ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು; ಪೊಲೀಸರ ಮೇಲೆ ಸಾರ್ವಜನಿಕರಿಂದ ಹಲ್ಲೆ

ಪೊಲೀಸರನ್ನು ಕಂಡು ಗಾಬರಿಯಾಗಿದ್ದ ದೇವರಾಜು, ಪೇದೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಈ ಅಪಘಾತ ಸಂಭವಿಸಿದೆ. ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ.

ತಪಾಸಣೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವು; ಪೊಲೀಸರ ಮೇಲೆ ಸಾರ್ವಜನಿಕರಿಂದ ಹಲ್ಲೆ
ಮೈಸೂರಿನಲ್ಲಿ ಸಾರ್ವಜನಿಕರಿಂದ ಪೊಲೀಸರ ಮೇಲೆ ಹಲ್ಲೆ
Follow us
TV9 Web
| Updated By: ganapathi bhat

Updated on:Apr 06, 2022 | 6:51 PM

ಮೈಸೂರು: ನಗರದಲ್ಲಿ ಸಂಚಾರ ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಸಂಭವಿಸಿದೆ. ಸಂಚಾರ ಪೊಲೀಸರು ಹಿನಕಲ್ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದರು. ಆ ದಾರಿಯಲ್ಲಿ ಬರುತ್ತಿದ್ದ ಬೈಕ್ ಸವಾರ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ಆಯತಪ್ಪಿ ಬಿದ್ದಿದ್ದಾನೆ. ಕೆಳಬಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ವ್ಯಾನ್ ಹರಿದಿದೆ.

ಈ ಅಪಘಾತದಿಂದ ಬೈಕ್ ಸವಾರ ಸ್ಥಳದಲ್ಲೇ ಮರಣಿಸಿದ್ದಾನೆ. ಮೃತ ದುರ್ದೈವಿ ಎಚ್.ಡಿ.ಕೋಟೆ ತಾಲೂಕಿನ ಕನ್ನೇನಹಳ್ಳಿ ನಿವಾಸಿ, ಸಿವಿಲ್ ಇಂಜಿನಿಯರ್ ದೇವರಾಜು(46) ಎಂದು ತಿಳಿದುಬಂದಿದೆ. ಘಟನೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ರೊಚ್ಚಿಗೆದ್ದ ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಪೊಲೀಸರನ್ನು ಕಂಡು ಗಾಬರಿಯಾಗಿದ್ದ ದೇವರಾಜು, ಪೇದೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಈ ಅಪಘಾತ ಸಂಭವಿಸಿದೆ. ಪೊಲೀಸರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಎಸ್‌ಐ, ಪೊಲೀಸ್ ಕಾನ್ಸ್‌ಟೇಬಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ವಿಶ್ಲೇಷಣೆ | ಮುಂಬೈ ಪೊಲೀಸ್ ಕಮಿಷನರ್​ ಹುದ್ದೆಗೆ ಹೇಮಂತ್ ನಗರಾಳೆ ನೇಮಕದ ಮೂಲಕ ಮಹಾರಾಷ್ಟ್ರ ಸರ್ಕಾರ ಏನು ಸಾಧಿಸಲು ಹೊರಟಿದೆ?

ನಮ್ಮ ಮುಖ್ಯಮಂತ್ರಿಗಳಿಗೆ ಯಾಕ್ರೋ ಬ್ಲ್ಯಾಕ್​ಮೇಲ್ ಮಾಡ್ತೀರಾ?: ಕಾಂಗ್ರೆಸ್ ಶಾಸಕರಿಗೇ ಗದರಿದ ಡಿ.ಕೆ. ಶಿವಕುಮಾರ್

Published On - 8:47 pm, Mon, 22 March 21

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​