Mumtaz Ali Khan ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ, ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ

Mumtaz Ali Khan Death ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ, ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ.

Mumtaz Ali Khan ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ, ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ
ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್
Follow us
TV9 Web
| Updated By: ಆಯೇಷಾ ಬಾನು

Updated on: Jun 07, 2021 | 12:49 PM

ಬೆಂಗಳೂರು: ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್(94) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಗಂಗಾನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು(ಸೋಮವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮಗಳನ್ನ ಒಂಟಿ ಮಾಡಿ ಇಹ ಲೋಕ ತ್ಯಜಿಸಿದ್ದಾರೆ.

ಮುಮ್ತಾಜ್ ಅಲಿ ಖಾನ್ 2008ರಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಸದ್ಯ 30 ವರ್ಷಗಳಿಂದ ಬೆಂಗಳೂರಿನ ಆರ್ಟಿ ನಗರದಲ್ಲಿ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಯನ್ನು ನಡೆಸುತ್ತಿದ್ದರು. ಹಾಗೂ ಆ ಶಾಲೆಯ ಮಕ್ಕಳಿಗೆ ಸಂಪೂರ್ಣವಾಗಿ ಉಚಿತ ಶಿಕ್ಷಣ, ಮಧ್ಯಾಹ್ನದ ಊಟ, ಪಠ್ಯ ಪುಸ್ತಕ, ಸಮವಸ್ತ್ರಗಳನ್ನು ನೀಡಿ ಮಕ್ಕಳಿಗೆ ಶಿಕ್ಷಣ ನೀಡುವ ಮಹಾ ಕಾರ್ಯ ಮಾಡುತ್ತಿದ್ದರು. ತಮಗೆ ಬರುವ ಪಿಂಚಣಿ ಮತ್ತು ಇತರೆ ಸ್ವಂತ ಮೂಲಗಳ ಆದಾಯವನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ಬಳಸುತ್ತಿದ್ದರು. ಪ್ರೊ.ಮುಮ್ತಾಜ್ ಅಲಿ ಖಾನ್ರ ಪತ್ನಿ ಈ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ರು.

ಮುಮ್ತಾಜ್ ಅಲಿ ಖಾನ್ ನಿಧನಕ್ಕೆ ಸಿಎಂ ಬಿಎಸ್‌ವೈ ಸಂತಾಪ ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ, ಹಜ್ , ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ ಹಾಗೂ ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ರೇಷನ್; ಗದಗ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್​ಗಾಗಿ ಮುಗಿಬಿದ್ದ ಸಾರ್ವಜನಿಕರು