ಚಾಮರಾಜನಗರ 24 ಸೋಂಕಿತರ ಸಾವು ಪ್ರಕರಣ; ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಆದರೆ ಸಮಿತಿ, ಆಮ್ಲಜನಕ ಪೂರೈಕೆಗೆ ರೋಹಿಣಿ ಸಿಂಧೂರಿ ತಡೆ ಹಿಡಿದಿದ್ದರು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಚಾಮರಾಜನಗರ: ಆಸ್ಪತ್ರೆಯಲ್ಲಿ 24 ರೋಗಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಆಕ್ಸಿಜನ್ ಸಿಗದೆ ಮೂವರು ಸಾವನ್ನಪ್ಪಿದ್ದಾರೆ. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ನಿರ್ಲಕ್ಷವೇ ಕಾರಣ. ಇನ್ನುಳಿದವರು ಬೇರೆ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ಹೈಕೋರ್ಟ್ಗೆ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ಸಮಿತಿ ವರದಿ ಸಲ್ಲಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಆದರೆ ಸಮಿತಿ, ಆಮ್ಲಜನಕ ಪೂರೈಕೆಗೆ ರೋಹಿಣಿ ಸಿಂಧೂರಿ ತಡೆ ಹಿಡಿದಿದ್ದರು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದೆ. 24 ಜನರ ಸಾವಿನಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ನಡೆ, ನಿರ್ಲಕ್ಷ್ಯ ಧೋರಣೆ ಬಗ್ಗೆ ಹೈಕೋರ್ಟ್ಗೆ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖವಾಗಿದೆ.
ಚಾಮರಾಜನಗರ ಕೊವಿಡ್ ಕೇರ್ ಸೆಂಟರ್ನಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ; ಸೋಂಕಿತರ ಆರೋಪ ಮೆಡಿಕಲ್ ಕಾಲೇಜಿನಲ್ಲಿರುವ ಕೊವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆ ಆರೋಪ ಕೇಳಿಬಂದಿದೆ. ಕೊರೊನಾ ಸೋಂಕಿತರಿಗೆ ಸರಿಯಾಗಿ ಊಟ, ಉಪಾಹಾರ, ಔಷಧವನ್ನು ಕೊಡದೆ ಸತಾಯಿಸುತ್ತಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ವೈದ್ಯರ ವಿರುದ್ಧ ಸೋಂಕಿತರು ಆರೋಪಿಸುತ್ತಿದ್ದಾರೆ. 100ಕ್ಕೂ ಹೆಚ್ಚು ಸೋಂಕಿತರಿರುವ ಕೊವಿಡ್ ಕೇರ್ ಸೆಂಟರ್ಗೆ ಕಳೆದ 1 ವಾರದಿಂದ ವೈದ್ಯರು ಬರುತ್ತಿಲ್ಲ. ನರ್ಸ್ಗಳು ಸೋಂಕಿತರಿಗೆ ಔಷಧಿ ನೀಡುತ್ತಿಲ್ಲ ಎಂದು ಕೊವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ
ಕೊರೊನಾ ಲಸಿಕೆ ಹಾಕಿಸಿಕೊಳ್ಳಲು 7 ಕಿ.ಮೀ. ನಡೆದುಕೊಂಡು ಬಂದ ವ್ಯಕ್ತಿ, ಆದರೆ ಲಸಿಕೆನೇ ಇಲ್ಲ ಎಂದ ಸಿಬ್ಬಂದಿ
ಕೊವಿಡ್ ಲಸಿಕಾ ಮಾರ್ಗಸೂಚಿ ಬದಲಾವಣೆಗೆ ಎನ್ಟಿಎಜಿಐ ಶಿಫಾರಸು
(Mysore District Collector Rohini Sindhuri has been given a clean chit)