Mysore Dasara 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವ ಅಂತಾರಾಜ್ಯ ವಾಹನಗಳಿಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಣೆ ಮಾಡಿದೆ.

Mysore Dasara 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
ಮೈಸೂರು ದಸರಾ 2022: ಅಂತಾರಾಜ್ಯ ವಾಹನಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ
Follow us
TV9 Web
| Updated By: Rakesh Nayak Manchi

Updated on:Sep 20, 2022 | 9:46 PM

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysore Dasara) ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಈ ನಡುವೆ ಪ್ರವಾಸಿಗರ ಅನುಕೂಲಕ್ಕಾಗಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಏಕೀಕೃತ ಟಿಕೇಟ್ (ಕಾಂಬೋ ಟಿಕೆಟ್) ವ್ಯವಸ್ಥೆ ಜಾರಿ ಮಾಡಿದೆ. ಇದರ ಬೆನ್ನಲ್ಲೆ ರಾಜ್ಯ ಸರ್ಕಾರ ದಸರಾಕ್ಕೆ ಬರುವ ಅಂತಾರಾಜ್ಯದ ಜನರಿಗೆ ಗುಡ್ ನ್ಯೂಸ್ ನೀಡಿದೆ. ವಿಶ್ವವಿಖ್ಯಾತ ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ ಅಂತಾರಾಜ್ಯ ವಾಹನಗಳಿಗೆ ಸರ್ಕಾರ ತೆರಿಗೆ ವಿನಾಯಿತಿ (Tax Exemption) ಘೋಷಣೆ ಮಾಡಿದೆ. ಮೈಸೂರು ನಗರ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗ ಪಟ್ಟಣ ವ್ಯಾಪ್ತಿಯ ಕೆ.ಆರ್.ಎಸ್ ಜಲಾಶಯ ವೀಕ್ಷಿಸಲು ಹೋಗುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ಮಾಡಿ ಸಾರಿಗೆ ಇಲಾಖೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 6 ರವರೆಗೆ ಈ ತೆರಿಗೆ ವಿನಾಯಿತಿ ಇರಲಿದೆ.

ದಸರಾ ಮಹೋತ್ಸವದ ಹಿನ್ನೆಲೆ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗಾಗಿ ಮತ್ತು ಸಾರ್ವಜನಿಕರಿಗಾಗಿ ಮೈಸೂರಿನ ಕೆಲವು ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಕಾಂಬೋ ಟಿಕೆಟ್ ವ್ಯವಸ್ಥೆ ಜಾರಿ ಮಾಡಿದೆ. ಕಾಂಬೋ ಟಿಕೆಟ್ ಮೂಲಕ ಪ್ರವಾಸಿಗರು ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ರೈಲ್ವೆ ಮ್ಯೂಸಿಯಂ ಹಾಗೂ ಕೆಆರ್‌ಎಸ್ ಬೃಂದಾವನ ಸೇರಿ ಒಟ್ಟು ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದು.

ಇಂದಿನಿಂದ (ಸೆ.20) ಈ ಟಿಕೆಟ್ ಪಡೆದುಕೊಂಡು ಸೂಚಿಸಿರುವ ಐದು ಸ್ಥಳಗಳಿಗೆ ಭೇಟಿ ನೀಡಬಹುದಾಗಿದ್ದು, ಅಕ್ಟೋಬರ್‌ 5ರವರೆಗೆ ಈ ವ್ಯವಸ್ಥೆ ಚಾಲ್ತಿಯಲ್ಲಿರಲಿದೆ. ಟಿಕೆಟ್ ಬೆಲೆ ವಯಸ್ಕರಿಗೆ 500 ರೂ. ಹಾಗೂ ಮಕ್ಕಳಿಗೆ 250 ರೂ. ನಿಗದಿಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಮಾರಾಟ ಮಾಡಲಾಗುವ ಈ ಟಿಕೆಟ್ ಅನ್ನು ನಗರದ ಕೆಎಸ್‌ಟಿಡಿಸಿ ಹೋಟೆಲ್ ಹಾಗೂ ಟ್ರಾವೆಲ್ಸ್ ವಿಭಾಗದಲ್ಲಿ, ಕೆಎಸ್‌ಆರ್‌ಟಿಸಿ ಸಬರ್ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ, ರೈಲ್ವೆ ನಿಲ್ದಾಣದ 2 ಕಡೆ, ಚಾಮುಂಡಿಬೆಟ್ಟ, ಮೃಗಾಲಯ, ಕೆಆರ್‌ಎಸ್, ಅರಮನೆ ಹಾಗೂ ಮೈಸೂರು ನಗರದ ಪ್ರಮುಖ ಹೋಟೆಲ್‌ಗಳಲ್ಲಿ ಪಡೆಯಬಹುದಾಗಿದೆ.

ಮತ್ತಷ್ಟು ಮೈಸೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:45 pm, Tue, 20 September 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ