AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ

ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು - ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು.

ಕೇಂದ್ರ ಗಣಿ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಸಚಿವ ಮುರುಗೇಶ್ ನಿರಾಣಿ: ಮಹತ್ವದ ವಿಚಾರ ಚರ್ಚೆ
ಪ್ರಹ್ಲಾದ್​ ಜೋಶಿ ಭೇಟಿ ಮಾಡಿದ ನಿರಾಣಿ
ರಾಜೇಶ್ ದುಗ್ಗುಮನೆ
|

Updated on:Feb 06, 2021 | 9:59 PM

Share

ಬೆಂಗಳೂರು: ಸುಪ್ರೀಂಕೋರ್ಟ್ ನಿದೇರ್ಶನದಂತೆ ಕಬ್ಬಿಣದ ಅದಿರು ಗಣಿ ಕಂಪನಿಗಳಿಂದ ದಂಡದ ರೂಪದಲ್ಲಿ ಕಳೆದ ಆರು ವರ್ಷಗಳಿಂದ ಸಂಗ್ರಹಿಸಿರುವ ಸುಮಾರು 18 ಸಾವಿರ ಕೋಟಿ ರೂಪಾಯಿ ನಿಧಿಯನ್ನು ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಪಡೆಯಲು ಕಾನೂನಿನ ನೆರವು ನೀಡಬೇಕೆಂದು ಸಚಿವ ಮುರುಗೇಶ್ ನಿರಾಣಿ ಅವರು, ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

ಈ ಸಂಬಂಧ ಶನಿವಾರ ಬೆಂಗಳೂರಿನ ಬಿಜೆಪಿ ಕಚೇರಿಯನ್ನು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಗಣಿ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿ ಮಾಡಿದ ಗಣಿ ಮತ್ತು ಭೂ‌ ವಿಜ್ಞಾನ ಸಚಿವ ನಿರಾಣಿ ಮಾತುಕತೆ ನಡೆಸಿದ್ದಾರೆ.

ಕಬ್ಬಿಣದ ಅದಿರು ಗಣಿಗಳಿಂದ ದಂಡ ಮತ್ತು ಲೆವಿ ರೂಪದಲ್ಲಿ 18,000 ಕೋಟಿ ರೂಪಾಯಿಯನ್ನು ಕಳೆದ ಆರು ವರ್ಷಗಳಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದ ಮೂಲಕ ಸಂಗ್ರಹಿಸಲಾಗಿದೆ. ಸಂಗ್ರಹವಾದ ನಿಧಿಯನ್ನು ರಾಜ್ಯದ ಬೊಕ್ಕಸಕ್ಕೆ ವರ್ಗಾಯಿಸಲು ಕಾನೂನು ನೆರವು ನೀಡುವಂತೆ ಕೋರಿದರು.

ಇದೇ ವೇಳೆ ನಿರಾಣಿ ಅವರು,ಗಣಿಗಾರಿಕೆಯಿಂದ ಹಾನಿಗೊಳಗಾದ ಪ್ರದೇಶಗಳಾದ ಬಳ್ಳಾರಿ , ಚಿತ್ರದುರ್ಗ ಮತ್ತು ತುಮಕೂರುಗಳಿಗೆ ಪುನರ್ವಸತಿ ಕಲ್ಪಿಸಲು – ಸಿಇಪಿಎಂಐಜಡ್ ಅನುಷ್ಠಾನ ಮಾಡಲು ಅವಕಾಶ ನೀಡಬೇಕೆಂದು ಆಗ್ರಹ ಮಾಡಿದರು. ಇದು ದೀರ್ಘಾವಧಿಯ ಬೇಡಿಕೆಯಾಗಿದ್ದು, ಆದಷ್ಟು ಬೇಗ ಸೂಕ್ತವಾದ ನಿರ್ಧಾರ ತೆಗೆದುಕೊಂಡರೆ, ಹೆಚ್ಚಿನ ಅನುಕೂಲವಾಗಲಿದೆ ಜೋಶಿ ಅವರಿಗೆ ನಿರಾಣಿಯವರು ಮನವರಿಕೆ ಮಾಡಿಕೊಟ್ಟರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಪ್ರಹ್ಲಾದ್ ಜೋಶಿ,ಈ ವಿಷಯದ ಕುರಿತು ಹೆಚ್ಚಿನ ಚರ್ಚೆಗಾಗಿ ದೆಹಲಿಗೆ ಬರುವಂತೆ ನಿರಾಣಿಯವರಿಗೆ ಸೂಚನೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲುಪುಡಿ ಘಟಕ-ಕಲ್ಲು ಗಣಿಗಾರಿಕೆ ಮೇಲೆ ತೀವ್ರ ನಿಗಾ: ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸ್ಪಷ್ಟನೆ

Published On - 9:59 pm, Sat, 6 February 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ