Bengaluru News: ಶಾಸಕರ ಕಚೇರಿ ಬಳಿ ವೃದ್ಧನ ಹತ್ಯೆ, ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಹಂತಕ!

ಚಾಮರಾಜಪೇಟೆ 4ನೇ ಕ್ರಾಸ್​ ಬಳಿಯ ಶಾಸಕರ ಕಚೇರಿ ಸಮೀಪವಿರುವ ಕಿಂಗ್ಸ್​ ಎನ್​ಕ್ಲೇವ್​ ಅಪಾರ್ಟ್​​ಮೆಂಟ್​​ನಲ್ಲಿ ನಿನ್ನೆ ರಾತ್ರಿ ವೃದ್ಧರೊಬ್ಬರ ಕೊಲೆ ನಡೆದಿದ್ದು, ಶಂಕಿತ ಆರೋಪಿ ಜೈಪುರಕ್ಕೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

Bengaluru News: ಶಾಸಕರ ಕಚೇರಿ ಬಳಿ ವೃದ್ಧನ ಹತ್ಯೆ, ಮನೆಯಲ್ಲಿದ್ದ ಚಿನ್ನಾಭರಣ ದೋಚಿದ ಹಂತಕ!
ಕೊಲೆಯಾದ ಜುಗ್ಗರಾಜ್, ಮನೆಯವರ ಆಕ್ರಂದನ
Follow us
TV9 Web
| Updated By: Rakesh Nayak Manchi

Updated on:May 25, 2022 | 2:16 PM

ಬೆಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ವೃದ್ಧೊಬ್ಬರ ಭೀರಕ ಕೊಲೆ (Murder)ಯಾದ ಘಟನೆ ನಡೆದಿದೆ. ಚಾಮರಾಜಪೇಟೆ 4ನೇ ಕ್ರಾಸ್​ ಬಳಿಯ ಶಾಸಕರ ಕಚೇರಿ ಸಮೀಪವಿರುವ ಕಿಂಗ್ಸ್​ ಎನ್​ಕ್ಲೇವ್​ ಅಪಾರ್ಟ್​​ಮೆಂಟ್​​ನಲ್ಲಿ ಜುಗ್ಗರಾಜ್ ಜೈನ್(77) ಎಂಬವರ ಭೀಕರ ಹತ್ಯೆ ನಡೆದಿದೆ. ದೀಪಂ ಎಲೆಕ್ಟ್ರಿಕಲ್ಸ್ ಎಂಬ ಅಂಗಡಿ ಇಟ್ಟುಕೊಂಡಿರುವ ಜುಗ್ಗರಾಜ್, ತನ್ನ ಮನೆಯಲ್ಲಿ ಅಂಗಡಿ ಕೆಲಸಗಾರನೊಂದಿಗೆ ಇದ್ದರು. ಹೀಗಾಗಿ ಕೆಲಸಗಾರನೇ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಚಾಮರಾಜಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜುಗ್ಗರಾಜ್ ಜೈನ್​ ತನ್ನ ಮಗನೊಂದಿಗೆ ಚಾಮರಾಜಪೇಟೆಯಲ್ಲಿ ವಾಸವಿದ್ದರು. ಅಲ್ಲದೆ, ಮಗ ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ. ಮಗನ ಪತ್ನಿ ತಾಯಿ ಮನೆಗೆ ತೆರಳಿದ್ದರು. ಹೀಗಾಗಿ ಅಂಗಡಿ ಕೆಲಸಗಾರ ಹಾಗೂ ಜುಗ್ಗರಾಜ್ ಇಬ್ಬರೆ ರಾತ್ರಿ ಮನೆಯಲ್ಲಿದ್ದರು. ಇಂದು ಬೆಳಗ್ಗೆ ಸಮಯ ಕಳೆದರೂ ಯಾಕೆ ಅಂಗಡಿ ತೆರೆದಿಲ್ಲ ಎಂದು ಮೊಮ್ಮಗ ಮನೆಗೆ ತೆರಳಿದ್ದಾನೆ. ಈ ವೇಳೆ ಜುಗ್ಗರಾಜು ಅವರ ಕೊಲೆ ನಡೆದಿರುವುದು ತಿಳಿದುಬಂದಿದೆ. ಕೊಲೆ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಘಟನಾ ಸ್ಥಳಕ್ಕೆ ಎಫ್​ಎಸ್​ಎಲ್​ ಅಧಿಕಾರಿಗಳೂ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಟೆಕ್ಸಾಸ್​ ಶಾಲೆಯಲ್ಲಿ ಗುಂಡಿನ ದಾಳಿ: 19 ಮಕ್ಕಳು ಸೇರಿ 21 ಮುಗ್ಧರ ಹತ್ಯೆ, ಶೋಕಾಚರಣೆಗೆ ಅಧ್ಯಕ್ಷ ಜೋ ಬೈಡೆನ್ ಸೂಚನೆ

ಅಂಗಡಿ ಕೆಲಸಗಾರನೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಆರೋಪಿ ತನ್ನ ಊರು ಜೈಪುರಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ದುಷ್ಕೃತ್ಯ ಎಸಗಿದ ನಂತರ ಹಂತಕ ಮನೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾನೆ.

ಅಬಕಾರಿ ಪೊಲೀಸರ ಮೇಲೆ ದಾಳಿ ಪ್ರಕರಣ, ಐವರು ಅರೆಸ್ಟ್

ಯಾದಗಿರಿ: ನಕಲಿ ಮದ್ಯ ಸಾಗಾಟ ಹಿನ್ನಲೆ ದಾಳಿ ಮಾಡಿದ್ದ ಅಬಕಾರಿ ಇಲಾಖೆ‌ ಪೊಲೀಸರ (Excise police) ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಪೊಲೀಸರು ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಚಂದಪ್ಪ, ನಾನಾಗೌಡ, ನಾಗಪ್ಪ, ಮುದಕಪ್ಪ, ಮಾನಪ್ಪ ಎಂಬ ಆರೋಪಿಗಳನ್ನು ಪೊಲೀಸರು ನಿನ್ನೆ ಬಂಧಿಸಿದ್ದಾರೆ.  

ಇದನ್ನೂ ಓದಿ: Crime News: ತಂದೆ ಮೇಲಿನ ದ್ವೇಷಕ್ಕೆ ಎರಡೂವರೆ ವರ್ಷದ ಬಾಲಕನ ಕೊಲೆ ಮಾಡಿದ ಪಾಪಿಗಳು, ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಯಾದಗಿರಿ ಜಿಲ್ಲೆಯ ಶಹಾಪುರ‌ ತಾಲೂಕಿನ ಚಂದಾಪುರ ಗ್ರಾಮದಲ್ಲಿ ನಕಲಿ ಮದ್ಯ ಸಂಗ್ರಹ ಹಾಗೂ ಸಾಗಾಟದ ಬಗ್ಗೆ ಮಾಹಿತಿ ತಿಳಿದ ಶಹಾಪುರ ವಿಭಾಗದ ಅಬಕಾರಿ ಇನ್ಸ್ಪೆಕ್ಟರ್ ವಿಜಯ ಕುಮಾರ್‌ ಮತ್ತು ಸಿಬ್ಬಂದಿ ಮೇ 19ರಂದು ಕಾರ್ಯಾಚರಣೆ ನಡೆಸಿದ್ದರು. ನಕಲಿ ಮದ್ಯೆ ಮಾರಾಟ‌ ಮಾಡುತ್ತಿದ್ದ ಆರೋಪಿ ಹನುಮಂತ್ರಾಯನನ್ನು ಬಂಧಿಸಿ ಕರೆದೊಯ್ಯುವಾಗ 40ಕ್ಕೂ ಹೆಚ್ಚು ಮಂದಿ ಇದ್ದ ಉದ್ರಿಕ್ತ ಗುಂಪೊಂದು ಪೊಲೀಸರ ಮೇಲೆ ಹಲ್ಲೆ ನಡೆಸಿತ್ತು. ಈ ವೇಳೆ ಆರೋಪಿ ತಪ್ಪಿಸಿಕೊಂಡಿದ್ದನು. ಘಟನೆ ನಡೆದ ಮಾರನೇ ದಿನ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ನಿನ್ನೆ ಐವರನ್ನು ಬಂಧಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:15 pm, Wed, 25 May 22

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?