AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಅಧಿಕಾರಿಗಳಿಗೆ ಸಿಎಂ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ದಸರಾ 2025ರ ಭವ್ಯ ಆಚರಣೆಗೆ ಯೋಜನೆ ರೂಪಿಸಿದ್ದಾರೆ. ಜನಸಂದಣಿ ನಿರ್ವಹಣೆ, ಭದ್ರತೆಗೆ ಹೆಚ್ಚಿನ ಒತ್ತು ನೀಡಬೇಕು. ಅನಾಹುತ ತಪ್ಪಿಸಲು ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಸರಾ ಉತ್ಸವ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಗಾಂಧೀಜಿಯವರ ವಿಚಾರಧಾರೆಗಳಿಗೆ ಸ್ಥಬ್ಧಚಿತ್ರಗಳಲ್ಲಿ ಅವಕಾಶ ಕಲ್ಪಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ.

ಮೈಸೂರು ದಸರಾ: ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಅಧಿಕಾರಿಗಳಿಗೆ ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ
H P
| Updated By: ವಿವೇಕ ಬಿರಾದಾರ|

Updated on:Jun 28, 2025 | 10:12 PM

Share

ಮೈಸೂರು, ಜೂನ್​ 28: ವಿಶ್ವವಿಖ್ಯಾತ ಮೈಸೂರು ದಸರಾವನ್ನು (Mysore Dasara) ಪ್ರತಿ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶನಿವಾರ (ಜೂ.28) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ದಸರಾ ಉತ್ಸವ ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ನೂಕು ನುಗ್ಗಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದರು.

ಮೈಸೂರು ದಸರಾ ಉತ್ಸವ ವೀಕ್ಷಿಸಲು ವಿದೇಶಿಗರು ಸೇರಿದಂತೆ 10 ಲಕ್ಷಕ್ಕೂ ಹೆಚ್ಚು ಮಂದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ, ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ. ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸೆಪ್ಟೆಂಬರ್ 22ರಿಂದ ಅಕ್ಟೋಬರ್‌ 2ರವರೆಗೆ ಮೈಸೂರು ದಸರಾ ಉತ್ಸವ ನಡೆಯಲಿದೆ. ಸೆ.22ರಂದು ಬೆಳಗ್ಗೆ 10.10ಕ್ಕೆ ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾಗೆ ಚಾಲನೆ ನೀಡಲಾಗುವುದು. ಅಕ್ಟೋಬರ್‌ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ. ಸಂಜೆ 4.42ರಿಂದ 5.06ರ ನಡುವೆ ಜಂಬೂಸವಾರಿಗೆ ಪುಷ್ಪಾರ್ಚನೆ ನೆರವೇರುತ್ತದೆ. ಈ ಬಾರಿ 11 ದಿನ ದಸರಾ ಆಚರಣೆ ಮಾಡಲು ನಿರ್ಧರಿಸಿದ್ದೇವೆ. ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ
Image
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
Image
ಚಾಮುಂಡಿ ಬೆಟ್ಟದಲ್ಲಿ ಆಷಾಢ ಸಂಭ್ರಮ, ಸೂಚನೆಗಳೇನು? ಇಲ್ಲಿದೆ  ವಿವರ
Image
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
Image
ಆಷಾಢ ಶುಕ್ರವಾರ ಚಾಮುಂಡೇಶ್ವರಿ ದರ್ಶನಕ್ಕೆ ಹಣ ವಸೂಲಿ: ಭುಗಿಲೆದ್ದ ಆಕ್ರೋಶ

ವಸ್ತು ಪ್ರದರ್ಶನ ಮಳಿಗೆಗಳು ಆರಂಭದ ದಿನವೇ ಮಳಿಗೆಗಳು ತುಂಬಬೇಕು. ದಸರಾ ಉತ್ಸವಕ್ಕೆ ಕಳೆದ ಬಾರಿ‌ 40 ಕೋಟಿ ರೂ. ಖರ್ಚಾಗಿತ್ತು. ಯಾವುದೇ ಬಿಲ್​ಗಳು ಬಾಕಿ ಇಲ್ಲ. ವಿದ್ಯುತ್ ಇಲಾಖೆಯೇ ದೀಪಾಲಂಕಾರ ವೆಚ್ಚ ಭರಿಸುತ್ತದೆ. ಈ ಬಾರಿಯೂ 21 ದಿನ ದೀಪಾಲಂಕಾರ ಇರಲಿದೆ. ವಿಜೃಂಭಣೆಯ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಅಂತ ಸೂಚನೆ ನೀಡಿದ್ದಾರೆ.

ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು. ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು. ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲ ಪ್ರಮುಖ ರಸ್ತೆಗಳನ್ನು ದುರಸ್ತಿ ಕಾರ್ಯ ಆರಂಭಿಸಿ. ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಕಳೆದ ಬಾರಿ ವಿದ್ಯುತ್‌ ದೀಪ ಅಲಂಕಾರವನ್ನು ವೈಭವದಿಂದ ಮಾಡಲಾಗಿತ್ತು. ಇದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಈ ಬಾರಿಯೂ ವಿದ್ಯುತ್‌ ದೀಪಾಲಂಕಾರವನ್ನು ಇನ್ನಷ್ಟು ಉತ್ತಮವಾಗಿ ಮಾಡಬೇಕು. ಎಲ್ಲ ಜಿಲ್ಲೆಗಳಿಂದ ಆಗಮಿಸುವ ಸ್ತಬ್ಧಚಿತ್ರಗಳು ವೈವಿಧ್ಯಮಯವಾಗಿರುವಂತೆ ನೋಡಿಕೊಳ್ಳಬೇಕು. ವಸ್ತು ಪ್ರದರ್ಶನದ ಮಳಿಗೆಗಳು ಉದ್ಘಾಟನೆ ಸಂದರ್ಭದಲ್ಲೇ ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿರಬೇಕು. ಯಾವುದೇ ಮಳಿಗೆಗಳು ಖಾಲಿಯಿರಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಆಷಾಢ ಮಾಸದಲ್ಲಿ ಈ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ವಾಹನ ನಿರ್ಬಂಧ

ಗೋಲ್ಡ್ ಕಾರ್ಡ್‌ ವಿತರಣೆಯಲ್ಲಿ ಯಾವುದೇ ಗೊಂದಲಕ್ಕೆ ಆಸ್ಪದ ನೀಡಬಾರದು. ಮೈಸೂರು ನಗರದ ಸೌಂದರ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ದಸರಾ ವೀಕ್ಷಿಸಲು ಆಗಮಿಸುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ, ವಾಹನ ಪಾರ್ಕಿಂಗ್‌ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು. ಈ ಬಾರಿಯೂ ದೊಡ್ಡ ಪ್ರಮಾಣದಲ್ಲಿ ಡ್ರೋಣ್‌ ಶೋ ಆಯೋಜಿಸಲಾಗುವುದು. ದಸರಾ ಸಂದರ್ಭದಲ್ಲಿ ಅಧಿಕಾರಿಗಳು ಜನಸಾಮಾನ್ಯರಿಗೆ ದೊರೆಯುವುದಿಲ್ಲ ಎಂಬ ದೂರುಗಳಿವೆ. ಇದಕ್ಕೆ ಈ ಬಾರಿ ಅವಕಾಶ ನೀಡಬಾರದು. ಜನಸಾಮಾನ್ಯರ ಕೆಲಸ ಕಾರ್ಯಗಳು, ಅಭಿವೃದ್ದಿ ಕಾರ್ಯಗಳು ಯಾವುದೇ ಕಾರಣಕ್ಕೂ ಕುಂಠಿತವಾಗಬಾರದು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Sat, 28 June 25

‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?