ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಹಲವು ವಿಡಿಯೋ ಪತ್ತೆ

ವಿಚಾರಣೆ ವೇಳೆ ಬಂಧಿತ ಆರೋಪಿಗಳ ಮೊಬೈಲ್​ನಲ್ಲಿ ಹಲವು ವಿಡಿಯೋಗಳು ಪತ್ತೆಯಾಗಿವೆ. ಕುಡಿದು ಮೋಜು ಮಸ್ತಿ ಮಾಡೋದೆ ಆರೋಪಿಗಳ ಕೆಲಸವಾಗಿದೆ. ಯುವಕ, ಯುವತಿಯರು ಸೇರಿ ಅರೆ ನಗ್ನ ಪಾರ್ಟಿ ಮಾಡುತ್ತಿದ್ದರುವುದು ವಿಡಿಯೋದಲ್ಲಿದೆ.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಹಲವು ವಿಡಿಯೋ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 20, 2021 | 9:31 AM

ಬೆಂಗಳೂರು: ಬಾಂಗ್ಲಾ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ನಡೆಸಿದ ಪೊಲೀಸರಿಗೆ ಮತ್ತಷ್ಟು ಮಾಹಿತಿ ಇದೀಗ ಲಭ್ಯವಾಗಿದೆ. ವಿಚಾರಣೆ ವೇಳೆ ಬಂಧಿತ ಆರೋಪಿಗಳ ಮೊಬೈಲ್​ನಲ್ಲಿ ಹಲವು ವಿಡಿಯೋಗಳು ಪತ್ತೆಯಾಗಿವೆ. ಕುಡಿದು ಮೋಜು ಮಸ್ತಿ ಮಾಡೋದೆ ಆರೋಪಿಗಳ ಕೆಲಸವಾಗಿದೆ. ಯುವಕ, ಯುವತಿಯರು ಸೇರಿ ಅರೆ ನಗ್ನ ಪಾರ್ಟಿ ಮಾಡುತ್ತಿದ್ದರುವುದು ವಿಡಿಯೋದಲ್ಲಿದೆ. ಕಂಠ ಪೂರ್ತಿ ಕುಡಿದು ಈ ಗ್ಯಾಂಗ್ ಸ್ಟೆಪ್ ಹಾಕುತ್ತಿರುವುದು ಪತ್ತೆಯಾದ ವಿಡಿಯೋಗಳಲ್ಲಿ ಸ್ಪಷ್ಟವಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಡಿಎನ್ಎ ಟೆಸ್ಟ್​ಗೆ ಮುಂದಾಗಿದ್ದಾರೆ. ಡಿಎನ್‌ಎ ಟೆಸ್ಟ್‌ಗೆ ಸಂತ್ರಸ್ತೆ ಮತ್ತು ಆರೋಪಿ ಸ್ಯಾಂಪಲ್ಸ್ ಸಂಗ್ರಹಿಸಿದ್ದಾರೆ. ಮಡಿವಾಳದಲ್ಲಿರುವ ಎಫ್ಎಸ್ಎಲ್‌ನಲ್ಲಿ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದೆ. ತ್ವರಿತ ಗತಿಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಶೀಘ್ರದಲ್ಲಿಯೇ ಚಾರ್ಜ್‌ಶೀಟ್ ಸಲ್ಲಿಸುತ್ತಾರೆ. ಎಲ್ಲಾ ಆಯಾಮಾದಲ್ಲೂ ತನಿಖೆ ಮುಕ್ತಾಯದ ಹಂತಕ್ಕೆ ಬಂದಿದ್ದು, ಇನ್ನೇರಡು ದಿನದಲ್ಲಿ ದೋಷಾರೋಪಣ ಪಟ್ಟಿಯನ್ನು ಕೋರ್ಟ್​ಗೆ ಸಲ್ಲಿಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ.

ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ವಿಚಾರ ಬಹಿರಂಗವಾಗಿದೆ. ಮಾನವ ಕಳ್ಳಸಾಗಣೆ ದಂಧೆಯ ಕಿಂಗ್ಪಿನ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸರು ನೀಡಿದ ಮಾಹಿತಿ ಮೇರೆಗೆ ಬಾಂಗ್ಲಾದಲ್ಲಿ ಆರೋಪಿಗಳನ್ನು ಅಲ್ಲಿನ ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಕಿಂಗ್ಪಿನ್ ಅಶ್ರಾಫ್ ಉಲ್ಲಾ ಇಸ್ಲಾಂ ಅಲಿಯಾಸ್ ಬಾಸ್ ರಫಿ, ಶಹೀದಾ ಬೇಗಮ್ ಅಲಿಯಾಸ್ ಮೇಡಮ್ ಶಹೀದಾ, ಇಸ್ಮಾಯಿಲ್, ರೆಹಮಾನ್ ಶೇಖ್ ಬಂಧಿತ ಆರೋಪಿಗಳು. ರಫಿ ಕಳೆದ 10 ವರ್ಷಗಳಿಂದ ಯುವತಿಯರ ಕಳ್ಳಸಾಗಣೆ ಮಾಡುತ್ತಿದ್ದ. ಈವರೆಗೆ ಸುಮಾರು 500 ಯುವತಿಯರನ್ನು ಭಾರತಕ್ಕೆ ಕಳ್ಳಸಾಗಣೆ ಮಾಡಿದ್ದ. ಇಷ್ಟೂ ಯುವತಿಯರನ್ನು ವೇಶ್ಯಾವಾಟಿಕೆ ದಂಧೆಗೆ ಬಳಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ತಪ್ಪೊಪ್ಪಿಕೊಂಡಿದ್ದ ಆರೋಪಿಗಳು ಬಂಧಿತಕ್ಕೊಳಗಾದ ಆರೋಪಿಗಳು ತಮ್ಮ ತಪ್ಪನ್ನು ಒಪ್ಪೊಕೊಂಡಿದ್ದಾರೆ. ತಾವೂ ಅಕ್ರಮ ನುಸುಳುಕೊರರು ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾವೆಲ್ಲಾ ಬಾಂಗ್ಲಾದವರು. ನಾವು ಯಾವುದೇ ಪಾಸ್ ಪೋರ್ಟ್ ಹೊಂದಿಲ್ಲ. ಭಾರತಕ್ಕೆ ಅತಿಕ್ರಮವಾಗಿ ನುಸುಳುತ್ತಿದ್ದೇವೆ. ನಂತರ ಬೆಂಗಳೂರಿಗೆ ಬಂದು ನಾನಾ ಕಡೆಯಲ್ಲಿ ವಾಸಿಸುತ್ತಿದ್ದೇವೆ. ಆಕೆಗೂ ನಮಗೂ ವ್ಯವಹಾರಿಕ ವಿಚಾರಕ್ಕೆ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ 6 ಜನರು ಕೃತ್ಯ ಎಸಗಿದ್ದೇವೆ ಎಂದು ತನಿಖೆ ವೇಳೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ವೇಳೆ ಬೃಹತ್ ಮಾನವ ಕಳ್ಳಸಾಗಣೆ ಜಾಲ ಬಹಿರಂಗ

ಬಾಂಗ್ಲಾ ಯುವತಿ ಮೇಲೆ ಗ್ಯಾಂಗ್​ರೇಪ್​ ಪ್ರಕರಣ; ಮತ್ತೊಬ್ಬ ಆರೋಪಿಯ ಮೇಲೆ ಫೈರಿಂಗ್

(Multiple videos found during police probe into gang rape of Bangladesh woman)

Published On - 8:54 am, Sun, 20 June 21

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು