AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore: ಯುವಕನ ಅಂಗಾಂಗ ದಾನದಿಂದ 8 ಮಂದಿಯ ಬಾಳಿಗೆ ಬೆಳಕು

ಅಪಘಾತದಲ್ಲಿ ಗಂಭೀರಯಾಗೊಂಡು ಯುವಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಆತನ ಅಂಗಾಂಗಗಳನ್ನು ಪೋಷಕರು ದಾನ ಮಾಡಿ ಎಂಟು ಮಂದಿ ಬಾಳಿಗೆ ಬೆಳಕು ನೀಡಿದ್ದಾರೆ.

Mysore: ಯುವಕನ ಅಂಗಾಂಗ ದಾನದಿಂದ 8 ಮಂದಿಯ ಬಾಳಿಗೆ ಬೆಳಕು
ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ
TV9 Web
| Edited By: Rakesh Nayak Manchi|

Updated on:Oct 02, 2022 | 7:13 AM

Share

ಮೈಸೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ (Brain Dead)ಗೊಂಡ ಹಿನ್ನೆಲೆ ಆತನ ಅಂಗಾಂಗಗಳನ್ನು ದಾನ (Organs Donate) ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮರೆದಿದ್ದಾರೆ. ಯುವಕನ ಅಂಗಾಂಗ ದಾನದಿಂದಾಗಿ ಒಟ್ಟು 8 ಜನರ ಬಾಳಿಗೆ ಬೆಳಕು ನೀಡಿದಂತಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ನಿವಾಸಿ ಲೋಹಿತ್ ಕಳೆದ ವಾರ ಕಾರು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರು ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನದ ಮೂಲಕ ಸಾರ್ಥಕ ಜೀವನ ಮರೆದಿದ್ದಾರೆ.

ಕಳೆದ ವಾರ ಹುಣಸೂರು ತಾಲ್ಲೂಕು ಬಿಳಿಕೆರೆ ಬಳಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಕಾರು ಚಾಲಕನಾಗಿದ್ದ ಪಿರಿಯಾಪಟ್ಟಣ ನಿವಾಸಿ ಲೋಹಿತ್ ಅವರ ತಲೆಗೆ ಗಂಭೀರವಾಗಿ ಗಾಯಗಳಾಗಿದ್ದವು. ಅದರಂತೆ ಒಂದು ವಾರದಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಲೋಹಿತ್​ನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಲೋಹಿತ್​ ಅವರ ಹೃದಯ, ಲಿವರ್ ಯಕೃತ್ ಮೇಜೋಜೀರಕ ಗ್ರಂಥಿ, ಕಿಡ್ನಿ ಸೇರಿ ಹಲವು ಅಂಗಗಳನ್ನು ದಾನ ಮಾಡಲಾಗಿದೆ. ಈ ಪೈಕಿ ಹೃದಯವನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಿ ಅಗತ್ಯ ರೋಗಿಗೆ ಅಳವಡಿಸಲಾಗಿದ್ದು, ಕಿಡ್ನಿಗಳನ್ನು ಮೈಸೂರಿನ ಅಪೋಲೋ ಆಸ್ಪತ್ರೆಯ ರೋಗಿಗಳಿಗೆ ಅಳವಡಿಸಲಾಗಿದೆ. ಉಳಿದಂತೆ ವಿವಿಧ ಅಂಗಾಂಗಗಳನ್ನು ಬಿಜಿಎಸ್ ಹಾಗೂ ಕೆ.ಆರ್ ಆಸ್ಪತ್ರೆ ರೋಗಿಗಳಿಗೆ ಅಳವಡಿಕೆ ಮಾಡಲಾಗಿದೆ. ಹೀಗೆ ಲೋಹಿತ್ ಅಂಗಾಂಗಗಳಿಂದಾಗಿ 8 ಮಂದಿಗೆ ಮರುಜನ್ಮ ಬಂದಂತಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Sun, 2 October 22

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು