Karnataka Budget 2023: ತವರು ಜಿಲ್ಲೆಗೆ ಬಂಪರ್​ ಕೊಡುಗೆ ನೀಡಿದ ಸಿದ್ದರಾಮಯ್ಯ; ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ

ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​​​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಸತತ 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಗೆ ಬಂಪರ್​ ಕೊಡುಗೆ ನೀಡಿದ್ದಾರೆ.

Karnataka Budget 2023: ತವರು ಜಿಲ್ಲೆಗೆ ಬಂಪರ್​ ಕೊಡುಗೆ ನೀಡಿದ ಸಿದ್ದರಾಮಯ್ಯ; ಮೈಸೂರಿನ ಚಾಮುಂಡಿ ಬೆಟ್ಟ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ
ಚಾಮುಂಡಿ ಬೆಟ್ಟ
Follow us
| Updated By: ವಿವೇಕ ಬಿರಾದಾರ

Updated on:Jul 07, 2023 | 1:26 PM

ಬೆಂಗಳೂರು: ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್ (Karnataka Budegt 2023)​​​ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ್ದಾರೆ. ಸತತ 14ನೇ ಬಾರಿ ಬಜೆಟ್ ಮಂಡಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ತವರು ಜಿಲ್ಲೆಗೆ ಬಂಪರ್​ ಕೊಡುಗೆ ನೀಡಿದ್ದಾರೆ. ಹೌದು ನಾಡದೇವತೆ ಮೈಸೂರಿನ ಚಾಮುಂಡಿ ಬೆಟ್ಟ (Mysore Chamundi Hill) ಅಭಿವೃದ್ಧಿಗೆ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅಸ್ತು ಅಂದಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ ದೃಷ್ಟಿಯಿಂದ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದಾರೆ.

ಅಲ್ಲದೇ ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದರು.

ಇದನ್ನೂ ಓದಿ:  ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲದ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ

ಇನ್ನು ಚಾಮುಂಡೇಶ್ವರಿ ದೇವಿ ಸನ್ನಿಧಾನ ಅಭಿವೃದ್ಧಿಗೆ ಹಾಗೂ ವಿವಿಧ ಮೂಲ ಸೌಕರ್ಯ ಒದಗಿಸಲು ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯವು ಪ್ರಸಾದ್​​ ಯೋಜನೆಯಡಿ 45.70 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದೆಯನ್ನು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಜೆಟ್​​ ಮಂಡನೆ ಲೈವ್​ ಆಗಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Fri, 7 July 23