AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು

ರಾಜ್ಯದಲ್ಲಿ ಧರ್ಮ‌ ದಂಗಲ್ ಜೋರಾಗಿದೆ. ಟಿಪ್ಪು, ಹಿಜಾಬ್ ಹಲಾಲ್ ಹೆಸರಿನಲ್ಲಿ ಹಿಂದೂ ಮುಸ್ಲಿಂ ಸಂಘರ್ಷಗಳು ನಡೆಯುತ್ತಿವೆ. ಪರ ವಿರೋಧಗಳ ಭರಾಟೆ ಜೋರಾಗಿದೆ. ಇದರ ಬೆನ್ನಲ್ಲೇ ಅಪರೂಪಕ್ಕೆ ಹಿಂದೂ ಮುಸ್ಲಿಂ ಭಾವೈಕ್ಯತೆ ಮೆರೆಯುವ ಕಾರ್ಯವೊಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು
ಹಿಂದೂ ಮಹಿಳೆಯ ಶವ ಹೊತ್ತು ಸಾಗುವ ಮೂಲಕ ಸೌಹಾರ್ದತೆ ಮೆರೆದ ಮುಸ್ಲಿಮರು
TV9 Web
| Edited By: Rakesh Nayak Manchi|

Updated on:Nov 13, 2022 | 1:13 PM

Share

ಮೈಸೂರು: ಹಿಂದೂ ಮಹಿಳೆಯ ಶವ ಹೊತ್ತು ಸಾಗಿದ ಮುಸ್ಲಿಮರು ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ. ಇಂತಹ ಮಾನವೀಯ ಘಟನೆ ಮಂಡಿ ಮೊಹಲ್ಲಾದಲ್ಲಿರುವ ಸುನ್ನಿ ಚೌಕ ಪ್ರದೇಶದಲ್ಲಿ ನಡೆದಿದೆ. ಶಿವಮ್ಮ ಎಂಬ ಮಹಿಳೆ ಸುಮಾರು 30 ವರ್ಷದಿಂದಲೂ ಇಲ್ಲೇ ಗುಡಿಸಲೊಂದರಲ್ಲಿ ವಾಸಿಸುತ್ತಿದ್ದರು. ಆಕೆಗೆ ಮಗ, ಮಗಳು ಇದ್ದರೂ ಅಲ್ಲಿಗೆ ಹೋಗದೇ ಗುಡಿಸಲಿನಲ್ಲಿಯೇ ವಾಸಿಸುತ್ತಿದ್ದರು. ಮಗ ಮಾತ್ರ ಕೆಲವೊಮ್ಮೆ ಬಂದು ತಾಯಿಯನ್ನು ಮಾತನಾಡಿಸಿ ಹೊಗುತ್ತಿದ್ದ. ಆದರೆ ಶುಕ್ರವಾರದಂದು ಶಿವಮ್ಮ ಮೃತಪಟ್ಟಿದ್ದರು. ವಿಷಯ ತಿಳಿದ ಒಂದಷ್ಟು ಮುಸ್ಲಿಮರು ಶಿವಮ್ಮ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ.

ಶಿವಮ್ಮ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸುತ್ತಮುತ್ತಲಿನ ಮುಸ್ಲಿಮರು ಅಂತ್ಯಸಂಸ್ಕಾರ ನೆರವೇರಿಸಲು ಮುಂದೆಬಂದಿದ್ದಾರೆ. ಸುನ್ನಿ ಚೌಕದಿಂದ ಬನ್ನಿಮಂಟಪದ ಜೋಡಿ ತೆಂಗಿನ ಮರ ರುದ್ರಭೂಮಿಗೆ ಪಾರ್ಥಿವ ಶರೀರವನ್ನು‌ ಮೆರವಣಿಗೆ ಮೂಲಕ ತೆಗೆದುಕೊಂಡು ಬಂದಿದ್ದಾರೆ. ಈ ವೇಳೆ ಮುಸ್ಲಿಂ ಬಾಂಧವರೇ ಶವಕ್ಕೆ ಹೆಗಲು ಕೊಟ್ಟಿದ್ದಾರೆ. ರುದ್ರಭೂಮಿಯಲ್ಲಿ ಶಿವಮ್ಮಳ ಮಗ, ಮಗಳು, ಸೊಸೆ ಹಾಗೂ ಮೊಮ್ಮಕ್ಕಳು ವಿಧಿವತ್ತಾಗಿ ಪೂಜೆ ಸಲ್ಲಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮುಸ್ಲಿಮರು ಕೊನೆವರೆಗೂ ಅಲ್ಲೇ ಇದ್ದು ಎಲ್ಲಾ ನೆರವನ್ನು ನೀಡಿದ್ದಾರೆ. ಶಿವಮ್ಮಳ ಕೊನೆ‌ ಆಸೆ ಸಹಾ ಇದೇ ಆಗಿತ್ತಂತೆ. ಅವರು ಬದುಕಿದ್ದಾಗಲೇ ಮುಸ್ಲಿಮರೇ ನನ್ನ ಅಂತ್ಯ ಸಂಸ್ಕಾರ ಮಾಡಬೇಕು ಅಂತಾ ಮನವಿ ಮಾಡಿದ್ದರಂತೆ.

ಸದ್ಯ ಎಲ್ಲೆಡೆ ಧರ್ಮ ದಂಗಲ್ ಜೋರಾಗಿದೆ. ಜಾತಿ ಧರ್ಮದ ಹೆಸರಿನಲ್ಲಿ ರಾಗ ದ್ವೇಷದಿಂದ ಹೊಡೆದಾಟ ನಡೆಯುತ್ತಿದೆ. ಇಂತಹ ಕಾಲಘಟ್ಟದಲ್ಲಿ ಈ ರೀತಿಯ ಸಾಮರಸ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಕಾರ್ಯಕ್ರಮಗಳು ಮತ್ತಷ್ಟು ಆಗಲಿ. ಎಲ್ಲೆಡೆ ಶಾಂತಿ ನೆಮ್ಮದಿ ನೆಲಸಲಿ. ಇದು ಎಲ್ಲರಿಗೂ ಮಾದರಿಯಾಗಲಿ ಅನ್ನೋದೆ ಎಲ್ಲರ ಆಶಯ.

ವರದಿ: ರಾಮ್, ಟಿವಿ9 ಮೈಸೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:12 pm, Sun, 13 November 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ