ವಿಜಯಪುರ: ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಜಗಳ ಏರ್ಪಟ್ಟಿತ್ತು. ಜಗಳ ಅತಿರೇಕಗೊಂಡ ಪರಿಣಾಮ ಕೊಲೆಯಲ್ಲಿ ಅಂತ್ಯಗೊಂಡಿದೆ. ಈ ಘಟನೆ ಇಂಡಿ ತಾಲೂಕಿನ ಲೋಣಿ ಕೆ.ಡಿ. ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಚ್ಚೇಂದ್ರ ಪಟಗಾರ (55) ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವಾಗಿ ತಿಳಿದು ಬಂದಿದೆ. ಕೊಲೆಗೈದ ನಂತರ ಆರೋಪಿ ಪರಾರಿಯಾಗಿದ್ದಾನೆ. ದಾಯಾದಿಗಳೇ ಇವರನ್ನು ಕೊಲೆ ಮಾಡಿರುವುದಾಗಿ ಆರೋಪ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.