ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪಿನಾಯಿಲ್ ಕುಡಿದು ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಸಾವು

| Updated By: guruganesh bhat

Updated on: Mar 14, 2021 | 1:32 PM

ಅರಳಾಳುಸಂದ್ರ ಗ್ರಾಮದ ನಾಗರಾಜ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಹಿಂದೆ ಕನಕಪುರ ತಾಲೂಕಿನ ಶೀಗೆಕೋಟೆ ನಿವಾಸಿ ವೀರಭದ್ರಚಾರಿಯನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ಪೊಲೀಸ್ ವಶದಲ್ಲಿ ಇದ್ದಾಗಲೆ ಶೌಚಾಲಯದ ಪಿನಾಯಿಲ್ ಕುಡಿದಿದ್ದಾನೆ.

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪಿನಾಯಿಲ್ ಕುಡಿದು ಆತ್ಮಹತ್ಯೆ: ಚಿಕಿತ್ಸೆ ಫಲಿಸದೆ ಸಾವು
ಸಾಂದರ್ಭಿಕ ಚಿತ್ರ
Follow us on

ರಾಮನಗರ: ಹತ್ಯೆ ಪ್ರಕರಣದಲ್ಲಿ ಮಾರ್ಚ್11ರಂದು ರಾಮನಗರ ಜಿಲ್ಲೆಯ ಕನಕಪುರ ಗ್ರಾಮಾಂತರ ಪೊಲೀಸರು ಬಂಧಿಸಿದ ಆರೋಪಿ ವೀರಭದ್ರಚಾರಿ ಸಾವನ್ನಪ್ಪಿದ್ದಾನೆ. ಪೊಲೀಸ್ ವಶದಲ್ಲಿದ್ದಾಗ ಪಿನಾಯಿಲ್ ಕುಡಿದಿದ್ದ ಆರೋಪಿ ಹಾರೋಹಳ್ಳಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.

ಅರಳಾಳುಸಂದ್ರ ಗ್ರಾಮದ ನಾಗರಾಜ್ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಹಿಂದೆ ಕನಕಪುರ ತಾಲೂಕಿನ ಶೀಗೆಕೋಟೆ ನಿವಾಸಿ ವೀರಭದ್ರಚಾರಿಯನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ಪೊಲೀಸ್ ವಶದಲ್ಲಿ ಇದ್ದಾಗಲೆ ಶೌಚಾಲಯದ ಪಿನಾಯಿಲ್ ಕುಡಿದಿದ್ದಾನೆ. ತಕ್ಷಣ ವೀರಭದ್ರಚಾರಿಯನ್ನು ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವೀರಭದ್ರಚಾರಿ ಸಾವನ್ನಪ್ಪಿದ್ದಾನೆ.

ಯಾದಗಿರಿ ಜಿಲ್ಲೆಯಲ್ಲಿ ವ್ಯಕ್ತಿ ನೇಣಿಗೆ ಶರಣು:
ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರದ ಗಂಜ್ ಏರಿಯಾದಲ್ಲಿ ನಡೆದಿದೆ. 45 ವರ್ಷದ ನಜೀರ್ ಖುರೇಷಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.

ಕಳೆದ ಹಲವು ವರ್ಷಗಳಿಂದ ಪೇಂಟಿಂಗ್ ಮಾಡಿಕೊಂಡು ಜೀವನ ನಡೆಸುತ್ತಿದ್ದ ನಜೀರ್ ಖುರೇಷಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ ಕಾರ್ಗಲ್ ಬಳಿ ಡೆತ್​ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ: ಸಾವಿಗೂ ಮುನ್ನ ಗೂಗಲ್​ನಲ್ಲಿ ಹುಡುಕಾಟ

Published On - 1:29 pm, Sun, 14 March 21