Mysore Dasara 2022: ರಾಷ್ಟ್ರಪತಿ ಆಗಮನ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ

ಮೈಸೂರು ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ. ಆದರೆ ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಆಗಮಿಸಲಿರುವ ಹಿನ್ನೆಲೆ ಮೈಸೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತೆ ಮಾಡಲಾಗಿದೆ.

Mysore Dasara 2022: ರಾಷ್ಟ್ರಪತಿ ಆಗಮನ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಪೊಲೀಸ್ ಭದ್ರತೆ
ರಾಷ್ಟ್ರಪತಿ ಆಗಮನ ಹಿನ್ನೆಲೆ ಮೈಸೂರಿನಲ್ಲಿ ಭಾರೀ ಪೊಲೀಸ್ ಭದ್ರತೆ
TV9kannada Web Team

| Edited By: Rakesh Nayak Manchi

Sep 24, 2022 | 2:50 PM

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ (Mysore Dasara 2022) ಆಚರಣೆಗೆ ಭರದ ಸಿದ್ಧತೆಗಳು ಸಾಗುತ್ತಿದ್ದು, ಆನೆಗಳು ಜಂಬೂ ಸವಾರಿ ಹೊರಡಲು ಸಜ್ಜಾಗುತ್ತಿವೆ. ದಸರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಪೊಲೀಸ್ ಭದ್ರತೆ ನಿಯೋಜಿಸಲಾಗುತ್ತದೆ. ಆದರೆ ಈ ಬಾರಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಕೂಡ ಆಗಮಿಸಲಿರುವ ಹಿನ್ನೆಲೆ ಮೈಸೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತೆ ಮಾಡಲಾಗಿದೆ. 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, 3 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಹೊರ ಜಿಲ್ಲೆಗಳಿಂದ ಕರೆಸಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ ನಗರದಲ್ಲಿ ವಿಶೇಷ ಕಣ್ಗಾವಲು ಇಡುವ ನಿಟ್ಟಿನಲ್ಲಿ 13 ಸಾವಿರಕ್ಕೂ ಹೆಚ್ಚು ಸಿಸಿಕ್ಯಾಮರಾಗಳನ್ನು ಅಳವಡಿಸಲಾಗಿದೆ. ಆ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಈ ಬಗ್ಗೆ ಮಾಹಿತಿ ನೀಡಿದ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ದಸರಾ ಹಿನ್ನೆಲೆ ಮೈಸೂರಿನಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭದ್ರತೆಗಾಗಿ 5,485 ಪೊಲೀಸರನ್ನು ನಿಯೋಜಿಸಲಾಗಿದೆ. ಹೊರ ಜಿಲ್ಲೆಗಳಿಂದ 3,380 ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಮೈಸೂರು ನಗರದಿಂದ 1255 ಮಂದಿ ಪೊಲೀಸ್ ನಿಯೋಜನೆ ಮಾಡಲಾಗಿದೆ. 550 ಗೃಹ ರಕ್ಷಕ ಸಿಬ್ಬಂದಿಗಳನ್ನು ಕೂಡ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದರು.

ಕಾರ್ಯಕ್ರಮಗಳಲ್ಲಿ ಡ್ರೋನ್ ಕ್ಯಾಮರಾ ಮೂಲಕ ಕಣ್ಗಾವಲು ಇರಿಸಲಾಗುತ್ತಿದ್ದು, ನಗರದಲ್ಲಿ 13,140 ಸಿಸಿಕ್ಯಾಮರಾ ಅಳವಡಿಸಲಾಗಿದೆ. ಮೆರವಣಿಗೆ ಮಾರ್ಗ ಸೇರಿದಂತೆ ಇತರೆ ಕಡೆ 110 ಸಿಸಿಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಮೈಸೂರಿನಲ್ಲಿ ಪ್ರತಿದಿನ ಬಾಂಬ್ ಪತ್ತೆ ದಳ, ಶ್ವಾನದಳ ತಪಾಸಣೆ ನಡೆಸಲಾಗುತ್ತಿದೆ. ಮಂಡಿಠಾಣೆ, ದೇವರಾಜ ಠಾಣೆ, ಲಷ್ಕರ್, ನಜರ್ಬಾದ್ ಪೊಲೀಸ್ ಠಾಣೆಗಳಿಂದ 8 ಸಹಾಯ ಕೇಂದ್ರ ಸ್ಥಾಪಿಸಲಾಗುತ್ತಿದೆ. ರೈಲು ನಿಲ್ದಾಣ, ಏರ್​ಪೋರ್ಟ್​, ಬಸ್​ ನಿಲ್ದಾಣದಲ್ಲಿ ಹೈಅಲರ್ಟ್ ಆಗಿರುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ. ವಿವಿಧ ಕಾರ್ಯಕ್ರಮ‌ ಸ್ಥಳಗಳಲ್ಲಿ 12 ಅಗ್ನಿಶಾಮಕ ಹಾಗೂ ಎಂಟು ಆಂಬ್ಯುಲೆನ್ಸ್ ನಿಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದ ಸ್ಥಳ, ರೂಟ್ ನಿತ್ಯ ಪರಿಶೀಲನೆ

ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿಯವರು ಆಗಮಿಸುತ್ತಿರುವ ಹಿನ್ನೆಲೆ ಬಿಗಿಬಂದೋಬಸ್ತ್ ಕೈಗೊಳ್ಳಲಾಗುತ್ತಿದೆ. 16 ತಂಡಗಳಿಂದ ಕಾರ್ಯಕ್ರಮದ ಸ್ಥಳ, ರೂಟ್ ದಿನನಿತ್ಯ ಪರಿಶೀಲನೆ ನಡೆಸಲಾಗುತ್ತಿದೆ. ಮೊಬೈಲ್ ಕಂಮಾಂಡ್ಸ್ ಸೆಂಟರ್ ವಾಹನ ಬಳಕೆ ಮಾಡಲಾಗುತ್ತಿದ್ದು, ಪೊಲೀಸರಿಗೆ ಅರಮನೆ, ಬನ್ನಿಮಂಟಪದ ಬಳಿ ಕಾರ್ಯ ನಿರ್ವಹಿಸುವವರಿಗೆ ಬಾಡಿ ವೋರ್ನ್ ಕ್ಯಾಮೆರಾ ನೀಡಲಾಗಿದೆ. ಅದರಂತೆ ಸಂಪೂರ್ಣ ದೃಶ್ಯಾವಳಿ ಕ್ಯಾಮೆರಾಗಳಲ್ಲಿ ಸೆರೆಯಾಗಲಿವೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada