1983 ಅಲ್ಲ, 1973ರಿಂದಲೇ ಚನ್ನಪಟ್ಟಣದ ಜೊತೆ ತನಗೆ ಬಾಂಧವ್ಯ ಅಂತ ನಿಖಿಲ್​ಗೆ ಹೇಳಿದ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 09, 2024 | 6:01 PM

ನಿನ್ನೆ ಚನ್ನಪಟ್ಟಣ ಕ್ಷೇತ್ರದಲ್ಲಿ ಪ್ರಚಾರ ಮಾಡುವಾಗ ರಾಮನಗರ ಮತ್ತು ಚನ್ನಪಟ್ಟಣಕ್ಕೆ ದೇವೇಗೌಡ ಮತ್ತು ಕುಮಾರಸ್ವಾಮಿಯವರ ಕೊಡುಗೆ ಏನು ಅಂತ ಡಿಕೆ ಶಿವಕುಮಾರ್ ಕೇಳಿದ್ದರು. ಆದಕ್ಕೆ ಪ್ರತಿಯಾಗಿ; ಮೂರು ಬಾರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸದರಾಗಿ ಅಯ್ಕೆಯಾಗಿದ್ದ ಡಿಕೆ ಸುರೇಶ್ ಅವರ ಕೊಡುಗೆ ಏನು ಎಂದು ನಿಖಿಲ್ ಕೇಳಿದರು.

ರಾಮನಗರ: ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ಚನ್ನಪಟ್ಟಣದಲ್ಲಿ ಪ್ರಚಾರದ ಅಬ್ಬರ ಹೆಚ್ಚುತ್ತಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಸಮ್ಮುಖದಲ್ಲಿ ತೌಟಹಳ್ಳಿಯಲ್ಲಿ ಪ್ರಚಾರ ಭಾಷಣ ಮಾಡಿದ ನಿಖಿಲ್ ಕುಮಾರಸ್ವಾಮಿ ತಮ್ಮ ಮಾತಿನ ಭರದಲ್ಲಿ ತಪ್ಪು ಮಾಹಿತಿ ನೀಡಿದಾಗ ಹಿರಿಯ ಗೌಡರು ಅವರನ್ನು ತಿದ್ದಿದರು. ತಾನು ಹುಟ್ಟಿದ್ದು 1988ರಲ್ಲಾದರೂ 1983ರಿಂದ ದೇವೇಗೌಡರು ಚನ್ನಪಟ್ಟಣದೊಂದಿಗೆ ಬಾಂಧವ್ಯ ಹೊಂದಿದ್ದಾರೆ ಅಂದಾಗ ಗೌಡರು 83 ಅಲ್ಲ 1973 ಅನ್ನುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜೆಡಿಎಸ್​ನಿಂದ ಕಾಂಗ್ರೆಸ್ ಸೇರಿ ಮಂತ್ರಿಗಳಾದವರಿಗೆ ನಿಖಿಲ್ ಕುಮಾರಸ್ವಾಮಿ ಬಗ್ಗೆ ವಿಶೇಷ ಮಮತೆ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.