ಮೈಸೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದವನಿಗೆ 20 ವರ್ಷ ಕಠಿಣ ಶಿಕ್ಷೆ, ₹52 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೋ ನ್ಯಾಯಾಲಯ ಆದೇಶ ಪ್ರಕಟಿಸಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಈಗ ತೀರ್ಪು ಸಿಕ್ಕಿದೆ. ಆರೋಪಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ.
ಕುಡಿದ ಮತ್ತಿನಲ್ಲಿ ಚಾಕು ಇರಿದಿದ್ದ ಆರೋಪಿ ಅರೆಸ್ಟ್
ಬೆಂಗಳೂರು: ಕುಡಿದ ಮತ್ತಿನಲ್ಲಿ ಜಗಳವಾಡಿ ವ್ಯಕ್ತಿಗೆ ಚಾಕು ಇರಿದಿದ್ದ ಆರೋಪಿಯನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಲಿಯಮ್ಸ್ ಪ್ರಕಾಶ್ ಬಂಧಿತ ಆರೋಪಿ. ಈತ ಅ.17ರಂದು ಈಜಿಪುರ ಚಾರ್ವಿ ಚರ್ಚ್ ಬಳಿಯ ಯೋಗೇಶ್ ಎಂಬ ಯುವಕನಿಗೆ ಚಾಕು ಇರಿದಿದ್ದ.
ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳವಾಗಿತ್ತು. ಈ ವೇಳೆ ಆರೋಪಿ ಯುವಕನಿಗೆ ಚಾಕು ಇರಿದಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ವಿವೇಕನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಈ ಹಿಂದೆ ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನ.10 ರಂದು ಚರ್ಚ್ ನಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಬೆದರಿಕೆ ಹಾಕಿದ್ದ ಆರೋಪವಿದೆ. ಸದ್ಯ ಆರೋಪಿಯನ್ನ ಬಂಧಿಸಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಐಷಾರಾಮಿ ಬೈಕ್ ಓಡಿಸಿ ಬೇಬಿ ಬಂಪ್, ಡಿಫ್ರೆಂಟ್ ಫೋಸ್ ಕೊಟ್ಟ ಮಾಜಿ ಮಿಸ್ ಕರ್ನಾಟಕ ಬೆಡಗಿ
ಅವಳಿ ಚಿರತೆಗಳು ಪ್ರತ್ಯಕ್ಷ
ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ನಿರವುಗಲ್ ಉಲ್ಕಲಮ್ಮನ ಬೆಟ್ಟದಲ್ಲಿ ಅವಳಿ ಚಿರತೆಗಳು ಪ್ರತ್ಯಕ್ಷವಾಗಿವೆ. ಚಿರತೆಗಳನ್ನ ಕಂಡು ಬೆಟ್ಟಕ್ಕೆ ಭೇಟಿನೀಡಿದ್ದ ಭಕ್ತರು ಭಯಬೀತರಾಗಿದ್ದಾರೆ. ಕೂಡಲೇ ಚಿರತೆಗಳನ್ನ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ. ಉಲ್ಕಲಮ್ಮನ ದೇವಾಲಯಕ್ಕೆ ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದರ್ಶನ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಕೂಡಲೇ ಅರಣ್ಯ ಇಲಾಖೆಯವರು ಇತ್ತ ಗಮನಹರಿಸಿ ಚಿರತೆಗಳನ್ನ ಸೆರೆ ಹಿಡಿಯಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಲಾರಿ, ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ-ಇಬ್ಬರು ಸಾವು
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಬಳಿ ಲಾರಿ, ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಮಹಾರಾಷ್ಟ್ರದ ಉಮರ್ಗಾ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:02 am, Wed, 19 October 22