ಮುಡಾ ಹಗರಣದ ದೂರಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಟಿಜೆ ಅಬ್ರಹಾಂ ಮತ್ತೊಂದು ಖಡಕ್ ಎಚ್ಚರಿಕೆ

ಮುಡಾ ಹಗರಣದ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ನೀಡಿದ ದೂರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ಅಲ್ಲದೇ ಇಡೀ ಕಾಂಗ್ರೆಸ್​​ ಸರ್ಕಾರದ ಬುಡ ಅಲುಗಾಡುವಂತೆ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಟಿಜೆ ಅಬ್ರಹಾಂ, ಸಿಎಂಗೆ ಮತ್ತೊಂದು ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣದ ದೂರಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಟಿಜೆ ಅಬ್ರಹಾಂ ಮತ್ತೊಂದು ಖಡಕ್ ಎಚ್ಚರಿಕೆ
ಸಿದ್ದರಾಮಯ್ಯ, ಟಿಜೆ ಅಬ್ರಹಾಂ
Edited By:

Updated on: Aug 02, 2024 | 8:49 PM

ಬೆಂಗಳೂರು, (ಆಗಸ್ಟ್​ 02): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿ ಎಂದು ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಟಿಜೆ ಅಬ್ರಹಾಂ ನೀಡಿರುವ ದೂರೇ ಇದೀಗ ಸಿದ್ದರಾಮಯ್ಯಗೆ ಮಾತ್ರವಲ್ಲ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಟಿಜೆ ಅಬ್ರಹಾಂ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಅದರಲ್ಲೂ ಸಿಎಂ ಕೆಂಡಾಮಂಡಲರಾಗಿದ್ದು, ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದೀಗ ಈ ಹೇಳಿಕೆ ವಿರುದ್ಧ ಟಿಜೆ ಅಬ್ರಾಹಂ, ಸಿದ್ದರಾಮಯ್ಯಗೆ ಲೀಗಲ್ ನೊಟೀಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಟಿಜೆ ಅಬ್ರಾಹಂ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂಗೆ ಏಳು ದಿನಗಳಲ್ಲಿ ಉತ್ತರಿಸುವಂತೆ ಶೋಕಸ್ ನೋಟಿಸ್ ನೀಡಿದ್ದದಾರೆ. ಇದರಿಂದ ಅಬ್ರಾಹಂ ವಿರುದ್ಧ ಕೋಪಗೊಂಡಿರುವ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಟಿಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದರಿಂದ ಕೋಪಗೊಂಡಿರುವ ಟಿಜೆ ಅಬ್ರಹಾಂ, ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಲೀಗಲ್ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಕುಟುಂಬ ಖರೀದಿ ಮಾಡಿದಾಗ ಅಲ್ಲಿ ಕೃಷಿ ಜಮೀನೇ ಇರಲಿಲ್ಲ! ಅಬ್ರಹಾಂ ಸ್ಫೋಟಕ ಆರೋಪ

ಈ ಬಗ್ಗೆ ಟ್ವೀಟ್ ಮಾಡಿರುವ ಟಿಜೆ ಅಬ್ರಾಹಂ, ಬ್ಲಾಕ್ ಮೈಲರ್ ಎನ್ನುವುದನ್ನು ಬಹಿರಂಗವಾಗಿ ನಿಮ್ಮ ಹೇಳಿಕೆ ವಾಪಸ್ ಪಡೆಯಿರಿ. ಇಲ್ಲದಿದ್ದರೆ ನಿಮ್ಮ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us