Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಕೋಟಿ ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್​​ಗೆ ನೋಟಿಸ್

ಬಹುಕೋಟಿ ಬಿಟ್ ಕಾಯಿನ್ ಹಗರಣ ಪ್ರಕರಣ ಆರೋಪಿಯಾಗಿರುವ ಶ್ರೀಕಿಯ ಗರ್ಲ್ ಫ್ರೆಂಡ್ ಪೂಜಾ ಭಟ್​​ಗೆ ಎಸ್​ಐಟಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಬಿಟ್ ಕಾಯಿನ್ ವಹಿವಾಟು, ಕಾರು, ಮನೆ ಪಡೆದ ಹಿನ್ನೆಲೆ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್​ಗೆ ನೋಟಿಸ್ ನೀಡಲಾಗಿದೆ.

ಬಹುಕೋಟಿ ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್​​ಗೆ ನೋಟಿಸ್
ಆರೋಪಿ ಶ್ರೀಕಿ
Follow us
TV9 Web
| Updated By: ಆಯೇಷಾ ಬಾನು

Updated on: Jun 06, 2024 | 1:55 PM

ಬೆಂಗಳೂರು, ಜೂನ್.06: ಬಹುಕೋಟಿ ಬಿಟ್ ಕಾಯಿನ್ ಹಗರಣ (Bitcoin) ಪ್ರಕರಣದ ಆರೋಪಿಯಾಗಿರುವ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯಿಂದಾಗಿ (Sriki) ಆತನ ಗರ್ಲ್ ಫ್ರೆಂಡ್​ಗೂ ಸಂಕಷ್ಟ ಎದುರಾಗಿದೆ. ಎಸ್​ಐಟಿ (SIT) ಅಧಿಕಾರಿಗಳು ಆರೋಪಿ ಶ್ರೀಕಿ ಗರ್ಲ್ ಫ್ರೆಂಡ್​ ಪೂಜಾ ಭಟ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್​ನಲ್ಲಿ (Notice) ತಿಳಿಸಲಾಗಿದೆ.

ಶ್ರೀಕಿ ಬಿಟ್ ಕಾಯಿನ್ ವಹಿವಾಟು, ಶ್ರೀಕಿಯಿಂದ ಕಾರು, ಮನೆ ಪಡೆದುಕೊಂಡಿರೋ ಹಿನ್ನೆಲೆ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್​ಗೆ ನೋಟಿಸ್ ನೀಡಲಾಗಿದೆ. ಸದ್ಯ ರಾಜಸ್ಥಾನದಲ್ಲಿ ಇರುವ ಪೂಜಾ ಭಟ್ ವಿಚಾರಣೆಗಾಗಿ ಬೆಂಗಳೂರಿಗೆ ಆಗಮಿಸಬೇಕಿದೆ.

2017ರಲ್ಲಿ ಆರೋಪಿ ಶ್ರೀಕಿ ತುಮಕೂರಿನಲ್ಲಿರುವ ಯೂನೊಕಾಯಿನ್ ಟೆಕ್ನಾಲಜೀಸ್ ಕಂಪನಿಯ ಸರ್ವರ್ ಹ್ಯಾಕ್ ಮಾಡಿ 60.6 ಬಿಟ್‌ ಕಾಯಿನ್‌ಗಳನ್ನು (ಮಾರುಕಟ್ಟೆ ಮೌಲ್ಯ ₹32.48 ಕೋಟಿ ಮೌಲ್ಯ) ಕಳ್ಳತನ ಮಾಡಿದ್ದ. ಈ ಸಂಬಂಧ ಸದ್ಯ ಎಸ್‌ಐಟಿ ಅಧಿಕಾರಿಗಳು, ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ

ಇನ್ನು ಈ ಘಟನೆ ಸಂಬಂಧ ಯೂನೊಕಾಯಿನ್ ಟೆಕ್ನಾಲಜೀಸ್ ಕಂಪನಿ ನಿರ್ದೇಶಕ ಬಿ.ವಿ. ಹರೀಶ್ ಅವರು ತುಮಕೂರಿನ ನ್ಯೂ ಎಕ್ಸ್‌ಟೆನ್ಶನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮೊದಲಿಗೆ ಆರೋಪಿ ಯಾರು ಎಂದು ಪತ್ತೆಯಾಗದ ಹಿನ್ನೆಲೆ ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡು ಪರಿಶೀಲಿಸಿದಾಗ, ಶ್ರೀಕಿಯೇ ಆರೋಪಿ ಎಂಬುದು ಸಾಭೀತಾಗಿದೆ.

ಮತ್ತೊಂದೆಡೆ ಈ ಪ್ರಕರಣದ ವಿಚಾರಣೆ ವೇಳೆ ಕೆಲವು ಬಾರಿ ಶ್ರೀಕಿ ಗೈರಾಗಿದ್ದ. ಅಲ್ಲದೆ ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿರುವ ಪಂಚತಾರಾ ಹೋಟೆಲ್‌ವೊಂದರಲ್ಲಿ ಆತ ವಾಸ್ತವ್ಯ ಹೂಡಿದ್ದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಅದೇ ಹೋಟೆಲ್‌ನಲ್ಲಿಯೇ ಆತನನ್ನು ಒಂದು ತಿಂಗಳ ಹಿಂದೆ ಬಂಧಿಸಲಾಗಿದೆ. ಸದ್ಯ ಇದೀಗ ರಾಜಸ್ಥಾನದಲ್ಲಿರುವ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್​ಗೆ ನೋಟಿಸ್ ನೀಡಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್