ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಮುಡಾ ಹಗರಣ ಹಾಗೂ ಗಣಿಗಾರಿಕೆ ಅಕ್ರಮಗಳಿಗೆ ಸಂಬಂಧಿಸಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ಜೋರಾಗಿದೆ. ಮುಡಾ ಸಂಬಂಧ ದಾಖಲೆ ಸಮೇತ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ ಎಂದು ವ್ಯಂಗ್ಯವಾಡಿದ್ದಾರೆ.

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ! ಮುಡಾ ದಾಖಲೆ ಸಮೇತ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಕುಮಾರಸ್ವಾಮಿ & ಸಿದ್ದರಾಮಯ್ಯ
Follow us
Ganapathi Sharma
|

Updated on: Aug 23, 2024 | 11:39 AM

ಬೆಂಗಳೂರು, ಆಗಸ್ಟ್​ 23: ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನಡುವಣ ವಾಕ್ಸಮರ ತಾರಕಕ್ಕೇರಿದೆ. ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

‘ಸನ್ಮಾನ್ಯ ಸಿಎಂ ಸಿದ್ದರಾಮಯ್ಯನವರೇ, ಮುಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ. ನೀವು ಸ್ವಯಂಘೋಷಿತ ವಕೀಲರಲ್ಲವೇ? ಇಲ್ಲಿರುವ ದಾಖಲೆಯನ್ನೊಮ್ಮೆ ಕಣ್ಣಲ್ಲಿ ಕಣ್ಣಿಟ್ಟು ಓದಿ. 50:50ರ ಅನುಪಾತದಲ್ಲಿಯೇ ಮುಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ’ ಎಂದು ದಾಖಲೆಯನ್ನು ಲಗತ್ತಿಸಿ ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಇದು ಮುಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ? ಒಕ್ಕಣೆಯೋ? ಅಥವಾ ಅಪ್ಪಣೆಯೋ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೂಪರ್ ಸಿಎಂ ಅವರೇ ‘ಒತ್ತಾಯಿಸಿರುತ್ತಾರೆ!!!’ ಎಂದರೆ ಮುಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ. ಈಗ ಹೇಳಿ, ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ? ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಕುಮಾರಸ್ವಾಮಿ ಎಕ್ಸ್ ಸಂದೇಶ

ಮತ್ತೊಂದೆಡೆ, ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಜೆಡಿಎಸ್ ಮೈತ್ರಿ ನಾಯಕರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವ ಪ್ರಕ್ರಿಯೆ ತ್ವರಿತಗೊಳಿಸುವಂತೆ ರಾಜ್ಯಪಾಲರಿಗೆ ಸಲಹೆ ನೀಡಲು ಗುರುವಾರ ನಡೆದ ರಾಜ್ಯ ಸಚಿವಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಗಣಿಪುರಾಣ ಬಿಚ್ಚಿದ್ರೆ ನಿಮ್ಮ ಮನೆ ಮುಂದೆ ಕಾನ್ಸ್​ಟೇಬಲ್​ಗಳು ಸಾಲುಗಟ್ಟಬೇಕಾಗುತ್ತದೆ: ಸಿಎಂಗೆ ಎಚ್​ಡಿಕೆ ಎಚ್ಚರಿಕೆ

ಏತನ್ಮಧ್ಯೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ಕೆಲವು ಕಾಂಗ್ರೆಸ್ ನಾಯಕರು ಇಂದು ದೆಹಲಿಗೆ ತೆರಳಲಿದ್ದು, ಹೈಕಮಾಂಡ್ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ