ಚಿತ್ರದುರ್ಗ: ಪೋಕ್ಸೋ ಕೇಸ್ ಅಡಿ ಮುರುಘಾ ಶರಣರು ಜೈಲುಪಾಲಾಗಿರುವ ಹಿನ್ನೆಲೆ ಮಠದ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ವೈಖರಿ ಬಗ್ಗೆ ಕಂದಾಯ ಇಲಾಖೆ ವರದಿ ಕೇಳಿತ್ತು. ಸರ್ಕಾರದ ಸೂಚನೆಯಂತೆ ನಿನ್ನೆ (ನ.6) ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು ಮಠಕ್ಕೆ ಭೇಟಿ ನೀಡಿ ಮಠ ಹಾಗೂ ವಿದ್ಯಾಪೀಠದ ಆಡಳಿತ ಕಾರ್ಯ ವೈಖರಿ ಪರಿಶೀಲನೆ ನಡೆಸಿ ತೆರಳಿದ್ದರು. ಅದರಂತೆ ಇಂದು ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆ ಇದೆ.
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಹಿನ್ನೆಲೆ ಏಕಾಂತಯ್ಯ ನೇತೃತ್ವದ ನಿಯೋಗ ಪೀಠತ್ಯಾಗಕ್ಕೆ ಆಗ್ರಹಿಸಿದೆ. ಈ ಬಗ್ಗೆ ಮುಖ್ಯಮಂತ್ರಿಯವರನ್ನು ಭೇಟಿಯಾದ ನಿಯೋಗವು ಸರ್ಕಾರವು ಮಧ್ಯಪ್ರವೇಶಿಸಿ ಮುರುಘಾ ಶ್ರೀಗಳನ್ನು ಪೀಠಾಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಮತ್ತು ಹೊಸ ಪೀಠಾಧ್ಯಕ್ಷರನ್ನು ನೇಮಕ ಮಾಡುವಂತೆ ಒತ್ತಾಯಿಸಿತ್ತು. ಇನ್ನೊಂದೆಡೆ ಮಠದ ಎಸ್ಜೆಎಂ ವಿದ್ಯಾಸಂಸ್ಥೆಗಳ ಸಿಬ್ಬಂದಿಗೆ ವೇತನ ವಿಳಂಬದ ಬಗ್ಗೆಯೂ ದೂರು ನೀಡಲಾಗಿತ್ತು. ಈ ಎಲ್ಲವನ್ನು ಗಮನಿಸಿದ ಸರ್ಕಾರ ಮಠ ಹಾಗೂ ವಿದ್ಯಾಸಂಸ್ಥೆ ಕಾರ್ಯವೈಖರಿ ಬಗ್ಗೆ ವರದಿ ಕೇಳಿತ್ತು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 am, Mon, 7 November 22