ಕೊರೊನಾ ನಿರ್ವಹಣೆ ವಿಚಾರದಲ್ಲಿ ತಹಶೀಲ್ದಾರ್ ಕರ್ತವ್ಯ ಲೋಪ; ಮೈಸೂರು ಡಿಸಿ ರೋಹಿಣಿ ಸಿಂಧೂರಿಯಿಂದ ನೋಟಿಸ್ ಜಾರಿ
ನೋಟೀಸು ತಲುಪಿದ 24 ಗಂಟೆಯೊಳಗೆ ನಿಮ್ಮ ಲಿಖಿತ ಸಮಜಾಯಿಷಿ ಸಲ್ಲಿಸಿ. ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಹಶೀಲ್ದಾರ್ ಮಂಜುಳಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರು: ಕೊರೊನಾ ಸೋಂಕು ನಿರ್ವಹಣೆ ವಿಚಾರದಲ್ಲಿ ಕರ್ತವ್ಯ ಲೋಪ ಆರೋಪ ಕೇಳಿ ಬಂದಿದ್ದರಿಂದ ಕೆ.ಆರ್.ನಗರ ತಹಶೀಲ್ದಾರ್ ಮಂಜುಳಾಗೆ ಮೈಸೂರು ಡಿಸಿ ರೋಹಿಣಿ ಸಿಂಧೂರಿ ನೋಟಿಸ್ ಜಾರಿ ಮಾಡಿದ್ದಾರೆ. ಸೋಂಕಿತರಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸೂಚಿಸಿದ್ದರೂ, ಜಿಲ್ಲಾಸ್ಪತ್ರೆಗೆ ಸೋಂಕಿತರನ್ನು ಕಳಿಸಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಿ ಎಚ್ಚರಿಸಲಾಗಿದೆ.
ತಾಲೂಕು ಸೋಂಕಿತರಿಗೆ ತಾಲೂಕಿನಲ್ಲಿ ಚಿಕಿತ್ಸೆ ನೀಡಬೇಕು. ಸೋಂಕಿತರನ್ನು ಮೈಸೂರಿನ ಜಿಲ್ಲಾಸ್ಪತ್ರೆಗಳಿಗೆ ಸ್ಥಳಾಂತರಿಸಬಾರದು ಎಂದು ಮೈಸೂರು ಡಿಸಿ ಸೂಸಿದ್ದರು. ಆದರೂ ಕೆ ಆರ್ ನಗರದ ಸೋಂಕಿತರನ್ನು ಮೈಸೂರು ಖಾಸಗಿ ಅಂಬ್ಯೂಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸೂಕ್ತ ಚಿಕಿತ್ಸೆ ದೊರಕದೇ ಸೋಂಕಿತರು ಮೃತಪಟ್ಟಿದ್ದರು. ಹೀಗಾಗಿ ತಹಶಿಲ್ದಾರ್ ಮಂಜುಳಾ ವಿರುದ್ಧ ಕರ್ತವ್ಯ ಲೋಪ ಆರೋಪ ಮಾಡಲಾಗಿದೆ.
ನಿಮ್ಮ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 56 ರಡಿಯಲ್ಲಿ ನೋಟಿಸ್ ಜಾರಿ ಮಾಡಿದ್ದು, ನೋಟೀಸು ತಲುಪಿದ 24 ಗಂಟೆಯೊಳಗೆ ನಿಮ್ಮ ಲಿಖಿತ ಸಮಜಾಯಿಷಿ ಸಲ್ಲಿಸಿ. ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಪರಿಗಣಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಹಶೀಲ್ದಾರ್ ಮಂಜುಳಾ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ ಮಹೇಶ್ ಆಕ್ರೋಶ ಕೊವಿಡ್ ಎರಡನೇ ಅಲೆ ನಿಭಾಯಿಸುವುದರಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಜಿಲ್ಲಾಡಳಿತದ ತಪ್ಪಿನಿಂದಲೇ 3 ಸಾವಿರಕ್ಕೂ ಅಧಿಕ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕೊವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮಾಡುವುದರಲ್ಲೂ ನಿಯಮ ಪಾಲಿಸುತ್ತಿಲ್ಲ. ಮತ್ತೇ ಹೇಗೆ ನಿಯಂತ್ರಣಕ್ಕೆ ಬರಲಿದೆ ? ಎಂದು ಶಾಸಕ ಸಾ.ರಾ ಮಹೇಶ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿಸಿ ಅವರು ವಿಡಿಯೋ ಕಾನ್ಫಿರೇನ್ಸ್ ಮೂಲಕ ಪ್ರತಿ ವಲಯದಲ್ಲೂ ಕೊವಿಡ್ ಕೇರ್ ಸೆಂಟರ್ ತೆರೆಯಬೇಕು ಎನ್ನುತ್ತಾರೆ. ಅದಕ್ಕೆ ಬೇಕಿರುವ ವೈದ್ಯರನ್ನ ಎಲ್ಲಿಂದ ತರುತ್ತಾರೆ? ಅಧಿಕಾರಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ. ಹಿಂದಿನ ಡಿಸಿ ಅಭಿರಾಂ ಜಿ ಶಂಕರ್ ಒಬ್ಬರು ಡಿ ಗ್ರೂಪ್ ನೌಕರ ಹೇಳಿದ್ದನ್ನು ಆಲಿಸುತ್ತಿದ್ದರು. ಜಿಲ್ಲೆಗೆ ಅಭಿರಾಮ್ ಜಿ ಶಂಕರ್, ಹರ್ಷಗುಪ್ತ ಶಿಖಾರಂತಹ ಅಧಿಕಾರಿ ಬೇಕು ಎಂದು ಶಾಸಕ ಸಾ.ರಾ ಮಹೇಶ್ ತಿಳಿಸಿದ್ದಾರೆ.
ಇದನ್ನೂ ಓದಿ:
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ ಮಹೇಶ್ ಆಕ್ರೋಶ
ಕೇರಳದಲ್ಲಿ ಕೊರೊನಾ ಪ್ರಕರಣಗಳ ಹೆಚ್ಚಳ: ಕೇರಳ-ಮೈಸೂರು ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ
(Mysore DC Rohini Sindhuri issues a notice to Thahshildar alleging he inappropriate handle of covid situation)