AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ!

ನೆಲಮಂಗಲದ ಬಾಗಲಗುಂಟೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕೈಕಾಲು ಕಟ್ಟಿ, ಹಲ್ಲೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಮೃತದೇಹ ಗುರುತು ಪತ್ತೆಯಾಗಿಲ್ಲ. ಮೋಹನ್ ಕೃಷ್ಣ ಮತ್ತು ಊರ್ವಶಿ ಎಂಬವರು ಈ ಮನೆಯನ್ನು ಬಾಡಿಗೆ ಪಡೆದಿದ್ದರು ಎನ್ನಲಾಗಿದ್ದು, ಅವರೀಗ ನಾಪತ್ತೆಯಾಗಿದ್ದಾರೆ. ಕೊಲೆ ನಡೆದು ಹಲವು ದಿನಗಳಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೀಗ ಹಾಕಿದ್ದ ಮನೆಯಿಂದ ಬರ್ತಿತ್ತು ದುರ್ನಾಥ: ಬಾಗಿಲು ತೆರೆದು ನೋಡಿದ್ರೆ ಕಂಡಿದ್ದು ಯುವಕನ ಬೆತ್ತಲೆ ಶವ!
ಶವ ಪತ್ತೆಯಾಗಿರುವ ಮನೆImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Feb 28, 2026 | 7:59 AM

Share

ನೆಲಮಂಗಲ, ಫೆಬ್ರವರಿ 28: ಯುವಕನೋರ್ವನ ಕೈಕಾಲು ಕಟ್ಟಿ, ಬಾಯಿಗೆ ಟೇಪ್ ಸುತ್ತಿ, ರಾಡ್​​ನಿಂದ ಹಲ್ಲೆ ಮಾಡಿದ್ದಲ್ಲದೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾವ್ಯಾಪ್ತಿಯ ವಿಜಯಲಕ್ಷ್ಮೀ ಬಡಾವಣೆಯಲ್ಲಿ ನಡೆದಿದೆ. ನಟರಾಜ್​​ ಎಂಬವರು ಬಾಡಿಗೆಗೆ ನೀಡಿದ್ದ ಮನೆಯಿಂದ ದುರ್ನಾಥ ಬರುತ್ತಿದ್ದ ಹಿನ್ನೆಲೆ ಪರೀಕ್ಷಿಸಿದಾಗ ನಾಲ್ಕೈದು ದಿನಗಳ ಹಿಂದೆಯೇ ಕೊಲೆ ಮಾಡಿರುವ ಕಾರಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿ ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಮೃತದೇಹ ಪತ್ತೆಯಾಗಿರುವ ಈ ಮನೆಯನ್ನು ಮಾಲಿಕ ನಟರಾಜ್​​ ಅವರ ಬಳಿ ಎರಡು ತಿಂಗಳ ಹಿಂದೆ ಮೋಹನ್ ಕೃಷ್ಣ ಮತ್ತು ಊರ್ವಶಿ ಎಂಬುವವರು ಬಾಡಿಗೆ ಗೆ ಪಡೆದಿದ್ದರು. ಊರ್ವಶಿ ನಾನು ಸಿನೆಮಾ ಸಹ ನಿರ್ದೇಶಕಿಯಾಗಿ ಕೆಲಸ ಮಾಡುತ್ತಿದ್ದೆನೆ ಅಂತ ಮನೆ ಮಾಲಿಕರ ಬಳಿ ಪರಿಚಯಿಸಿಕೊಂಡಿದ್ದಳು ಎನ್ನಲಾಗಿದೆ. ಬಾಡಿಗೆ ಸಂಬಂಧ ಇನ್ನೇನು ಅಗ್ರಿಮೆಂಟ್ ಮಾಡಿಸಬೇಕು ಅಂದುಕೊಳ್ಳುವಷ್ಟರಲ್ಲಿ ಮುಂದಿನ ತಿಂಗಳು ಮನೆ ಖಾಲಿ ಮಾಡಿಬಿಡ್ತೀವಿ ಎಂದು ಇವರು ತಿಳಿಸಿದ್ದರಂತೆ. ಹೀಗಾಗಿ ಮತ್ತೇನಕ್ಕೆ ಅಗ್ರಿಮೆಂಟ್​​ ಮಾಡಿಸೋದು ಎಂದು ಭಾವಿಸಿ ಮನೆ ಮಾಲಿಕ ನಟರಾಜ್​​ ಕೂಡ ಸುಮ್ಮನಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಆತ್ಮಹತ್ಯೆ? ಹಸೆಮಣೆ ಏರಬೇಕಿದ್ದವಳ ದಾರುಣ ಅಂತ್ಯ

ಆ ಬಳಿಕ ನಟರಾಜ್​​ ಮನೆ ಬಳಿ ಬಂದಾಗೆಲ್ಲ ಬಾಗಿಲಿಗೆ ಬೀಗ ಹಾಕಿರೋದು ಕಂಡುಬರುತ್ತಿತ್ತು. ಈ ನಡುವೆ ಅಕ್ಕಪಕ್ಕದ ಮನೆಯವರು ನಟರಾಜ್ ಮಗನಿಗೆ ಫೋನ್ ಮಾಡಿ ನಿಮ್ಮ ಮನೆಯಿಂದ ಏನೋ ಕೆಟ್ಟ ವಾಸನೆ ಬರ್ತಿದೆ ಎಂದು ತಿಳಿಸಿದ್ದಾರೆ.  ರವಿಕಿರಣ್ ಮನೆಗೆ ಬಂದು ನೋಡಿದಾಗ ಕೊಲೆಯಾದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ ಕೂಡಲೇ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗೂ ಮುನ್ನ ಮನೆಯಲ್ಲಿ ಪಾರ್ಟಿ ನಡೆದಿರುವ ಬಗ್ಗೆಯೂ ಸಂಶಯ ವ್ಯಕ್ತವಾಗಿದ್ದು, ಮೃತದೇಹವನ್ನು ಶಿಫ್ಟ್​​ ಮಾಡಲಾಗಿದೆ.

ಇನ್ನು ಕೊಲೆಯಾಗಿರುವ ವ್ಯಕ್ತಿ ಯಾರೆಂಬ ಬಗ್ಗೆ ಗುರುತು ಪತ್ತೆಯಾಗಿಲ್ಲ. ಘಟನೆ ನಡೆದು ನಾಲ್ಕೈದು ದಿನಗಳಾಗಿರುವ ಹಿನ್ನೆಲೆ ದೇಹ ಗುರುತು ಸಿಗದಷ್ಟು ಕೊಳೆತಿದ್ದು, ಈ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ. ಮನೆ ಬಾಡಿಗೆಗೆ ಪಡೆದಿದ್ದ ಊರ್ವಶಿ ಮತ್ತು ಮೋಹನ ಕೃಷ್ಣ ಗಂಡ ಹೆಂಡತಿನಾ ಎಂಬ ಅನುಮಾನ ಕೂಡ ಇದ್ದು, ಕೊಲೆಯಾದ ವ್ಯಕ್ತಿ ಯಾರು ಎಂಬ ಪ್ರಶ್ನೆಗೆ ಬೀಗ ಹಾಕಿಕೊಂಡು ಹೋಗಿರುವ ಇವರ ಬಂಧನದ ನಂತರವೇ ಉತ್ತರ ಸಿಗಬೇಕಿದೆ.

ಮಂಜುನಾಥ್ ಟಿವಿ9 ನೆಲಮಂಗಲ

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!