ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ

Prajwal Revanna Sexual Assault Case: ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಸಂತ್ರಸ್ತೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಸಂಬಂಧ ಭವಾನಿ ರೇವಣ್ಣ ಅವರ ಸಂಬಂಧಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಂಬಂಧಿಯ ಬಂಧನ
ಭವಾನಿ ರೇವಣ್ಣ, ಹೆಚ್​ಡಿ ರೇವಣ್ಣ
Follow us
TV9 Web
| Updated By: ವಿವೇಕ ಬಿರಾದಾರ

Updated on:May 04, 2024 | 9:57 AM

ಬೆಂಗಳೂರು, ಮೇ 04: ಹಾಸನದ ಸಂಸದ ಪ್ರಜ್ವಲ್ ರೇವಣ್ಣ (Prajwal video case) ಅಶ್ಲೀಲ ವಿಡಿಯೋ ಪ್ರಕರಣ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಪ್ರಜ್ವಲ್ ತಂದೆ, ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು (HD Revanna) ಕೂಡ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಕೆಆರ್​ ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavni Revanna) ಅವರ ಸಂಬಂಧಿಯೊಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಇದು ಪ್ರಜ್ವಲ್​ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದೆ.

ನಾಪತ್ತೆಯಾದ ಸಂತ್ರಸ್ತೆಯ ಪುತ್ರ ಶುಕ್ರವಾರ (ಮೇ 03) ರಂದು ಕೆಆರ್​ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೆಚ್​ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಸಂತ್ರಸ್ತೆಯ ಪತ್ತೆಗೆ ವಿಶೇಷ ತನಿಖಾ ದಳ (SIT) ಶುಕ್ರವಾರ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಈ ಸ್ಥಳದಲ್ಲಿ ಮಹಿಳೆ ಇದ್ದಾಳೆಯೇ ಅಂತ ಶೋಧ ನಡೆಸಿತ್ತು.

ಇದನ್ನೂ ಓದಿ: ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವುದು ಬಲು ಸುಲಭ: ಸಿದ್ದರಾಮಯ್ಯಗೆ ಕಾನೂನು ಪಾಠ ಮಾಡಿದ ಅಣ್ಣಾಮಲೈ

ಎಸ್​ಐಟಿ ತಂಡಗಳು ಗುರುವಾರ ತಡರಾತ್ರಿಯಿಂದಲೇ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ವಿವಿಧಡೆ ಪರಿಶೀಲನೆ ನಡೆಸಿದ್ದವು. ಇನ್ನು ಪ್ರಕರಣ ಸಂಬಂಧ ಇಂದು ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೆ ಅಧಿಕಾರಿಗಳು ನೋಟಿಸ್​ ನೀಡಿದ್ದಾರೆ.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

ಈ ಮಧ್ಯೆ, ಇಂದು ಸಂಜೆಯೊಳಗೆ ವಿಚಾರಣೆಗೆ ಹಾಜರಾಗಲು ರೇವಣ್ಣಗೆ ಎಸ್​​​ಐಟಿ ಎರಡನೇ ನೋಟಿಸ್ ನೀಡಿದೆ. ಇಂದು ನಿರೀಕ್ಷಣಾ ಜಾಮೀನು ಸಿಕ್ಕಿದರೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ರೇವಣ್ಣ ಮನಗೆ ಎಸ್​ಐಟಿ ಭೇಟಿ

ಹೊಳೆನರಸೀಪುರದ ಹೆಚ್​ಡಿ ರೇವಣ್ಣ ಅವರ ಮನೆಗೆ ಎಸ್​ಐಟಿ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮನೆಯಲ್ಲಿದ್ದ ಭವಾನಿ ರೇವಣ್ಣ ಜೊತೆ  ಚರ್ಚೆ ನಡೆಸಿದ್ದಾರೆ. ಬೆಳಗ್ಗೆ 10 ಗಂಟೆ ಬಳಿಕ ಎಸ್​​ಐಟಿ ಸ್ಥಳ ಮಹಜರು ಮಾಡಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sat, 4 May 24

ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್