ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು; ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್

ಅನಿಕೇತ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಪುತ್ರಿಗೆ ಎಲ್‌ಕೆಜಿಗೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ. ತಜ್ಞರ ವರದಿ ಆಧರಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಒಂದನೇ ತರಗತಿಗೆ ಪ್ರವೇಶ ಪಡೆಯಲು 6 ವರ್ಷ ತುಂಬಿರಬೇಕು; ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿಹಿಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Edited By:

Updated on: Aug 09, 2023 | 10:56 PM

ಬೆಂಗಳೂರು: ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಕೆ 6 ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ಎತ್ತಿಹಿಡಿದಿದೆ. 2025-26ನೇ ಸಾಲಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನಿಕೇತ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಪುತ್ರಿಗೆ ಎಲ್‌ಕೆಜಿಗೆ ದಾಖಲಿಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ, ಸರ್ಕಾರದ ಅಧಿಸೂಚನೆ ರಾಷ್ಟ್ರೀಯ ಶಿಕ್ಷಣ ನೀತಿಗೆ (NEP) ಅನುಗುಣವಾಗಿದೆ. ಇದರ ಹಿಂದೆ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿ ಕೇಂದ್ರಿತ ಉದ್ದೇಶವಿದೆ. ತಜ್ಞರ ವರದಿ ಆಧರಿಸಿದ ನೀತಿಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಶೌಚಾಲಯಗಳ ದುಸ್ಥಿತಿಗೆ ಕರ್ನಾಟಕ ಹೈಕೋರ್ಟ್ ಅಸಮಾಧಾನ

ರಸ್ತೆ ಅಪಘಾತ ಪ್ರಕರಣಗಳ ಶೀಘ್ರ ವಿಲೇವಾರಿ ಮಾಡಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿದೆ. ಇದಕ್ಕಾಗಿ ಇನ್ಸೂರೆನ್ಸ್ ಡಿಪಾರ್ಟ್ಮೆಂಟ್ ಮತ್ತು ಫಾರೆನ್ಸಿಕ್  ಪ್ರಯೋಗಾಲಯಗಳನ್ನು ಪೊಲೀಸ್ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಜೊತೆಗೆ ಸಂಯೋಜನೆಗೊಳಿಸಬೇಕು ಎಂದು ಕೋರ್ಟ್ ಹೇಳಿದೆ. ಪರಿಹಾರ ಕೋರಿ ಅರ್ಜಿ ಸಲ್ಲಿಕೆ ವಿಳಂಬವಾಗಿದೆ ಎಂದು ಆಕ್ಷೇಪಿಸಿ ಇನ್ಸೂರೆನ್ಸ್ ಕಂಪನಿಯೊಂದು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ಈ ನಿರ್ದೇಶನ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ