ಮುಡಾದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಮುಡಾ ಸೈಟ್​ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ 100 ಕೋಟಿ ಮೌಲ್ಯದ 92 ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. ಅಷ್ಟೇ ಅಲ್ಲದೆ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆದಿರುವುದು ದೃಢ ಎಂದು ಹೇಳಿದೆ.

ಮುಡಾದಲ್ಲಿ ಅಕ್ರಮ ದೃಢ: 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ
ಮುಡಾ, ಇಡಿ
Updated By: ಗಂಗಾಧರ​ ಬ. ಸಾಬೋಜಿ

Updated on: Jun 10, 2025 | 2:51 PM

ಬೆಂಗಳೂರು, ಜೂನ್​ 10: ಮುಡಾ ಪ್ರಕರಣದಲ್ಲಿ (muda scam) ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳಿಂದ  ಸುಮಾರು 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್​​ಐಆರ್​​ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದೆ. ಆ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ. ಸದ್ಯ ಮುಡಾ ಕೇಸ್​ನ ತನಿಖೆ ಮುಂದುವರಿದಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ಸೈಟ್‌ಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಲಾಗಿದೆ. ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ತಿಳಿಸಿದೆ.

ಇದನ್ನೂ ಓದಿ
ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ
ಮುಡಾ ಹಗರಣ: ‘‘ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು!’’
ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​
ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ

ಜಾರಿ ನಿರ್ದೇಶನಾಲಯ ಟ್ವೀಟ್​

ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಐಪಿಸಿ, 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು. ಇದೀಗ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇಡಿ ಉಲ್ಲೇಖಿಸಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್: ಆದೇಶ ಕಾಯ್ದಿರಿಸಿದ ಕೋರ್ಟ್, ವಾದ-ಪ್ರತಿವಾದ ವಿವರ ಇಲ್ಲಿದೆ

ಪ್ರಕರಣದಲ್ಲಿ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ವಿರುದ್ಧ ಆರೋಪ ಕೇಳಿಬಂದಿತ್ತು. ನಗದು, ಬ್ಯಾಂಕ್ ವರ್ಗಾವಣೆ, ಚರ, ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮ ಹಂಚಿಕೆ ಮಾಡಲು ಲಂಚ ಪಡೆದಿರುವುದಕ್ಕೆ ಸಂಬಂಧಿಸಿದ ಪುರಾವೆಗಳನ್ನು ತನಿಖೆಯ ಸಮಯದಲ್ಲಿ ಸಂಗ್ರಹಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಈ ಹಿಂದೆ 300 ಕೋಟಿ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿದ್ದ ಇಡಿ, ಇದೀಗ ಮತ್ತೆ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದೆ. ಒಟ್ಟು 400 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇನ್ನೂ 800 ಸೈಟ್ ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ.

ಸಿಎಂ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ: ಸ್ನೇಹಮಯಿ ಕೃಷ್ಣ

ಇತ್ತ ಬೆಂಗಳೂರಿನಲ್ಲಿ ಟಿವಿ9ಗೆ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿಕೆ ನೀಡಿದ್ದು, ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಮುಂದಿನ 3 ಅಥವಾ 4 ತಿಂಗಳಲ್ಲಿ ರಾಜ್ಯದ ಜನರಿಗೆ ಗೊತ್ತಾಗುತ್ತದೆ. ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ಶಿಕ್ಷೆ ಆಗಿಯೇ ಆಗುತ್ತೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:58 pm, Tue, 10 June 25