ಪೋನ್ ಟ್ಯಾಪಿಂಗ್ ನಂಥ ನೀಚ ಕೆಲಸವನ್ನು ಹಿಂದೆ ಮಾಡಿಲ್ಲ ಮುಂದೆಯೂ ಮಾಡಲ್ಲ: ಸಿದ್ದರಾಮಯ್ಯ
ಕಾಂಗ್ರೆಸ್ ಸರ್ಕಾರ ಫೋನ್ ಟ್ಯಾಪಿಂಗ್ ಹಿಂದೆ ಮಾಡಿಲ್ಲ ಮುಂದೆಯೂ ಮಾಡಲ್ಲ ಎಂದು ಸಿದ್ದರಾಮಯ್ಯ ಖಡಾಖಂಡಿತವಾಗಿ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜನರ ಗಮನ ಬೇರೆಡೆ ಹರಿಸಲು ಕುಮಾರಸ್ವಾಮಿ ಇಂಥ ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಂಗಳೂರು: ಸಿಟಿ ರೌಂಡ್ಸ್ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಡೆಸಿದ ಸುದ್ದಿಗೋಷ್ಠಿಯ ಕೊನೆ ಹಂತದಲ್ಲಿ ಪತ್ರಕರ್ತರೊಬ್ಬರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಆಯೋಜಿಸಲಿರುವ ಔತಣಕೂಟದ ಬಗ್ಗೆ ಕೇಳಿದಾಗ ಸಿದ್ದರಾಮಯ್ಯ, ಲೋಕಸಭಾ ಚುನಾವಣೆ (Lok Sabha polls) ನಂತರದ ಆಯಾಮಗಳ ಪರಾಮರ್ಶೆ ನಡೆಸಲು ಪಕ್ಷದ ಅಧ್ಯಕ್ಷ ಶಿವಕುಮಾರ್ ಎಲ್ಲ ಸಚಿವರನ್ನು ಊಟಕ್ಕೆ ಕರೆದಿದ್ದಾರೆ, ನನ್ನನ್ನೂ ಆಮಂತ್ರಿಸಿದ್ದಾರೆ ಎಂದು ಮುಗುಳ್ನಗುತ್ತಾ ಹೇಳಿದರು. ಹೆಚ್ ಡಿ ಕುಮಾರಸ್ವಾಮಿಯವರು ಫೋನ್ ಟ್ಯಾಪಿಂಗ್ ಬಗ್ಗೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಪೋನ್ ಕದ್ದಾಲಿಕೆಯಂಥ ನೀಚ ಕೆಲಸವನ್ನು ತಾನಾಗಲೀ ತಮ್ಮ ಸರ್ಕಾರವಾಗಲೀ ಯಾವತ್ತೂ ಮಾಡಿಲ್ಲ, ತಮ್ಮ ನಂತರ ಮುಖ್ಯಮಂತ್ರಿಯಾಗುವವರು ಸಹ ಅದನ್ನು ಮಾಡಲ್ಲ, ಕಾಂಗ್ರೆಸ್ ಸರ್ಕಾರ ಫೋನ್ ಟ್ಯಾಪಿಂಗ್ ಹಿಂದೆ ಮಾಡಿಲ್ಲ ಮುಂದೆಯೂ ಮಾಡಲ್ಲ ಎಂದು ಖಡಾಖಂಡಿತವಾಗಿ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಜನರ ಗಮನ ಬೇರೆಡೆ ಹರಿಸಲು ಕುಮಾರಸ್ವಾಮಿ ಇಂಥ ಆರೋಪ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: