದ್ಧ ಟಿಜೆ ಅಬ್ರಾಹಂ, ಸಿದ್ದರಾಮಯ್ಯಗೆ ಲೀಗಲ್ ನೊಟೀಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಟಿಜೆ ಅಬ್ರಾಹಂ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂಗೆ ಏಳು ದಿನಗಳಲ್ಲಿ ಉತ್ತರಿಸುವಂತೆ ಶೋಕಸ್ ನೋಟಿಸ್ ನೀಡಿದ್ದದಾರೆ. ಇದರಿಂದ ಅಬ್ರಾಹಂ ವಿರುದ್ಧ ಕೋಪಗೊಂಡಿರುವ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದರಿಂದ ಕೋಪಗೊಂಡಿರುವ ಟಿಜೆ ಅಬ್ರಹಾಂ, ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಲೀಗಲ್ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬ ಖರೀದಿ ಮಾಡಿದಾಗ ಅಲ್ಲಿ ಕೃಷಿ ಜಮೀನೇ ಇರಲಿಲ್ಲ! ಅಬ್ರಹಾಂ ಸ್ಫೋಟಕ ಆರೋಪ
ಈ ಬಗ್ಗೆ ಟ್ವೀಟ್ ಮಾಡಿರುವ ಟಿಜೆ ಅಬ್ರಾಹಂ, ಬ್ಲಾಕ್ ಮೈಲರ್ ಎನ್ನುವುದನ್ನು ಬಹಿರಂಗವಾಗಿ ನಿಮ್ಮ ಹೇಳಿಕೆ ವಾಪಸ್ ಪಡೆಯಿರಿ. ಇಲ್ಲದಿದ್ದರೆ ನಿಮ್ಮ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ